IPL: ವಿದೇಶಿ ಆಟಗಾರನಿಗೆ ಒಲಿದ ಜನಸಾಮಾನ್ಯರ ಟಾಟಾ ಪಂಚ್ ಇವಿ.. 421 ಕಿ.ಮೀ ಓಡುತ್ತೆ ಈ ಕಾರು!

ಐಪಿಎಲ್ (IPL) ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ 22 ವರ್ಷದ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್‌ಗೆ ಟಾಟಾ ಪಂಚ್ ಇವಿ ಬಹುಮಾನವಾಗಿ ಸಿಕ್ಕಿದೆ. ಭಾನುವಾರ ನಡೆದ ಕೆಕೆಆರ್ ಮತ್ತು ಎಸ್‌ಆರ್‌ಹೆಚ್‌ ನಡುವಿನ ಫೈನಲ್ಸ್ ಬಳಿಕ, ಮ್ಯಾಕ್‌ಗುರ್ಕ್‌ ಅವರ ಹೆಸರನ್ನು 'ಸೀಸನ್‌ ಆಫ್ ದಿ ಎಲೆಕ್ಟ್ರಿಕ್ ಸೈಕರ್' ಪ್ರಶಸ್ತಿಗೆ ಘೋಷಿಸಿಸಲಾಯಿತು.

ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್‌ ಭಾರತದಲ್ಲಿಲ್ಲದ ಕಾರಣ, ಅವರ ಪರವಾಗಿ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಈ ಬಹುಮಾನವನ್ನು ಸ್ವೀಕರಿಸಿದರು. ಮ್ಯಾಕ್‌ಗುರ್ಕ್‌ ಈ ಸೀಸನ್‌ನ ಅತ್ಯುತ್ತಮ ಬ್ಯಾಟರ್‌ಗಳಲ್ಲಿ ಒಬ್ಬರಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡವನ್ನು ಪ್ರತಿನಿಧಿಸುತ್ತಾರೆ. ಟೂರ್ನಿಯ ಮೊದಲ 5 ಪಂದ್ಯದಲ್ಲಿ ಪ್ಲೇಯಿಂಗ್ XIನಲ್ಲಿ ಆಡಲು ಕೂಡ ಅವಕಾಶ ದೊರೆತಿರಲಿಲ್ಲ. ಆದರೆ, ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಸತತ ವೈಫಲ್ಯದಿಂದ ಡೆಲ್ಲಿ ಕ್ಯಾಪಿಟಲ್ಸ್ ಆಡಳಿತವು ಮ್ಯಾಕ್‌ಗುರ್ಕ್‌ಗೆ ಮಣೆ ಹಾಕಿತು.

IPL 2024 Delhi Capitals Jake Fraser-McGurk Won Tata Punch Ev

ಈ ಸುವರ್ಣಾವಕಾಶವನ್ನು ಬಳಸಿಕೊಂಡ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್‌ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದರು. ಆಡಿದ 9 ಪಂದ್ಯಗಳಲ್ಲಿ 234.04 ಸ್ಟೈಕ್ ರೇಟ್‌ನಲ್ಲಿ 4 ಅರ್ಧ ಶತಕ ಒಳಗೊಂಡಂತೆ 330 ರನ್ ಗಳಿಸಿದರು. ಋತುವಿನ ಆರಂಭದಲ್ಲಿ ಕಳಪೆ ಪ್ರದರ್ಶನ ತೋರಿದ್ದ ತಂಡವನ್ನು ಗೆಲುವಿನ ಲಯಕ್ಕೆ ಮರಳಿಸಿದರು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್‌ಗೆ ಪ್ರವೇಶಿಸಲು ಸಾಕಷ್ಟು ಪೈಪೋಟಿ ನಡೆಸಿತು. ಕಡಿಮೆ ರನ್ ರೇಟ್‌ನಿಂದ ಸ್ವಲ್ಪದರಲ್ಲೇ ಅದು ತಪ್ಪಿತ್ತು.

ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್‌ ಈ ಸೀಸನ್‌ನಲ್ಲಿ ಅತ್ಯಧಿಕ ಸ್ಟೈಕ್ ರೇಟ್‌ ಹೊಂದಿರುವ ಅಗ್ರ 5 ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ತಮ್ಮ ತಂಡದ ಗೆಲುವಿಗೆ ನಿರ್ಣಾಯಕ ಪಾತ್ರವಹಿಸಿದ್ದರಿಂದ ಟಾಟಾ ಪಂಚ್ ಇವಿ ಲಭಿಸಿದೆ. ನಂತರದ ಸ್ಥಾನಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್‌) ಆರಂಭಿಕರಾದ ಅಭಿಷೇಕ್ ಶರ್ಮಾ (204.21), ಟ್ರಾವಿಸ್ ಹೆಡ್ (191.55), ಡೆಲ್ಲಿ ಕ್ಯಾಪಿಟಲ್ಸ್ ತಂಡದ ಟ್ರಿಸ್ಟಾನ್ ಸ್ಮಟ್ಸ್ ಮತ್ತು ಆರ್‌ಸಿಬಿ ವಿಕೆಟ್ ಕೀಪ‌ರ್ ದಿನೇಶ್ ಕಾರ್ತಿಕ್ (187.35) ಇದ್ದಾರೆ.

IPL 2024 Delhi Capitals Jake Fraser-McGurk Won Tata Punch Ev

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಟಾಟಾ ಪಂಚ್ ಇವಿ (Tata Punch EV) ಬಗ್ಗೆ ಮಾತನಾಡುವುದಾದರೆ, ಈ ಕಾರು ರೂ.10.99 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದರ 25 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಹೊಂದಿರುವ ಮಾದರಿಯು ಪೂರ್ತಿ ಚಾರ್ಜ್ ನಲ್ಲಿ 315 ಕಿ.ಮೀ ಕ್ರಮಿಸುತ್ತದೆ.

ಮತ್ತೊಂದು 35 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ ಪಡೆದಿರುವ ಆವೃತ್ತಿಯು ಸಂಪೂರ್ಣ ಚಾರ್ಜ್ ನಲ್ಲಿ 421 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಈ ಪಂಚ್ ಇವಿಯಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಏರ್ ಪ್ಯೂರಿಫೈಯರ್, ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನೂತನ ಟಾಟಾ ಪಂಚ್ ಇವಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಆಟೋ ಹೋಲ್ಡ್‌, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 360 - ಡಿಗ್ರಿ ಕ್ಯಾಮೆರಾ, ಬ್ಲೈಂಡ್ ಸ್ಪಾಟ್ ವ್ಯೂ ಮಾನಿಟರ್, ಹಿಲ್ ಡಿಸೆಂಟ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್ ಅನ್ನು ಪಡೆದಿದೆ. ಈ ಕಾರಿಗೆ ಎಂಜಿ ಕಾಮೆಟ್ ಇವಿ ದೊಡ್ಡ ಎದುರಾಳಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, May 29, 2024, 10:51 [IST]
English summary
Ipl 2024 delhi capitals jake fraser mcgurk won tata punch ev
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+