ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಜೈಲು ಸೇರಿದ 700ಕ್ಕೂ ಹೆಚ್ಚು ಜನ

ಕಳೆದ ಶುಕ್ರವಾರದಿಂದ ಮಧ್ಯಪ್ರದೇಶದ ಇಂದೋರ್‌ನಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ಮನೆಯಿಂದ ಹೊರ ಬರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಜೈಲು ಸೇರಿದ 700ಕ್ಕೂ ಹೆಚ್ಚು ಜನ

ಇದರಿಂದಾಗಿ ಇಂದೋರ್ ನಗರವು ಮರುಭೂಮಿಯಂತೆ ನಿರ್ಜನವಾಗಿದೆ. ಆದರೂ ಕೆಲವರು ಅನಗತ್ಯವಾಗಿ ಮನೆಯಿಂದ ಹೊರಬರುತ್ತಿದ್ದಾರೆ. ಇಂತಹವರ ವಿರುದ್ಧ ಇಂದೋರ್ ಪೊಲೀಸರು ಕಠಿಣ ಕ್ರಮ ಕೈಗೊಂಡು, ಲಾಕ್‌ಡೌನ್ ಉಲ್ಲಂಘಿಸಿದ 700ಕ್ಕೂ ಹೆಚ್ಚು ಜನರನ್ನು ಜೈಲುಗಟ್ಟಿದ್ದಾರೆ. ಇಂದೋರ್'ನಲ್ಲಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸುವವರಿಗೆ ಶಿಕ್ಷೆ ವಿಧಿಸಲು ತಾತ್ಕಾಲಿಕ ಜೈಲು ಸ್ಥಾಪಿಸಲಾಗಿದೆ ಎಂಬುದು ಗಮನಾರ್ಹ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಜೈಲು ಸೇರಿದ 700ಕ್ಕೂ ಹೆಚ್ಚು ಜನ

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಒಂದೇ ದಿನ ಇಷ್ಟು ಜನರನ್ನು ಪೊಲೀಸರು ಬಂಧಿಸಿರುವುದು ಇದೇ ಮೊದಲು. ಇದರ ಜೊತೆಗೆ ಪೊಲೀಸರು ಹಲವಾರು ವಾಹನಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.

MOST READ:ವಿಮಾನಗಳು ಹಾರಾಟ ನಡೆಸುವಾಗ, ಲ್ಯಾಂಡಿಂಗ್ ಆಗುವಾಗ ಉಂಟಾಗುವ ಶಬ್ದಗಳಿವು

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಜೈಲು ಸೇರಿದ 700ಕ್ಕೂ ಹೆಚ್ಚು ಜನ

ಆದರೆ ಎಷ್ಟು ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂಬ ಬಗ್ಗೆ ಪೊಲೀಸರು ಮಾಹಿತಿ ನೀಡಿಲ್ಲ. ಮನೆಯಿಂದ ಹೊರ ಬರಲು ಸರಿಯಾದ ಕಾರಣಗಳನ್ನು ನೀಡದವರ ವಾಹನಗಳಿಂದ ಪೊಲೀಸರು ಗಾಳಿ (ಏರ್) ತೆಗೆದು ಹಾಕಿದ್ದಾರೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಜೈಲು ಸೇರಿದ 700ಕ್ಕೂ ಹೆಚ್ಚು ಜನ

ಇದೇ ವೇಳೆ ಹುಟ್ಟುಹಬ್ಬವನ್ನು ಆಚರಿಸಲು ಕೇಕ್'ನೊಂದಿಗೆ ಬಂದ ವ್ಯಕ್ತಿಯ ವಾಹನವನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನಿನ್ನೆ ಒಂದೇ ದಿನ ಪೊಲೀಸರು ಸುಮಾರು ಸಾವಿರಾರು ವಾಹನ ಸವಾರರ ಮೇಲೆ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

MOST READ:ಪ್ರವಾಸದ ಹುಚ್ಚಿಗಾಗಿ ವಾಹನ ಕದಿಯುತ್ತಿದ್ದ ಎಂಜಿನಿಯರಿಂಗ್ ಪದವೀಧರ ಕೊನೆಗೂ ಲಾಕ್

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಜೈಲು ಸೇರಿದ 700ಕ್ಕೂ ಹೆಚ್ಚು ಜನ

ಭಾರತದ ಇತರ ಭಾಗಗಳಲ್ಲಿಯೂ ಪೊಲೀಸರು ಇದೇ ರೀತಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಕರೋನಾ ವೈರಸ್ ಎರಡನೇ ಅಲೆ ಭಾರತದಲ್ಲಿ ವೇಗವಾಗಿಹರಡುತ್ತಿದ್ದು, ಪ್ರತಿ ದಿನ 2 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗುತ್ತಿವೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಜೈಲು ಸೇರಿದ 700ಕ್ಕೂ ಹೆಚ್ಚು ಜನ

ಆದರೆ ಕಳೆದ ವರ್ಷದಂತೆ ಈ ಬಾರಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಗೊಳಿಸುವುದಿಲ್ಲವೆಂದು ಕೇಂದ್ರ ಸರ್ಕಾರ ತಿಳಿಸಿದೆ. ಆದರೂ ಕರೋನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ವಿವಿಧ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಲಾಕ್‌ಡೌನ್ ಜಾರಿಗೊಳಿಸಿವೆ.

MOST READ:ಭಾರತದಲ್ಲಿ ಹೆಚ್ಚು ಕಾರು ಮಾರಾಟವಾಗುವ ಹತ್ತು ಪ್ರಮುಖ ನಗರಗಳಿವು

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಜೈಲು ಸೇರಿದ 700ಕ್ಕೂ ಹೆಚ್ಚು ಜನ

ಅದರಂತೆ ಕರ್ನಾಟಕವೂ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ನೆರೆಯ ತಮಿಳುನಾಡಿನಲ್ಲೂ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಆದರೆ ತಮಿಳುನಾಡಿನಲ್ಲಿ ಪೊಲೀಸರು ಲಾಕ್‌ಡೌನ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಿಲ್ಲವೆಂಬ ಆರೋಪಗಳು ಕೇಳಿಬಂದಿದ್ದವು.

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಜೈಲು ಸೇರಿದ 700ಕ್ಕೂ ಹೆಚ್ಚು ಜನ

ತಮಿಳುನಾಡು ಪೊಲೀಸರು ಕಠಿಣ ಕ್ರಮ ಕೈಗೊಳ್ಳದ ಕಾರಣ ಜನರು ಅನಗತ್ಯವಾಗಿ ಹೊರ ಬರುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಆರೋಪಗಳು ಅಲ್ಲಿನ ಪೊಲೀಸರಿಗೆ ಮುಜುಗರವನ್ನುಂಟು ಮಾಡಿದ್ದವು.

MOST READ:ಕರೋನಾ ಸೋಂಕಿತರ ಪಾಲಿಗೆ ದೇವರಾದ ಕರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಜೈಲು ಸೇರಿದ 700ಕ್ಕೂ ಹೆಚ್ಚು ಜನ

ಈಗ ಎಚ್ಚೆತ್ತಿರುವ ತಮಿಳುನಾಡು ಪೊಲೀಸರು ಸರಿಯಾದ ಕಾರಣವಿಲ್ಲದೆ ಹೊರಬರುವ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ. ಇಂತಹ ಕಠಿಣ ಕ್ರಮಗಳಿಂದಾಗಿ ಮುಂಬರುವ ದಿನಗಳಲ್ಲಿ ಹೊಸ ಕೋವಿಡ್ 19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುವ ನಿರೀಕ್ಷೆಗಳಿವೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Indore police sent more than 700 people to jail for violating lockdown norms. Read in Kannada.
Story first published: Tuesday, May 25, 2021, 20:06 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X