Just In
- 39 min ago
ಮೇಡ್ ಇನ್ ಇಂಡಿಯಾ ಯುದ್ಧ ವಾಹನಗಳ ಅಬ್ಬರ: ಮತ್ತಷ್ಟು ಬಲಿಷ್ಟಗೊಂಡ ಭಾರತೀಯ ಸೇನೆ!
- 2 hrs ago
ವಾರದ ಸುದ್ದಿಗಳು: ಎಕ್ಸ್ಯುವಿ700 ಮಾದರಿಗೆ ಸೇಫರ್ ಚಾಯ್ಸ್ ಪ್ರಶಸ್ತಿ, ಸುರಕ್ಷತೆಯಲ್ಲಿ ಮುಗ್ಗರಿಸಿದ ಕಿಯಾ ಕಾರೆನ್ಸ್..
- 16 hrs ago
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್
- 17 hrs ago
ಭಾರತದಲ್ಲಿ ಹೊಸ ಕವಾಸಕಿ ನಿಂಜಾ 400 ಸೂಪರ್ಸ್ಪೋರ್ಟ್ ಬೈಕ್ ಬಿಡುಗಡೆ
Don't Miss!
- News
Breaking:ಬೆಳಗಾವಿಯಲ್ಲಿ ಕ್ರೂಸರ್ ಪಲ್ಟಿ- ಕೂಲಿ ಕೆಲಸಕ್ಕೆ ತೆರಳುತ್ತಿದ್ದ 7 ಕಾರ್ಮಿಕರ ದುರ್ಮರಣ
- Sports
IND vs IRE: ಮೊದಲ ಟಿ20 ಪಂದ್ಯಕ್ಕೂ ಮುನ್ನ ವಿಶ್ವಕಪ್ ಬಗ್ಗೆ ಹಾರ್ದಿಕ್ ಪಾಂಡ್ಯ ಮಹತ್ವದ ಹೇಳಿಕೆ
- Movies
ನವೀನ್ ಸಜ್ಜು ಮೈಸೂರು ಮನೆ ಹೇಗಿದೆ ಗೊತ್ತಾ?
- Technology
LED ಡಿಸ್ಪ್ಲೇ ಹೊಂದಿರುವ ಅತ್ಯುತ್ತಮ ಪವರ್ಬ್ಯಾಂಕ್ಗಳ ಲಿಸ್ಟ್ ಇಲ್ಲಿದೆ!
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Finance
ಜೂನ್ 26: ಕಚ್ಚಾತೈಲ ದರ ಚೇತರಿಕೆ, ಭಾರತದಲ್ಲಿ ಇಂಧನ ದರ ಆಗಿಲ್ಲ ಏರಿಕೆ!
- Education
SSC MTS Admit Card 2022 : ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಪೆಟ್ರೋಲ್ ಬೆಲೆಯಲ್ಲಿ ಭಾರೀ ಇಳಿಕೆ: 2014 ರಿಂದ ಪ್ರಸ್ತುತದವರೆಗೆ ಇಂಧನ ಏರಿಕೆ-ಇಳಿಕೆಯ ಮಾಹಿತಿ
ಸದ್ಯ ಭಾರತದಾದ್ಯಂತ ಚರ್ಚೆಯಾಗುತ್ತಿರುವ ಸುದ್ದಿ ಏನೆಂದರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಭಾರೀ ಇಳಿಕೆ ಮಾಡಿದ್ದಾರೆ. ಕಳೆದ ಶನಿವಾರ ಈ ಘೋಷಣೆ ಮಾಡಿದ್ದು, ಅದರಂತೆ ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಮೇಲೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಇಳಿಸಲಾಗಿದೆ.

ಇದರ ಪರಿಣಾಮವಾಗಿ ಭಾರತದಾದ್ಯಂತ ಪೆಟ್ರೋಲ್ ಬೆಲೆ ಲೀಟರ್‌ಗೆ 8.69 ರೂ. ಮತ್ತು ಡೀಸೆಲ್ ಲೀಟರ್‌ಗೆ 7.05 ರೂ. ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿಮೆ ಮಾಡುವಂತೆ ವಿತ್ತ ಸಚಿವರು ರಾಜ್ಯ ಸರ್ಕಾರಗಳಿಗೂ ಸೂಚಿಸಿದ್ದಾರೆ.

2020ರ ಮಾರ್ಚ್‌ನಿಂದ ಮೇ ವರೆಗೆ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ತೀವ್ರವಾಗಿ ಕುಸಿದಿತ್ತು. ಆ ಸಮಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರಿಹೊಂದಿಸಲು ಪ್ರತಿ ಲೀಟರ್ ಮತ್ತು ಡೀಸೆಲ್ ಮೇಲೆ ಕ್ರಮವಾಗಿ 13 ರೂ. ಏರಿಕೆ ಮಾಡಲಾಯಿತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಈಗ ಚೇತರಿಸಿಕೊಂಡಿರುವುದರಿಂದ ಈ ಎಲ್ಲಾ ತೆರಿಗೆಗಳನ್ನು ಹಿಂಪಡೆಯಲಾಗಿದೆ.

ನವೆಂಬರ್ 2021 ರಲ್ಲಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 5 ರೂ. ಮತ್ತು ಡೀಸೆಲ್‌ಗೆ ಲೀಟರ್‌ಗೆ 10 ರೂ. ಮೌಲ್ಯವರ್ಧಿತ ತೆರಿಗೆಯನ್ನು ಕಡಿಮೆ ಮಾಡುವಂತೆ ರಾಜ್ಯ ಸರ್ಕಾರಗಳನ್ನು ಕೋರಿದ್ದರು.

ನಂತರ ಭಾರತದ 25 ರಾಜ್ಯಗಳು ತಮ್ಮ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಿದ್ದವು. ಆದರೆ ಮಹಾರಾಷ್ಟ್ರ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ರಾಜ್ಯಗಳು ಆ ಸಮಯದಲ್ಲಿ ಪೆಟ್ರೋಲ್ ಬೆಲೆಯನ್ನು ಕಡಿಮೆ ಮಾಡಿರಲಿಲ್ಲ.

ಅಂತರಾಷ್ಟ್ರೀಯ ಕಚ್ಚಾ ತೈಲ ಬೆಲೆಯು 14 ವರ್ಷಗಳ ಕನಿಷ್ಠ ಮಟ್ಟವನ್ನು ತಲುಪಿದೆ. ಒಂದು ಬ್ಯಾರೆಲ್ $ 140 ವರೆಗೆ ಮಾರಾಟವಾಗಿದೆ. ಇದು ಕೆಲವು ತಿಂಗಳ ಹಿಂದೆ $ 84 ಆಗಿತ್ತು. ಮಾರ್ಚ್ 22 ರಿಂದ 16 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 10 ರೂ.ವರೆಗೆ ಏರಿಕೆಯಾಗಿದ್ದು, ಜನರ ಮೇಲೆ ಹೆಚ್ಚಿನ ಹೊರೆಯಾಗಿತ್ತು.

2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕ್ರಮವಾಗಿ ಲೀಟರ್‌ಗೆ 9.48 ಮತ್ತು 3.56 ರೂ. ಇತ್ತು. ಬಳಿಕ ಅದು 2014 ಮತ್ತು 2016ರ ನಡುವೆ, ಕೇಂದ್ರ ಸರ್ಕಾರವು ಒಂಬತ್ತು ಬಾರಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ.

ಇದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ಕ್ರಮವಾಗಿ 11.77 ಮತ್ತು 13.47 ಕ್ಕೆ ಹೆಚ್ಚಿಸಿದೆ. ಇದರಿಂದಾಗಿ 2014-2015ರ ಅವಧಿಯಲ್ಲಿ ಪೆಟ್ರೋಲ್ ಅಬಕಾರಿ ಸುಂಕದಿಂದ ಕೇಂದ್ರ ಸರ್ಕಾರಕ್ಕೆ ಸಂಗ್ರಹವಾದ ಅಬಕಾರಿ ಆದಾಯವು 2016-17ರಲ್ಲಿ 99,000 ಕೋಟಿಯಿಂದ 2.42 ಲಕ್ಷ ಕೋಟಿಗೆ ಏರಿಕೆಯಾಗಿದೆ.

ಇದರ ನಂತರ ಅಕ್ಟೋಬರ್ 2017 ರಲ್ಲಿ ಅಬಕಾರಿ ಸುಂಕವನ್ನು ಲೀಟರ್‌ಗೆ 2 ರೂ.ಗೆ ಇಳಿಸಲಾಯಿತು. ಆದರೆ ಜುಲೈ 2019 ರಲ್ಲಿ ಮತ್ತೆ ಅದೇ ತೆರಿಗೆಯನ್ನು ಹೆಚ್ಚಿಸಲಾಯಿತು. ನಂತರ ಅದು ಮಾರ್ಚ್ 14, 2020 ರಂದು ಲೀಟರ್‌ಗೆ ಪೆಟ್ರೋಲ್‌ನ ಬೆಲೆಯನ್ನು 3 ರೂ.ಗೆ ಮತ್ತು ಮೇ 6, 2020 ರಂದು ಪೆಟ್ರೋಲ್ ಲೀಟರ್‌ಗೆ 10 ರೂ. ಮತ್ತು ಡೀಸೆಲ್‌ಗೆ ರೂ. 13 ಹೆಚ್ಚಿಸಿತು.

ಸದ್ಯ ಸಂಗ್ರಹವಾಗುತ್ತಿರುವ ಈ ತೆರಿಗೆಯನ್ನು ಈಗಷ್ಟೇ ಕಡಿಮೆ ಮಾಡಲಾಗಿದೆ. ಪ್ರಸ್ತುತ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯು ಕರೋನಾ ಮೊದಲಿನಂತೆಯೇ ಇದೆ. ಮಹಾರಾಷ್ಟ್ರ, ಕೇರಳ, ರಾಜಸ್ಥಾನ ಸೇರಿದಂತೆ ರಾಜ್ಯ ಸರ್ಕಾರಗಳೂ ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಿವೆ.

ಅದರಂತೆ ಮಹಾರಾಷ್ಟ್ರವು ಪೆಟ್ರೋಲ್ ದರವನ್ನು ಲೀಟರ್‌ಗೆ 2.08 ರೂಪಾಯಿ ಮತ್ತು ಡೀಸೆಲ್‌ಗೆ 1.44 ರೂಪಾಯಿ ಇಳಿಕೆ ಮಾಡಿದೆ. ಕೇರಳದಲ್ಲಿ ಪೆಟ್ರೋಲ್ ದರವನ್ನು ಲೀಟರ್‌ಗೆ 2.41 ರೂಪಾಯಿ ಮತ್ತು ಡೀಸೆಲ್‌ಗೆ 1.36 ರೂಪಾಯಿ ಇಳಿಸಿದ್ದಾರೆ. ರಾಜಸ್ಥಾನದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 2.48 ರೂ. ಮತ್ತು ಡೀಸೆಲ್ ಗೆ 1.16 ರೂ. ತೆರಿಗೆ ಇಳಿಕೆಯಾಗಿದೆ.