160 ರೂಪಾಯಿ ಬೆಲೆಯ ಪ್ರೀಮಿಯಂ ಪೆಟ್ರೋಲ್ ಮಾರಾಟಕ್ಕೆ ಚಾಲನೆ ನೀಡಿದ ಇಂಡಿಯನ್ ಆಯಿಲ್

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದಾಗಿ ವಾಹನ ಸವಾರರು ಹೈರಾಣಾಗಿರುವುದು ಸುಳ್ಳಲ್ಲ. ಇನ್ನೂ ಕೆಲವು ವಾಹನ ಸವಾರರು ತಮ್ಮ ವಾಹನಗಳನ್ನು ಹೊರ ತೆಗೆಯಲು ಹಿಂದೇಟು ಹಾಕುತ್ತಿದ್ದಾರೆ.

160 ರೂಪಾಯಿ ಬೆಲೆಯ ಪ್ರೀಮಿಯಂ ಪೆಟ್ರೋಲ್ ಮಾರಾಟಕ್ಕೆ ಚಾಲನೆ ನೀಡಿದ ಇಂಡಿಯನ್ ಆಯಿಲ್

ಪೆಟ್ರೋಲ್ ಬೆಲೆ 100 ರೂಪಾಯಿ ಆಸುಪಾಸಿನಲ್ಲಿರುವಾಗಲೇ ವಾಹನ ಸವಾರರು ತಮ್ಮ ವಾಹನಗಳಿಗೆ ಪೆಟ್ರೋಲ್ ಹಾಕಿಸಲು ಹಿಂದೆ ಮುಂದೆ ನೋಡುವಂತಾಗಿದೆ.ಈಗ ಹೈದರಾಬಾದ್‌ನ ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಕೆಲವು ಆಯ್ದ ಪೆಟ್ರೋಲ್ ಬಂಕ್'ಗಲ್ಲಿ ಪ್ರೀಮಿಯಂ ಪೆಟ್ರೋಲ್ ಪರಿಚಯಿಸಲಾಗಿದೆ.

160 ರೂಪಾಯಿ ಬೆಲೆಯ ಪ್ರೀಮಿಯಂ ಪೆಟ್ರೋಲ್ ಮಾರಾಟಕ್ಕೆ ಚಾಲನೆ ನೀಡಿದ ಇಂಡಿಯನ್ ಆಯಿಲ್

ಈ ಪ್ರೀಮಿಯಂ ದರ್ಜೆಯ ಪೆಟ್ರೋಲ್ ಎಂಜಿನ್‌ನ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ಜೊತೆಗೆ ವಿಶಿಷ್ಟ ರೀತಿಯ ಚಾಲನಾ ಅನುಭವವನ್ನು ನೀಡುತ್ತದೆ ಎಂದು ಹೇಳಲಾಗಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

160 ರೂಪಾಯಿ ಬೆಲೆಯ ಪ್ರೀಮಿಯಂ ಪೆಟ್ರೋಲ್ ಮಾರಾಟಕ್ಕೆ ಚಾಲನೆ ನೀಡಿದ ಇಂಡಿಯನ್ ಆಯಿಲ್

ಇಂಡಿಯನ್ ಆಯಿಲ್ ಕಾರ್ಪೊರೇಷನ್ 100 ಆಕ್ಟೇನ್ ಪ್ರೀಮಿಯಂ ಎಂಬ ಹೆಸರಿನ ಪೆಟ್ರೋಲ್ ಅನ್ನು ಹೈದರಾಬಾದ್‌ನಲ್ಲಿ ಮಾರಾಟಕ್ಕೆ ಬಿಡುಗಡೆಗೊಳಿಸಿದೆ. ಈ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 160 ರೂಪಾಯಿಗಳಿಗೆ ನಿಗದಿಪಡಿಸಲಾಗಿದೆ.

160 ರೂಪಾಯಿ ಬೆಲೆಯ ಪ್ರೀಮಿಯಂ ಪೆಟ್ರೋಲ್ ಮಾರಾಟಕ್ಕೆ ಚಾಲನೆ ನೀಡಿದ ಇಂಡಿಯನ್ ಆಯಿಲ್

ಈ ವಿಶ್ವ ದರ್ಜೆಯ ಪ್ರೀಮಿಯಂ ಪೆಟ್ರೋಲ್ ಅನ್ನು ಈಗಾಗಲೇ ದೆಹಲಿ, ಗುರುಗ್ರಾಮ, ನೋಯ್ಡಾ, ಆಗ್ರಾ, ಜೈಪುರ, ಚಂಡೀಗಢ, ಲುಧಿಯಾನ, ಮುಂಬೈ, ಪುಣೆ ಹಾಗೂ ಅಹಮದಾಬಾದ್‌ನಲ್ಲಿ ಬಿಡುಗಡೆಗೊಳಿಸಲಾಗಿದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

160 ರೂಪಾಯಿ ಬೆಲೆಯ ಪ್ರೀಮಿಯಂ ಪೆಟ್ರೋಲ್ ಮಾರಾಟಕ್ಕೆ ಚಾಲನೆ ನೀಡಿದ ಇಂಡಿಯನ್ ಆಯಿಲ್

ಈಗ ಈ ಪ್ರೀಮಿಯಂ ಪೆಟ್ರೋಲ್ ಮಾರಾಟವನ್ನು ಹೈದರಾಬಾದ್‌ನಲ್ಲೂ ಆರಂಭಿಸಲಾಗಿದೆ. ಈ ಪ್ರೀಮಿಯಂ ದರ್ಜೆಯ ಪೆಟ್ರೋಲ್‌ನ ಬೆಲೆಯನ್ನು ಎಲ್ಲಾ ನಗರಗಳಲ್ಲಿ ಲೀಟರ್‌ಗೆ 160 ರೂಪಾಯಿಗಳಿಗೆ ನಿಗದಿಪಡಿಸಲಾಗಿದೆ.

160 ರೂಪಾಯಿ ಬೆಲೆಯ ಪ್ರೀಮಿಯಂ ಪೆಟ್ರೋಲ್ ಮಾರಾಟಕ್ಕೆ ಚಾಲನೆ ನೀಡಿದ ಇಂಡಿಯನ್ ಆಯಿಲ್

ಈ ಪ್ರೀಮಿಯಂ ಪೆಟ್ರೋಲ್ ಗ್ರಾಹಕರಿಂದ ಹೆಚ್ಚಿನ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ. ಈ ಬಗ್ಗೆ ಮಾತನಾಡಿರುವ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಶನ್ ಆಫ್ ಇಂಡಿಯಾ ಜಂಟಿ ಕಾರ್ಯದರ್ಶಿ ರಾಜೀವ್ ಅಮರಮ್, 100 ಆಕ್ಟೇನ್ ಪ್ರೀಮಿಯಂ ಪೆಟ್ರೋಲಿಗೆ ಗ್ರಾಹಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

160 ರೂಪಾಯಿ ಬೆಲೆಯ ಪ್ರೀಮಿಯಂ ಪೆಟ್ರೋಲ್ ಮಾರಾಟಕ್ಕೆ ಚಾಲನೆ ನೀಡಿದ ಇಂಡಿಯನ್ ಆಯಿಲ್

ಪ್ರತಿ ದಿನ 200 ಲೀಟರ್ ನಿಂದ 300 ಲೀಟರ್ 100 ಆಕ್ಟೇನ್ ಪ್ರೀಮಿಯಂ ಪೆಟ್ರೋಲ್ ಮಾರಾಟವಾಗುತ್ತಿವೆ ಎಂದು ಹೇಳಿದರು. ಎಂಜಿನ್ ಬಾಳಿಕೆಗಾಗಿ ಹಾಗೂ ಉತ್ತಮ ಕಾರ್ಯಕ್ಷಮತೆಗಾಗಿ ಪ್ರೀಮಿಯಂ ಪೆಟ್ರೋಲ್'ಗೆ ಬದಲಾಗುವುದು ಉತ್ತಮವೆಂದು ಅವರು ಹೇಳಿದರು.

160 ರೂಪಾಯಿ ಬೆಲೆಯ ಪ್ರೀಮಿಯಂ ಪೆಟ್ರೋಲ್ ಮಾರಾಟಕ್ಕೆ ಚಾಲನೆ ನೀಡಿದ ಇಂಡಿಯನ್ ಆಯಿಲ್

ಬಿಎಸ್ - 6 ಮಾಲಿನ್ಯ ನಿಯಮಗಳನ್ನು ಪಾಲಿಸುವ ವಾಹನಗಳಿಗೆ ಈ ಪ್ರೀಮಿಯಂ ದರ್ಜೆಯ ಪೆಟ್ರೋಲ್ ಹೆಚ್ಚು ಸೂಕ್ತವಾಗಿದೆ ಎಂದು ವಾಹನ ತಜ್ಞರು ಹೇಳುತ್ತಾರೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

160 ರೂಪಾಯಿ ಬೆಲೆಯ ಪ್ರೀಮಿಯಂ ಪೆಟ್ರೋಲ್ ಮಾರಾಟಕ್ಕೆ ಚಾಲನೆ ನೀಡಿದ ಇಂಡಿಯನ್ ಆಯಿಲ್

ತಜ್ಞರ ಪ್ರಕಾರ, ಈ ಪ್ರೀಮಿಯಂ ಪೆಟ್ರೋಲ್ ಆಕ್ಸಲರೇಷನ್ ಹೆಚ್ಚಿಸಲು ನೆರವಾಗುತ್ತದೆ. ಜೊತೆಗೆ ಕಡಿಮೆ ಮಾಲಿನ್ಯವನ್ನು ಹೊರಸೂಸುವುದರಿಂದ ಪರಿಸರ ಸ್ನೇಹಿಯಾಗಿದೆ. ಈ ಇಂಧನವು ಹೈ ಎಂಡ್ ಹಾಗೂ ಆಮದು ಮಾಡಿಕೊಂಡ ವಾಹನಗಳಿಗೆ ಸೂಕ್ತವಾಗಿದೆ.

160 ರೂಪಾಯಿ ಬೆಲೆಯ ಪ್ರೀಮಿಯಂ ಪೆಟ್ರೋಲ್ ಮಾರಾಟಕ್ಕೆ ಚಾಲನೆ ನೀಡಿದ ಇಂಡಿಯನ್ ಆಯಿಲ್

ಈ ಇಂಧನವು ದುಬಾರಿ ವಾಹನಗಳಿಗೆ ಸೂಕ್ತ ಎಂಬುದು ತಜ್ಞರು ಅಭಿಪ್ರಾಯ. ಭಾರತದಲ್ಲಿ ಈ ಹಿಂದೆ ಸೂಪರ್ ಬೈಕ್ ಹಾಗೂ ಸೂಪರ್ ಕಾರುಗಳು ಅಪರೂಪವಾಗಿದ್ದವು. ಆದರೆ ಈಗ ದೇಶಿಯ ಮಾರುಕಟ್ಟೆಯಲ್ಲಿ ಸೂಪರ್ ಬೈಕ್ ಹಾಗೂ ಸೂಪರ್ ಕಾರುಗಳ ಮಾರಾಟವು ಹೆಚ್ಚುತ್ತಿದೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Indian Oil Corporation launches premium petrol in Hyderabad priced at Rs.160 per liter. Read in Kannada.
Story first published: Monday, March 1, 2021, 10:03 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X