ಅಮೆರಿಕಾ ರಾಷ್ಟ್ರೀಯ ಹೆದ್ದಾರಿಗಳಂತಹ ಗುಣ ಮಟ್ಟ ಹೊಂದಲಿವೆ ಭಾರತದ ರಾಷ್ಟ್ರೀಯ ಹೆದ್ದಾರಿಗಳು

ಭಾರತದ ರಾಷ್ಟ್ರೀಯ ಹೆದ್ದಾರಿಗಳು ಶೀಘ್ರದಲ್ಲಿಯೇ ಗುಣ ಮಟ್ಟದಲ್ಲಿ ಅಮೆರಿಕಾದ ರಾಷ್ಟ್ರೀಯ ಹೆದ್ದಾರಿಗಳಿಗೆ ಸರಿ ಸಮಾನವಾಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಮೆರಿಕಾ ರಾಷ್ಟ್ರೀಯ ಹೆದ್ದಾರಿಗಳಂತಹ ಗುಣ ಮಟ್ಟ ಹೊಂದಲಿವೆ ಭಾರತದ ರಾಷ್ಟ್ರೀಯ ಹೆದ್ದಾರಿಗಳು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತದಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ಅತಿವೇಗದಲ್ಲಿ ನಿರ್ಮಿಸುತ್ತಿದೆ ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ನಿತಿನ್ ಗಡ್ಕರಿ, ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತದಲ್ಲಿ ರಾಷ್ಟ್ರೀಯ ಹೆದ್ದಾರಿಗಳು ವೇಗವಾಗಿ ನಿರ್ಮಾಣವಾಗುತ್ತಿವೆ. ಮುಂದಿನ 3 ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಹೆದ್ದಾರಿಗಳು ಗುಣಮಟ್ಟದಲ್ಲಿ ಅಮೆರಿಕಾದ ರಾಷ್ಟ್ರೀಯ ಹೆದ್ದಾರಿಗಳ ಗುಣಮಟ್ಟಕ್ಕೆ ಸಮನಾಗಿರುತ್ತೇವೆ ಎಂದು ನಾನು ಭಾವಿಸುತ್ತೇನೆ.

ಅಮೆರಿಕಾ ರಾಷ್ಟ್ರೀಯ ಹೆದ್ದಾರಿಗಳಂತಹ ಗುಣ ಮಟ್ಟ ಹೊಂದಲಿವೆ ಭಾರತದ ರಾಷ್ಟ್ರೀಯ ಹೆದ್ದಾರಿಗಳು

ಒಂದು ಕಾಲದಲ್ಲಿ ನಾವು ದಿನಕ್ಕೆ ಕೇವಲ 2 ಕಿ.ಮೀ ರಸ್ತೆಗಳನ್ನು ನಿರ್ಮಿಸುತ್ತಿದ್ದೆವು. ಆದರೆ ಈಗ ದಿನಕ್ಕೆ 38 ಕಿ.ಮೀ ರಸ್ತೆಗಳನ್ನು ನಿರ್ಮಿಸುತ್ತಿದ್ದೇವೆ ಎಂದು ಅವರು ಹೇಳಿದರು. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಹೆಚ್‌ಎಐ ) ಇತ್ತೀಚೆಗೆ ಕಟ್ಟು ನಿಟ್ಟಿನ ಆದೇಶವೊಂದನ್ನು ಹೊರಡಿಸಿದೆ.

ಅಮೆರಿಕಾ ರಾಷ್ಟ್ರೀಯ ಹೆದ್ದಾರಿಗಳಂತಹ ಗುಣ ಮಟ್ಟ ಹೊಂದಲಿವೆ ಭಾರತದ ರಾಷ್ಟ್ರೀಯ ಹೆದ್ದಾರಿಗಳು

ಈ ಆದೇಶದ ಅನ್ವಯ ರಾಷ್ಟ್ರೀಯ ಹೆದ್ದಾರಿ ಕೆಲಸಗಳನ್ನು ನಡೆಸುವಾಗ, ಅದನ್ನು ಡ್ರೋನ್‌ಗಳ ಮೂಲಕ ಕಡ್ಡಾಯವಾಗಿ ವೀಡಿಯೊ ಚಿತ್ರೀಕರಣ ಮಾಡಬೇಕಾಗಿದೆ. ರಾಷ್ಟ್ರೀಯ ಹೆದ್ದಾರಿಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಹಾಗೆಯೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿದ ನಂತರವೂ ವೀಡಿಯೊ ರೆಕಾರ್ಡಿಂಗ್ ಕೆಲಸವನ್ನು ಮುಂದುವರಿಸಬೇಕು.

ಅಮೆರಿಕಾ ರಾಷ್ಟ್ರೀಯ ಹೆದ್ದಾರಿಗಳಂತಹ ಗುಣ ಮಟ್ಟ ಹೊಂದಲಿವೆ ಭಾರತದ ರಾಷ್ಟ್ರೀಯ ಹೆದ್ದಾರಿಗಳು

ನಿರ್ವಹಣೆ ಕೆಲಸವನ್ನು ಮೇಲ್ವಿಚಾರಣೆ ಮಾಡಲು ಈ ಆದೇಶವನ್ನು ಹೊರಡಿಸಲಾಗಿದೆ. ಸಚಿವ ನಿತಿನ್ ಗಡ್ಕರಿ ಪ್ರಕಾರ, ಭಾರತದಲ್ಲಿ ಗುಣಮಟ್ಟದ ರಾಷ್ಟ್ರೀಯ ಹೆದ್ದಾರಿಗಳನ್ನು ವೇಗವಾಗಿ ನಿರ್ಮಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಈ ವರ್ಷ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಉತ್ತಮ ಸಾಧನೆಯನ್ನು ಮಾಡಿದೆ.

ಅಮೆರಿಕಾ ರಾಷ್ಟ್ರೀಯ ಹೆದ್ದಾರಿಗಳಂತಹ ಗುಣ ಮಟ್ಟ ಹೊಂದಲಿವೆ ಭಾರತದ ರಾಷ್ಟ್ರೀಯ ಹೆದ್ದಾರಿಗಳು

ಅದರಂತೆ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೇವಲ 18 ಗಂಟೆಗಳಲ್ಲಿ 25.54 ಕಿ.ಮೀ ಏಕ ಪಥ ರಸ್ತೆ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಇದು ವಿಶ್ವದಾಖಲೆ ಎಂಬುದು ಗಮನಾರ್ಹ. ಇದು ನಿಜಕ್ಕೂ ಭಾರತೀಯರೆಲ್ಲರೂ ಹೆಮ್ಮೆ ಪಡುವಂತಹ ಸಾಧನೆಯಾಗಿದೆ.

ಅಮೆರಿಕಾ ರಾಷ್ಟ್ರೀಯ ಹೆದ್ದಾರಿಗಳಂತಹ ಗುಣ ಮಟ್ಟ ಹೊಂದಲಿವೆ ಭಾರತದ ರಾಷ್ಟ್ರೀಯ ಹೆದ್ದಾರಿಗಳು

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಪ್ರಕ್ರಿಯೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗಾಗಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಅಮೆರಿಕಾ ರಾಷ್ಟ್ರೀಯ ಹೆದ್ದಾರಿಗಳಂತಹ ಗುಣ ಮಟ್ಟ ಹೊಂದಲಿವೆ ಭಾರತದ ರಾಷ್ಟ್ರೀಯ ಹೆದ್ದಾರಿಗಳು

ಭಾರತದಲ್ಲಿ ಕೇಂದ್ರ ಸರ್ಕಾರ ಹಾಗೂ ವಿವಿಧ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಲು ಹಾಗೂ ವಾಯು ಮಾಲಿನ್ಯ ಸಮಸ್ಯೆಯನ್ನು ಬಗೆ ಹರಿಸಲು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುತ್ತಿದೆ.

ಅಮೆರಿಕಾ ರಾಷ್ಟ್ರೀಯ ಹೆದ್ದಾರಿಗಳಂತಹ ಗುಣ ಮಟ್ಟ ಹೊಂದಲಿವೆ ಭಾರತದ ರಾಷ್ಟ್ರೀಯ ಹೆದ್ದಾರಿಗಳು

ಆದರೆ ಬಹುತೇಕ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಅಗತ್ಯವಾಗಿರುವ ಚಾರ್ಜಿಂಗ್ ಕೇಂದ್ರಗಳು ಕಡಿಮೆ ಸಂಖ್ಯೆಯಲ್ಲಿರುವುದೇ ಇದಕ್ಕೆ ಪ್ರಮುಖ ಕಾರಣ.

ಅಮೆರಿಕಾ ರಾಷ್ಟ್ರೀಯ ಹೆದ್ದಾರಿಗಳಂತಹ ಗುಣ ಮಟ್ಟ ಹೊಂದಲಿವೆ ಭಾರತದ ರಾಷ್ಟ್ರೀಯ ಹೆದ್ದಾರಿಗಳು

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿವೆ. ಈಗ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಸಹ ಎಲೆಕ್ಟ್ರಿಕ್ ವಾಹನಗಳಿಗೆ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಮುಂದಾಗಿದೆ.

ಅಮೆರಿಕಾ ರಾಷ್ಟ್ರೀಯ ಹೆದ್ದಾರಿಗಳಂತಹ ಗುಣ ಮಟ್ಟ ಹೊಂದಲಿವೆ ಭಾರತದ ರಾಷ್ಟ್ರೀಯ ಹೆದ್ದಾರಿಗಳು

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕೈಗೊಳ್ಳುತ್ತಿರುವ ವಿವಿಧ ಕ್ರಮಗಳಿಂದಾಗಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ನಿಧಾನವಾಗಿ ಹೆಚ್ಚಾಗುತ್ತಿದೆ. ಅದರಲ್ಲೂ ಪೆಟ್ರೋಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

ಅಮೆರಿಕಾ ರಾಷ್ಟ್ರೀಯ ಹೆದ್ದಾರಿಗಳಂತಹ ಗುಣ ಮಟ್ಟ ಹೊಂದಲಿವೆ ಭಾರತದ ರಾಷ್ಟ್ರೀಯ ಹೆದ್ದಾರಿಗಳು

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ಸಂಗ್ರಹವಾಗಿರುವ ಬುಕ್ಕಿಂಗ್‌ಗಳ ಸಂಖ್ಯೆಯು ಸಾರ್ವಜನಿಕರು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಎಷ್ಟು ಇಷ್ಟ ಪಡುತ್ತಾರೆ ಎಂಬುದಕ್ಕೆ ಸಾಕ್ಷಿಯಾಗಿದೆ. ಓಲಾ ಕಂಪನಿಯು ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ಬುಕ್ಕಿಂಗ್ ಆರಂಭಿಸಿದ ಕೇವಲ 24 ಗಂಟೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್‌ಗಳನ್ನು ಸಂಗ್ರಹಿಸಿದೆ.

ಅಮೆರಿಕಾ ರಾಷ್ಟ್ರೀಯ ಹೆದ್ದಾರಿಗಳಂತಹ ಗುಣ ಮಟ್ಟ ಹೊಂದಲಿವೆ ಭಾರತದ ರಾಷ್ಟ್ರೀಯ ಹೆದ್ದಾರಿಗಳು

ಓಲಾ ಎಲೆಕ್ಟ್ರಿಕ್‌ ಕಂಪನಿಯ ಇತ್ತೀಚಿನ ಮಾಹಿತಿಯ ಪ್ರಕಾರ, ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ಸಾವಿರಕ್ಕೂ ಹೆಚ್ಚು ನಗರಗಳಿಂದ ಬುಕ್ಕಿಂಗ್‌ ಸಂಗ್ರಹವಾಗಿವೆ. ಬಹು ನಿರೀಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಭಾರತದಲ್ಲಿ ಆಗಸ್ಟ್ 15 ರಿಂದ ಮಾರಾಟವಾಗಲಿದೆ.

Most Read Articles

Kannada
English summary
Indian national highways to have american national highways standard by 2024 details
Story first published: Monday, August 9, 2021, 18:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X