350ಕ್ಕೂ ಹೆಚ್ಚು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಭಾರತದ ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುವುದು ಸಾಮಾನ್ಯ ಸಂಗತಿಯಾಗಿದೆ. ಸಂಚಾರಿ ಪೊಲೀಸರು ಹಾಗೂ ಆಯಾ ರಾಜ್ಯಗಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರ ವಿರುದ್ಧ ಕ್ರಮಗಳನ್ನು ಕೈಗೊಳ್ಳುತ್ತಲೇ ಇರುತ್ತಾರೆ. ಇತ್ತೀಚಿಗೆ ಇಂದೋರ್‌ನ ಪ್ರಾದೇಶಿಕ ಸಾರಿಗೆ ಕಚೇರಿಯು ಸಂಚಾರಿ ಪೋಲಿಸರ ಸಹಾಯದಿಂದ ನಗರದಲ್ಲಿ 14 ದಿನಗಳ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡಿತ್ತು.

350ಕ್ಕೂ ಹೆಚ್ಚು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರ ವಿರುದ್ಧ ಕ್ರಮ ಕೈಗೊಳ್ಳಲು ಈ ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು. ಈ ತಿಂಗಳ 7 ನೇ ತಾರೀಖಿನಿಂದ 20 ನೇ ತಾರೀಖಿನವರೆಗೂ ಈ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಾರಿಗೆ ಆಯುಕ್ತ ಮುಖೇಶ್ ಜೈನ್ ಅಧಿಕಾರಿಗಳಿಗೆ ನೀಡಿದ್ದ ಸೂಚನೆಗಳನ್ನು ಅನುಸರಿಸಿ ಈ ಕಾರ್ಯಾಚರಣೆ ನಡೆಸಲಾಗಿತ್ತು.

350ಕ್ಕೂ ಹೆಚ್ಚು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಈ 14 ದಿನಗಳ ವಿಶೇಷ ಕಾರ್ಯಾಚರಣೆಯಲ್ಲಿ ಆರ್‌ಟಿಒ ಅಧಿಕಾರಿಗಳು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸವಾರರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಒಟ್ಟು ರೂ. 3.69 ಲಕ್ಷಗಳನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಗಿದೆ ಎಂಬುದು ವಿಶೇಷ.

350ಕ್ಕೂ ಹೆಚ್ಚು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಇಂದೋರ್ ಸಾರಿಗೆ ಇಲಾಖೆ ಆರ್‌ಟಿಒ ಅಧಿಕಾರಿಗಳ ವರದಿಯ ಪ್ರಕಾರ 377 ವಾಹನ ಸವಾರರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಈ ವಾಹನ ಸವಾರರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅವರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಇದರಲ್ಲಿ 238 ಜನರು ದ್ವಿಚಕ್ರ ವಾಹನ ಸವಾರರಾದರೆ, 139 ಜನರು ಕಾರು ಚಾಲಕರು ಎಂಬುದು ವಿಶೇಷ.

350ಕ್ಕೂ ಹೆಚ್ಚು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಈ ಬಗ್ಗೆ ಮಾತನಾಡಿರುವ ಇಂದೋರ್'ನ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿತೇಂದ್ರ ರಘುವಂಶಿ, ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಲ್ಲಿ ಹೆಚ್ಚು ಜನರು ಕುಡಿದು ವಾಹನ ಚಾಲನೆ ಮಾಡುವವರಾಗಿದ್ದಾರೆ. ಇದು ಅವರಿಗೆ ಹಾಗೂ ಇತರರಿಗೆ ಅಪಾಯಕಾರಿಯಾಗುತ್ತದೆ. ಆಶ್ಚರ್ಯಕರ ಸಂಗತಿಯೆಂದರೆ ಒಂದೇ ರೀತಿಯ ನಿಯಮ ಉಲ್ಲಂಘನೆಯಲ್ಲಿ ಸಿಕ್ಕಿ ಬಿದ್ದ ದ್ವಿಚಕ್ರ ವಾಹನ ಸವಾರರ ಸಂಖ್ಯೆ ನಾಲ್ಕು ಚಕ್ರ ವಾಹನ ಸವಾರರ ಸಂಖ್ಯೆಗಿಂತ ಹೆಚ್ಚಾಗಿತ್ತು.

350ಕ್ಕೂ ಹೆಚ್ಚು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಸಿಗ್ನಲ್ ಜಂಪ್ ಮಾಡಿದ 233 ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿಯು ಹಲವು ಬಾರಿ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸವಾರರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಿದೆ. ವಾಹನ ಚಾಲನೆ ವೇಳೆ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದ 66 ವಾಹನ ಸವಾರರ ಚಾಲನಾ ಪರವಾನಗಿಯನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ.

350ಕ್ಕೂ ಹೆಚ್ಚು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಇದರ ಜೊತೆಗೆ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸದ ಹಾಗೂ ಕಾರು ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸದೇ ಇದ್ದ ಒಟ್ಟು 249 ವಾಹನ ಸವಾರರಿಗೆ ದಂಡ ವಿಧಿಸಲಾಗಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ವಿವಿಧ ರಾಜ್ಯಗಳ ಸಂಚಾರ ಪೊಲೀಸರು ಇಂತಹ ಅಭಿಯಾನಗಳನ್ನು ನಡೆಸುತ್ತಲೇ ಇರುತ್ತಾರೆ. ಆದರೂ ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಲೇ ಇರುವುದು ಕಡಿಮೆಯಾಗಿಲ್ಲ.

350ಕ್ಕೂ ಹೆಚ್ಚು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ದೆಹಲಿ ಪೊಲೀಸರು ವಿಶೇಷ ಕಾರ್ಯಾಚರಣೆಗಳನ್ನು ನಡೆಸುತ್ತಲೇ ಇರುತ್ತಾರೆ. ಎಲ್ಲಾ ವಾಹನ ಸವಾರರು ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರಗಳನ್ನು (ಪಿಯುಸಿ) ಹೊಂದಿರುವುದನ್ನು ಇತ್ತೀಚಿಗಷ್ಟೇ ದೆಹಲಿ ಸರ್ಕಾರವು ಕಡ್ಡಾಯಗೊಳಿಸಿದೆ. ತಮ್ಮ ವಾಹನಗಳಿಗೆ ಪಿಯುಸಿ ಹೊಂದಿರದ ವಾಹನ ಸವಾರರಿಗೆ ರೂ. 10,000 ದಂಡ ವಿಧಿಸಲಾಗುವುದು ಎಂದು ದೆಹಲಿ ಸರ್ಕಾರವು ತಿಳಿಸಿದೆ. ಇದರ ಜೊತೆಗೆ ಸಂಬಂಧ ಪಟ್ಟ ವಾಹನ ಸವಾರನ ಚಾಲನಾ ಪರವಾನಗಿಯನ್ನು ಮೂರು ತಿಂಗಳವರೆಗೆ ಅಮಾನತು ಮಾಡಲಾಗುತ್ತದೆ.

350ಕ್ಕೂ ಹೆಚ್ಚು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಈ ನಿಯಮ ಉಲ್ಲಂಘಿಸುವವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ದೆಹಲಿ ರಾಜ್ಯ ಸಾರಿಗೆ ಇಲಾಖೆಯು ಎಚ್ಚರಿಕೆ ನೀಡಿದೆ. ದೆಹಲಿಯಲ್ಲಿ ವಾಯು ಮಾಲಿನ್ಯ ವಿಪರೀತವಾಗಿ ಹೆಚ್ಚಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ವಾಹನಗಳು ಈ ವಾಯು ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿವೆ.

350ಕ್ಕೂ ಹೆಚ್ಚು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ವಾಯು ಮಾಲಿನ್ಯ ಸಮಸ್ಯೆಯನ್ನು ಕಡಿಮೆ ಮಾಡಲು ಹಾಗೂ ಗಾಳಿಯ ಗುಣಮಟ್ಟವನ್ನು ಸುಧಾರಿಸಲು, ವಾಹನಗಳು ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರವನ್ನು ಹೊಂದುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಎಲ್ಲಾ ವಾಹನ ಸವಾರರು ತಮ್ಮ ವಾಹನಗಳನ್ನು ಪರೀಕ್ಷಿಸಬೇಕು ಹಾಗೂ ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರವನ್ನು ಸಾರಿಗೆ ಇಲಾಖೆಯಿಂದ ಅನುಮೋದಿಸಿದ ಕೇಂದ್ರಗಳಲ್ಲಿ ಪಡೆಯಬೇಕು ಎಂದು ತಿಳಿಸಲಾಗಿದೆ.

350ಕ್ಕೂ ಹೆಚ್ಚು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಈ ಪ್ರಮಾಣ ಪತ್ರವನ್ನು ಪಡೆಯುವ ಮೂಲಕ ದಂಡ ವಿಧಿಸುವುದರಿಂದ ಚಾಲನಾ ಪರವಾನಗಿ ಅಮಾನತುಗೊಳ್ಳುವುದರಿಂದ ಹಾಗೂ ಜೈಲುವಾಸಕ್ಕೆ ತುತ್ತಾಗುವಂತಹ ಕ್ರಮಗಳಿಂದ ಪಾರಾಗಬಹುದು. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಸಮಸ್ಯೆ ಹೆಚ್ಚಾಗಿದೆ. ಈ ಸಮಸ್ಯೆಯನ್ನು ಕಡಿಮೆ ಮಾಡಲು ದೆಹಲಿ ರಾಜ್ಯ ಸರ್ಕಾರವು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Indore rto officials suspends driving license for traffic rules violation details
Story first published: Tuesday, September 28, 2021, 17:30 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X