ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಆಲ್ಟೊ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಶಿಕ್ಷಣ ಸಚಿವರು

ಯಾರಾದರೂ ಉಡುಗೊರೆಯಾಗಿ ಹೊಚ್ಚ ಹೊಸ ಕಾರನ್ನು ನೀಡಿದರೆ ಆಗುವ ಸಂತೋಷ ಅಷ್ಟಿಷ್ಟಲ್ಲ. ಈ ಹಿಂದೆ ಪೋಷಕರು ತಮ್ಮ ಮಕ್ಕಳಿಗೆ ಹಾಗೂ ಮಕ್ಕಳು ತಮ್ಮ ಪೋಷಕರಿಗೆ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಹಲವಾರು ಸುದ್ದಿಗಳನ್ನು ಪ್ರಕಟಿಸಲಾಗಿತ್ತು.

ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಆಲ್ಟೊ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಶಿಕ್ಷಣ ಸಚಿವರು

ಚಲನಚಿತ್ರ ತಾರೆಯರು ತಮ್ಮ ನಿರ್ದೇಶಕರು ಹಾಗೂ ಸಿಬ್ಬಂದಿಗಳಿಗೆ ಹೊಸ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದ ಹಲವಾರು ಸುದ್ದಿಗಳನ್ನು ಸಹ ಪ್ರಕಟಿಸಲಾಗಿತ್ತು. ಇತ್ತೀಚಿಗೆ ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ತಮ್ಮ ಜಿಮ್ ತರಬೇತುದಾರನಿಗೆ ರೇಂಜ್ ರೋವರ್ ವೆಲಾರ್ ಐಷಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದರು.

ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಆಲ್ಟೊ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಶಿಕ್ಷಣ ಸಚಿವರು

ಈಗ ಜಾರ್ಖಂಡ್‌ನ ಇಬ್ಬರು ವಿದ್ಯಾರ್ಥಿಗಳಿಗೆ ಹೊಚ್ಚ ಹೊಸ ಮಾರುತಿ ಸುಜುಕಿ ಆಲ್ಟೊ ಕಾರುಗಳನ್ನು ಉಡುಗೊರೆಯಾಗಿ ನೀಡಲಾಗಿದೆ. ಜಾರ್ಖಂಡ್ ರಾಜ್ಯದ ಶಿಕ್ಷಣ ಸಚಿವರು ಈ ಕಾರುಗಳನ್ನು ಉಡುಗೊರೆಯಾಗಿ ನೀಡಿರುವುದು ವಿಶೇಷ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಆಲ್ಟೊ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಶಿಕ್ಷಣ ಸಚಿವರು

ಜಗನಾಥ್ ಮಹ್ತೋ ಜಾರ್ಖಂಡ್ ರಾಜ್ಯದ ಶಿಕ್ಷಣ ಸಚಿವ. ಜಾರ್ಖಂಡ್‌ನ 10ನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆಗಳಲ್ಲಿ ರಾಜ್ಯ ಮಟ್ಟದಲ್ಲಿ ಅಗ್ರಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ಕಾರುಗಳನ್ನು ಬಹುಮಾನವಾಗಿ ನೀಡುವುದಾಗಿ ಜಗನಾಥ್ ಮಹ್ತೋ ಭರವಸೆ ನೀಡಿದ್ದರು.

ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಆಲ್ಟೊ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಶಿಕ್ಷಣ ಸಚಿವರು

ಈಗ ಅವರು ತಮ್ಮ ಭರವಸೆಯನ್ನು ಈಡೇರಿಸಿದ್ದಾರೆ. ಜಗನಾಥ್ ಮಹ್ತೋ ನಿನ್ನೆ ರಾಜ್ಯದ 10ನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆಗಳಲ್ಲಿ ಅಗ್ರ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಹೊಚ್ಚ ಹೊಸ ಆಲ್ಟೊ ಕಾರುಗಳನ್ನು ಉಡುಗೊರೆಯಾಗಿ ನೀಡಿದರು.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಆಲ್ಟೊ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಶಿಕ್ಷಣ ಸಚಿವರು

ಜಾರ್ಖಂಡ್ ರಾಜ್ಯದ ವಿಧಾನಸಭೆ ಕಟ್ಟಡದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮನೀಶ್ ಕುಮಾರ್ ಕಟಿಯಾರ್ ಹಾಗೂ ಅಮಿತ್ ಕುಮಾರ್ ಎಂಬುವವರೇ ಕ್ರಮವಾಗಿ 10 ಮತ್ತು 12ನೇ ತರಗತಿ ಪರೀಕ್ಷೆಗಳಲ್ಲಿ ಪ್ರಥಮ ಸ್ಥಾನ ಪಡೆದವರು.

ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಆಲ್ಟೊ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಶಿಕ್ಷಣ ಸಚಿವರು

ಜಗನಾಥ್ ಮಹ್ತೋ ಹೊಸ ಆಲ್ಟೊ ಕಾರುಗಳ ಕೀಗಳನ್ನು ಈ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ಈ ರೀತಿಯ ಉಡುಗೊರೆಗಳು ಭವಿಷ್ಯದಲ್ಲಿ ಇನ್ನಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಲು ಪ್ರೇರೇಪಿಸುತ್ತವೆ ಎಂದು ಅವರು ಹೇಳಿದರು.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಆಲ್ಟೊ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಶಿಕ್ಷಣ ಸಚಿವರು

12ನೇ ತರಗತಿ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ಅಮಿತ್ ಕುಮಾರ್ ಮಾತನಾಡಿ ಇದು ನಮಗೆ ಹೆಮ್ಮೆಯ ಕ್ಷಣವಾಗಿದೆ. ಕಾರನ್ನು ಗಿಫ್ಟ್ ಪಡೆದಿರುವುದಕ್ಕೆ ಸಂತೋಷವಾಗಿದೆ ಎಂದು ಹೇಳಿದರು.

ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಆಲ್ಟೊ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಶಿಕ್ಷಣ ಸಚಿವರು

ಇದು ನಮಗೆ ಮಾತ್ರವಲ್ಲದೇ ಭವಿಷ್ಯದ ವಿದ್ಯಾರ್ಥಿಗಳಿಗೂ ಸ್ಫೂರ್ತಿ ನೀಡುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ವಿದ್ಯಾರ್ಥಿಗಳಿಗೆ ಬಹುಮಾನವಾಗಿ ನೀಡಲಾದ ಮಾರುತಿ ಸುಜುಕಿ ಆಲ್ಟೊ ಕಾರಿನ ಬಗ್ಗೆ ಹೊಸದಾಗಿ ಹೇಳುವ ಅಗತ್ಯವಿಲ್ಲ.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಆಲ್ಟೊ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಶಿಕ್ಷಣ ಸಚಿವರು

ಮಾರುತಿ ಸುಜುಕಿ ಆಲ್ಟೊ ದೇಶಿಯ ಮಾರುಕಟ್ಟೆಯಲ್ಲಿರುವ ಅತ್ಯಂತ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಲ್ಲಿ ಒಂದಾಗಿದೆ. ಮಾರುತಿ ಸುಜುಕಿ ಆಲ್ಟೊ ಸಣ್ಣ ಕುಟುಂಬಗಳ ನೆಚ್ಚಿನ ಕಾರು. ಈ ಕಾರು ಬಜೆಟ್ ಬೆಲೆಯಲ್ಲಿ ಮಾರಾಟವಾಗುತ್ತದೆ.

Most Read Articles

Kannada
English summary
Jharkhand education minister gifts Alto car to toppers of class 10 and class 12. Read in Kannada.
Story first published: Thursday, September 24, 2020, 13:22 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X