ಸಾಮಾಜಿಕ ಅಂತರ ಪಾಲಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಗವರ್ನರ್

ಮಹಾಮಾರಿ ಕರೋನಾ ವೈರಸ್ ಗೆ ಯಾವುದೇ ಲಸಿಕೆ ಇಲ್ಲ. ಫೇಸ್ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸದ್ಯ ಇದಕ್ಕಿರುವ ಮದ್ದು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಜನರಿಗೆ ಮನವಿ ಮಾಡಿಕೊಳ್ಳುತ್ತಿದ್ದರೂ ಜನರು ಈ ನಿಯಮಗಳನ್ನು ಪಾಲಿಸುತ್ತಿಲ್ಲ.

ಸಾಮಾಜಿಕ ಅಂತರ ಪಾಲಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಗವರ್ನರ್

ಭಾರತದ ಮುಕುಟ ಜಮ್ಮು ಕಾಶ್ಮೀರದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿವೆ. ಇದರ ನಿಯಂತ್ರಣಕ್ಕೆ ಆಡಳಿತವು ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು, ಸಾಮಾಜಿಕ ಅಂತರವನ್ನು ಪಾಲಿಸದ ಜನರು ಹಾಗೂ ವಾಹನಗಳಿಗೆ ದಂಡ ವಿಧಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಸಾಮಾಜಿಕ ಅಂತರ ಪಾಲಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಗವರ್ನರ್

ಕೇಂದ್ರ ಸರ್ಕಾರದ ಆಡಳಿತವಿರುವ ರಾಜ್ಯದಲ್ಲಿ ಸಾಮಾಜಿಕ ಅಂತರವನ್ನು ಪಾಲಿಸದವರ ವಿರುದ್ಧ ಇನ್ನು ಮುಂದೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಅವರು ಹೇಳಿದ್ದಾರೆ. ಈ ಸಂಬಂಧ ಎಲ್ಲಾ ಜಿಲ್ಲೆಗಳಿಗೂ ಆದೇಶ ನೀಡಲಾಗಿದ್ದು, ಸಾಮಾಜಿಕ ಅಂತರವನ್ನು ಪಾಲಿಸದ ಖಾಸಗಿ ಹಾಗೂ ಸರ್ಕಾರಿ ವಾಹನಗಳ ವಿರುದ್ಧವೂ ಸಹ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಸಾಮಾಜಿಕ ಅಂತರ ಪಾಲಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಗವರ್ನರ್

ಸಾಮಾಜಿಕ ಅಂತರ ಪಾಲಿಸದೇ ಹೆಚ್ಚು ಜನರನ್ನು ತುಂಬುವ ಬಸ್ಸುಗಳಿಗೆ ರೂ.3,000, ಆಟೋ ರಿಕ್ಷಾ, ತ್ರಿಚಕ್ರ ವಾಹನ, ಕಾರು ಹಾಗೂ ದ್ವಿಚಕ್ರ ವಾಹನಗಳಿಗೆ ರೂ.2,000 ದಂಡ ವಿಧಿಸಲಾಗುವುದು. ನಿಯಮ ಉಲ್ಲಂಘಿಸುವವರನ್ನು ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರಡಿಯಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತದೆ.

ಸಾಮಾಜಿಕ ಅಂತರ ಪಾಲಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಗವರ್ನರ್

ಸಾರ್ವಜನಿಕ ಹಾಗೂ ವಾಣಿಜ್ಯ ಪ್ರದೇಶಗಳಲ್ಲಿ ಫೇಸ್ ಮಾಸ್ಕ್ ಗಳನ್ನು ಧರಿಸದೇ ಇರುವವರ ವಿರುದ್ಧ, ಎಲ್ಲೆಂದರಲ್ಲಿ ಉಗುಳುವವರ ವಿರುದ್ಧ ಹಾಗೂ ಸಾಮಾಜಿಕ ಅಂತರವನ್ನು ಅನುಸರಿಸದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಆದೇಶದಲ್ಲಿ ತಿಳಿಸಲಾಗಿದೆ.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಸಾಮಾಜಿಕ ಅಂತರ ಪಾಲಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಗವರ್ನರ್

ಹೋಂ ಕ್ವಾರಂಟೈನ್ ನಿಯಮಗಳನ್ನು ಪಾಲಿಸದಿದ್ದರೂ ಸಹ ಕ್ರಮ ತೆಗೆದುಕೊಳ್ಳಲಾಗುವುದು. ಹೋಂ ಕ್ವಾರಂಟೈನ್ ನಲ್ಲಿರುವವರು ಮನೆಯಿಂದ ಹೊರ ಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜಮ್ಮು ಕಾಶ್ಮೀರದಲ್ಲಿ ಇದುವರೆಗೂ 13,899 ಜನರಲ್ಲಿ ಕರೋನಾ ವೈರಸ್ ಕಂಡು ಬಂದಿದ್ದು, 244 ಜನ ಸಾವನ್ನಪ್ಪಿದ್ದಾರೆ.

ಸಾಮಾಜಿಕ ಅಂತರ ಪಾಲಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಗವರ್ನರ್

ಕಳೆದ 24 ಗಂಟೆಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ಕರೋನಾ ವೈರಸ್‌ನಿಂದ 8 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಏಳು ಜನ ಕಾಶ್ಮೀರ ಕಣಿವೆಗೆ ಸೇರಿದವರು. ಮತ್ತೊಬ್ಬರು ಜಮ್ಮು ಮೂಲದವರು. 13,899 ಪಾಸಿಟಿವ್ ಪ್ರಕರಣಗಳಲ್ಲಿ 5,844 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 7,811 ಜನ ಈ ಸೋಂಕಿನಿಂದ ಗುಣಮುಖರಾಗಿದ್ದಾರೆ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಸಾಮಾಜಿಕ ಅಂತರ ಪಾಲಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಗವರ್ನರ್

ಶ್ರೀನಗರ ಜಿಲ್ಲೆಯಲ್ಲಿ 290 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಕುಪ್ವಾರದಲ್ಲಿ 84 ಪ್ರಕರಣಗಳು ದಾಖಲಾಗಿವೆ. ಜಮ್ಮು ವಿಭಾಗದ ಜಮ್ಮು ಹಾಗೂ ರಾಜೌರಿ ಜಿಲ್ಲೆಯಲ್ಲಿ ಭಾನುವಾರ 40 ಪ್ರಕರಣಗಳು ದಾಖಲಾಗಿವೆ.

ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.

Most Read Articles

Kannada
English summary
Jammu Kashmir Lieutenant governor orders to take strict action for breaking social distancing norms. Read in Kannada.
Story first published: Wednesday, July 22, 2020, 12:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X