ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಹೆಚ್ಚುತ್ತಿರುವ ಇಂಧನ ಬೆಲೆ ಪರಿಣಾಮ ಉದ್ಯಮ ಕಾರ್ಯಾಚರಣೆ ವೆಚ್ಚಗಳು ಹೆಚ್ಚುತ್ತಿದ್ದು, ಆಹಾರ ವಿತರಣಾ ಕಂಪನಿಯಾಗಿರುವ ಝೊಮ್ಯಾಟೋ ಕಂಪನಿಯು ಕೂಡಾ ತನ್ನ ಪಾಲುದಾರರೊಂದಿಗೆ ಇವಿ ವಾಹನಗಳ ಬಳಕೆ ಹೆಚ್ಚಿಸುತ್ತಿದೆ.

ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಹೊಸ ಯೋಜನೆಗೆ ಪೂರಕವಾಗಿ ಇಂಧನ ಮತ್ತು ಚಲನಶೀಲತೆಯ ಜಂಟಿ ಉದ್ಯಮ ಜಿಯೋ-ಬಿಪಿ ಸಂಸ್ಥೆಯೊಂದಿಗೆ ಝೊಮ್ಯಾಟೊ ಕಂಪನಿಯು ಪಾಲುದಾರಿಕೆಯನ್ನು ಘೋಷಿಸಿದ್ದು, ಹೊಸ ಪಾಲುದಾರಿಕೆಯ ಯೋಜನೆಯ ಅಡಿಯಲ್ಲಿ ದೇಶಾದ್ಯಂತ ಲಭ್ಯವಿರುವ ಜಿಯೋ-ಜಿಪಿ ಕೇಂದ್ರಗಳಲ್ಲಿ ಝೊಮ್ಯಾಟೊ ವಿತರಣಾ ಇವಿ ವಾಹನಗಳಿಗೆ ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಸೌಲಭ್ಯಗಳು ಲಭ್ಯವಾಗಲಿವೆ.

ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಕ್ಲೈಮೇಟ್ ಗ್ರೂಪ್ ಇನಿಶಿಯೇಟಿವ್ ಅಡಿಯಲ್ಲಿ 2030ರ ವೇಳೆಗೆ ತನ್ನ ಫ್ಲೀಟ್‌ನಲ್ಲಿರುವ ಶೇ.100 ವಾಹನಗಳನ್ನು ಎಲೆಕ್ಟ್ರಿಕ್‌ಗೆ ಪರಿವರ್ತಿಸುವ ಗುರಿಯನ್ನು ಹೊಂದಿರುವ ಝೊಮ್ಯಾಟೋ ಕಂಪನಿಯು ಈಗಿನಿಂದಲೇ ಹಂತ-ಹಂತವಾಗಿ ಇವಿ ವಾಹನಗಳನ್ನು ಸೇಪರ್ಡೆಗೊಳಿಸುತ್ತಿದೆ.

ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಕಳೆದ ವರ್ಷ ಜಿಯೋ-ಬಿಪಿ ಭಾರತದಲ್ಲಿ ಎರಡು ದೊಡ್ಡ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಹಬ್‌ಗಳನ್ನು ಪ್ರಾರಂಭಿಸಿದ್ದು, ಜಿಯೋ-ಬಿಪಿ ಅನೇಕ ಕಂಪನಿಗಳ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯಗಳನ್ನು ಒದಗಿಸುತ್ತಿದೆ.

ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಜಿಯೋ-ಬಿಪಿ ಪೆಟ್ರೋಲ್ ಬಂಕ್‌ಗಳಲ್ಲಿ ಚಾರ್ಜಿಂಗ್ ಕೇಂದ್ರಗಳು ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸಹ ಒಳಗೊಂಡಿದ್ದು, ಜಿಯೋ-ಬಿಪಿ ಎಲೆಕ್ಟ್ರಿಕ್ ವಾಹನಗಳಿಗೆ ಅನುಕೂಲಕರ ಪರಿಸರ ವ್ಯವಸ್ಥೆಯನ್ನು ರಚಿಸುವ ಗುರಿಯನ್ನು ಹೊಂದಿದೆ.

ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಜಿಯೋ-ಬಿಪಿ ಕಂಪನಿಗಳು ಜಿಯೋ ಬಿಪಿ ಪಲ್ಸ್ ಹೆಸರಿನ ಮೊಬೈಲ್ ಅಪ್ಲಿಕೇಶನ್ ಅನ್ನು ಸಹ ಪ್ರಾರಂಭಿಸಿದ್ದು, ಇದರ ಸಹಾಯದಿಂದ ಎಲೆಕ್ಟ್ರಿಕ್ ವಾಹನ ಚಾಲಕರು ತಮ್ಮ ಹತ್ತಿರದ ಚಾರ್ಜಿಂಗ್ ನಿಲ್ದಾಣಗಳನ್ನು ಅನ್ನು ಪತ್ತೆ ಮಾಡಬಹುದು ಸಹಾಯಮಾಡುತ್ತದೆ. ಇದು ವೇಗವಾಗಿ ಬೆಳೆಯುತ್ತಿರುವ ವಿತರಣೆ ಮತ್ತು ಸಾರಿಗೆ ವಿಭಾಗದಲ್ಲಿ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆಯನ್ನು ವೇಗಗೊಳಿಸಲು ಸಹಕರಿಸುತ್ತಿದ್ದು, ಜಿಯೋ-ಬಿಪಿ ಜೊತೆಗೆ ಟಿವಿಎಸ್ ಮತ್ತು ಮಹೀಂದ್ರಾ ಕಂಪನಿಗಳು ಸಹ ಪಾಲುದಾರಿಕೆ ಹೊಂದಿದೆ.

ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಇವಿ ವಾಹನಗಳ ಬಳಕೆಯನ್ನು ಉತ್ತೇಜಿಸಲು ದೇಶಾದ್ಯಂತ ಕೇಂದ್ರ ಸರ್ಕಾರದೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನ ಉತ್ತೇಜಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿರುವುದು ಮಹತ್ವದ ಬದಲಾವಣೆಗೆ ಕಾರಣವಾಗುತ್ತಿದೆ.

ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಪರಿಣಾಮವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡಲಾಗುತ್ತಿರುವುದರಿಂದ ಇವಿ ವಾಹನಗಳ ಬಳಕೆಗೆ ಸಾರ್ವಜನಿಕರು ಆದ್ಯತೆ ನೀಡುತ್ತಿದ್ದಾರೆ.

ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಇಂಧನ ಚಾಲಿತ ವಾಹನಗಳ ಬಳಕೆ ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಕರ್ನಾಟಕದಲ್ಲೂ ಸಹ ಇವಿ ವಾಹನ ನೋಂದಣಿ ಪ್ರಮಾಣದ ಕಳೆದ ತಿಂಗಳಿನಿಂದ ಸಾಕಷ್ಟು ಏರಿಕೆಯಾಗಿದೆ.

ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಕಳೆದ ಕೆಲ ತಿಂಗಳ ಹಿಂದೆ ಒಟ್ಟಾರೆ ವಾಹನಗಳ ನೋಂದಣಿ ಪ್ರಮಾಣದಲ್ಲಿ ಶೇ.1ರಿಂದ ಶೇ.2 ರಷ್ಟಿದ್ದ ಇವಿ ವಾಹನಗಳ ನೋಂದಣಿ ಪ್ರಮಾಣ ಇದೀಗ ಶೇ.4ಕ್ಕೆ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಹೆಚ್ಚಳ ಪರಿಣಾಮ ಇವಿ ವಾಹನಗಳು ಇನ್ನು ಹೆಚ್ಚಿನ ಮಟ್ಟದಲ್ಲಿ ರಸ್ತೆಗಿಳಿಯುತ್ತಿವೆ.

ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಇವಿ ವಾಹನಗಳ ನೋಂದಣಿ ಸದ್ಯ ಮೊದಲ ಸ್ಥಾನದಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳು ಮೊದಲ ಸ್ಥಾನದಲ್ಲಿದ್ದು, ತದನಂತರ ಎಲೆಕ್ಟ್ರಿಕ್ ಕಾರುಗಳು ಮತ್ತು ಎಲೆಕ್ಟ್ರಿಕ್ ವಾಹನಗಳು ಹೆಚ್ಚಿನ ಬೇಡಿಕೆ ಹೊಂದಿದ್ದು, ಇವಿ ವಾಹನಗಳಿಗೆ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ಕೂಡಾ ಹೆಚ್ಚಳವಾಗುತ್ತಿದೆ.

ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಮಾಹಿತಿಗಳ ಪ್ರಕಾರ ದೇಶಾದ್ಯಂತ ಇದುವರೆಗೆ ಸುಮಾರು 10 ಲಕ್ಷ ಇವಿ ವಾಹನಗಳು ನೋಂದಣಿಯಾಗಿವೆ ಎನ್ನಲಾಗಿದ್ದು, ಸಾಮಾನ್ಯ ವಾಹನಗಳ ನೋಂದಣಿ ಪ್ರಮಾಣಕ್ಕೆ ಹೋಲಿಕೆ ಮಾಡಿದರೆ ಇದು ತೀರಾ ಕಡಿಮೆ ಪ್ರಮಾಣ ಎನ್ನಬಹುದು. ಹೀಗಾಗಿ ಇವಿ ವಾಹನಗಳ ಉತ್ತೇಜನಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಇವಿ ವಾಹನಗಳ ಹೆಚ್ಚಳಕ್ಕೆ ಮುಖ್ಯವಾಗಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲಾಗುತ್ತಿದೆ.

ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಇಂಧನ ಚಾಲಿತ ವಾಹನಗಳ ಬಳಕೆ ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಇವಿ ವಾಹನ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಸಹ ಕ್ರಮ ಕೈಗೊಳ್ಳಲಾಗುತ್ತಿದೆ.

ಝೊಮ್ಯಾಟೊ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಪಾಲುದಾರಿಕೆ ಪ್ರಕಟ

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆಯನ್ನು ಆರಂಭಿಸುತ್ತಿವೆ.

Most Read Articles

Kannada
English summary
Jio bp partners with zomato for ev charging service
Story first published: Saturday, June 18, 2022, 18:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X