ರೈತನ ಮಗ ಶಾಸಕ.. ಓಡಾಟಕ್ಕೆ ಕಾರಿಲ್ಲ, ಫಾರ್ಚುನರ್ ಗಿಫ್ಟ್ ನೀಡಿದ ಕಾರ್ಯಕರ್ತರು.. MLA ತೆಗೆದುಕೊಂಡ್ರಾ?
ಆಂಧ್ರ ಪ್ರದೇಶ (Andhra Pradesh) ವಿಧಾನಸಭೆಗೆ ನೂತನ ಶಾಸಕರಾಗಿ ಆಯ್ಕೆಯಾಗಿರುವ ಚಿರ್ರಾ ಬಾಲರಾಜು (Chirri BalaRaju) ತಾನೊಬ್ಬ ಆದರ್ಶ ರಾಜಕಾರಣಿ ಎಂಬುದನ್ನು ಸಾಬೀತುಪಡಿಸಿದ್ದಾರೆ. ಗಿರಿಜನ ರೈತ ಕುಟುಂಬದಿಂದ ಬಂದಿರುವ ಬಾಲರಾಜು, ನಟ ಪವನ್ ಕಲ್ಯಾಣ್ (Pawan Kalyan) ಅವರ ಮೇಲಿನ ಅಭಿಮಾನದಿಂದಾಗಿ ಜನಸೇನಾ ಪಾರ್ಟಿ ಮೂಲಕ ರಾಜಕೀಯ ರಂಗವನ್ನು ಪ್ರವೇಶಿಸಿದ್ದರು. 2019ರ ಚುನಾವಣೆಯಲ್ಲಿ ಸೊತ್ತಿದ್ದರು. ಈ ಬಾರಿ ವೈಎಸ್‌ಆರ್ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಪೋಲವರಂನಿಂದ ಸ್ಪರ್ಧಿಸಿ ಭರ್ಜರಿ ಜಯಗಳಿಸಿದ್ದರು.
ಸದ್ಯ ಶಾಸಕರಾಗಿರುವ ಚಿರ್ರಾ ಬಾಲರಾಜು ಬಳಿ ಸ್ವಂತ ವಾಹನವಿಲ್ಲ. ಇದರಿಂದ ಅವರಿಗೆ ಕ್ಷೇತ್ರದಲ್ಲಿ ಓಡಾಟ ನಡೆಸುವುದು ಕಷ್ಟವಾಗುತ್ತದೆ ಎಂಬುದನ್ನು ಅರಿತ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು, ಸುಮಾರು ರೂ.10 ಲಕ್ಷ ಹಣವನ್ನು ಸಂಗ್ರಹಿಸಿದ್ದಾರೆ. ಆ ಮೊತ್ತವನ್ನು ಡೌನ್ ಪೇಮೆಂಟ್ ಕಟ್ಟಿ, ಹೊಚ್ಚ ಹೊಸ 'ಟೊಯೊಟಾ ಫಾರ್ಚುನರ್' ಕಾರನ್ನು ತಮ್ಮ ನಾಯಕನಿಗೆ ಉಡುಗೊರೆಯಾಗಿ ನೀಡಿದ್ದಾರೆ. ಉಳಿದ ಹಣ ಮಾಸಿಕ ಕಂತುಗಳಂತೆ ಶಾಸಕರ ವೇತನದಿಂದ ಕಡಿತವಾಗುವಂತೆ ವ್ಯವಸ್ಥೆ ಮಾಡಿದ್ದಾರೆ.

ಆದಾಗ್ಯೂ ಚಿರ್ರಾ ಬಾಲರಾಜು ಅಭಿಮಾನಿಗಳು ಪ್ರೀತಿಯಿಂದ ನೀಡಿದ್ದ ಕಾರನ್ನು ಹಿಂದಿರುಗಿಸಿದ್ದು, ತನ್ನ ಮೇಲೆ ವಿಶ್ವಾಸವಿಟ್ಟಿರುವ ಕಾರ್ಯಕರ್ತರಿಗೆ ಧನ್ಯವಾದವನ್ನು ಅರ್ಪಿಸಿದ್ದಾರೆ. ರಾಜಕಾರಣದಲ್ಲಿ ಮೌಲ್ಯಗಳು ಹದಗೆಡುತ್ತಿರುವ ಸಂದರ್ಭದಲ್ಲಿ ಬಾಲರಾಜು ಕೈಗೊಂಡಿರುವ ಈ ನಿರ್ಧಾರಕ್ಕೆ ಜನಸೇನಾ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಆಂಧ್ರ ಪ್ರದೇಶದಾದ್ಯಂತ ಹಲವರು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದೇಶೀಯವಾಗಿ ಖರೀದಿಗೆ ದೊರೆಯುವ ಟೊಯೊಟಾ ಫಾರ್ಚುನರ್ (Toyota Fortuner) ಫುಲ್-ಸೈಜ್ ಎಸ್‌ಯುವಿಯಾಗಿದೆ. ರೂ.33.44 ಲಕ್ಷದಿಂದ ರೂ.51.44 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಲೆಜೆಂಡರ್, ಸ್ಟ್ಯಾಂಡರ್ಡ್, ಜಿಆರ್-ಎಸ್ ರೂಪಾಂತರ (ವೇರಿಯೆಂಟ್)ಗಳನ್ನು ಒಳಗೊಂಡಿದ್ದು, ಪ್ಲಾಟಿನಂ ವೈಟ್ ಪರ್ಲ್, ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಕ್ರಿಸ್ಟಲ್ ಶೈನ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.
ಹೊಸ ಫಾರ್ಚುನರ್ ಎಸ್‌ಯುವಿ ಪೆಟ್ರೋಲ್ ಹಾಗೂ ಡೀಸೆಲ್ ಪವರ್‌ಟ್ರೇನ್‌ನೊಂದಿಗೆ ದೊರೆಯುತ್ತದೆ. ಇದರ 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 245 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್ 204 ಪಿಎಸ್ ಶಕ್ತಿ ಮತ್ತು 500 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.
ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 2WD (ಟೂ ವೀಲ್ ಡ್ರೈವ್) ಹಾಗೂ 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ. ಇಂಧನ ದಕ್ಷತೆ (Fuel Efficiency) ವಿಚಾರವಾಗಿ ಹೇಳುವುದಾದರೆ 10 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ನೂತನ ಫಾರ್ಚುನರ್ ಎಸ್‌ಯುವಿ 7 ಆಸನದೊಂದಿಗೆ ದೊರೆಯುತ್ತದೆ. 8-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 6-ಸ್ಪೀಕರ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜರ್, 7-ಏರ್‌ಬ್ಯಾಗ್, VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟ್ರಾಕ್ಷನ್ ಕಂಟ್ರೋಲ್ ಹಾಗೂ ಹಿಲ್ ಅಸಿಸ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications