ಶ್ರಮಕ್ಕೆ ತಕ್ಕ ಪ್ರತಿಫಲ: ಜೆಕೆ ಸಿಮೆಂಟ್‌ನಿಂದ 65 ಮಹೀಂದ್ರಾ ಕಾರುಗಳು ಗಿಫ್ಟ್
ಹಬ್ಬ ಹಾಗೂ ವಿಶೇಷ ಸಂದರ್ಭದಲ್ಲಿ ಪ್ರಖ್ಯಾತ ಮಾಹಿತಿ ತಂತ್ರಜ್ಞಾನ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಕಾರು, ಬೈಕ್‌ಗಳನ್ನು ಉಡುಗೊರೆಯಾಗಿ ನೀಡುವುದನ್ನು ನೋಡಿದ್ದೇವೆ. ಇದೊಂದು ರೀತಿಯಲ್ಲಿ ಸಂಸ್ಥೆಯ ಏಳಿಗೆಗೆ ಸುದೀರ್ಘವಾಗಿ ಶ್ರಮಿಸಿದವರಿಗೆ ಗೌರವ ಸಲ್ಲಿಸುವ ಕಾರ್ಯವಾಗಿದೆ. ಇತ್ತೀಚೆಗೆ 'ಜೆಕೆ ಸಿಮೆಂಟ್' ಸಹ ಕಂಪನಿಯ ಬೆಳವಣಿಗೆಗೆ ಶ್ರಮಿಸಿದ ಡೀಲರ್‌ಗಳಿಗೆ ಕಾರನ್ನು ಗಿಫ್ಟ್ ನೀಡಿದೆ.
ದೇಶಾದ್ಯಂತ ಸಂಸ್ಥೆಯ ಪ್ರಗತಿಗೆ ದುಡಿದ ಡೀಲರ್‌ಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜೆಕೆ ಸಿಮೆಂಟ್ (JK Cement) ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿತ್ತು. ಇಲ್ಲಿ ಆಯ್ದ 65 ಡೀಲರ್ ಮಾಲೀಕರಿಗೆ ಮಹೀಂದ್ರಾ ಎಕ್ಸ್‌ಯುವಿ700 (XUV700) ಮತ್ತು ಸ್ಕಾರ್ಪಿಯೋ ಎನ್ (Scorpio N) ಎಸ್‌ಯುವಿಗಳ ಕೀಯನ್ನು ಕಂಪನಿಯ ಮುಖ್ಯಸ್ಥರು ಹಸ್ತಾಂತರಿಸಿದರು. ವಿಶೇಷವಾಗಿ ಈ ಕಾರುಗಳೆಲ್ಲ ಬಿಳಿ ಬಣ್ಣದಿಂದ ಕೂಡಿವೆ.

ಸದ್ಯ ಭಾರತದಲ್ಲಿ ವಿವಿಧ ರೂಪಾಂತರ ಹಾಗೂ ಎವರೆಸ್ಟ್ ವೈಟ್, ಮಿಡ್ನೈಟ್ ಬ್ಲಾಕ್, ನಪೋಲಿ ಬ್ಲಾಕ್ ಸೇರಿದಂತೆ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ದೊರೆಯುವ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ, ರೂ.13.99 ಲಕ್ಷದಿಂದ ರೂ.26.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್ ನೊಂದಿಗೆ ಲಭ್ಯವಿದೆ.
ಈ ಮಹೀಂದ್ರಾ ಎಕ್ಸ್‌ಯುವಿ700 (Mahindra XUV700), 6-ಸ್ವೀಡ್ ಮ್ಯಾನುವಲ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದ್ದು, 17 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ. ವಿನ್ಯಾಸ ದೃಷ್ಟಿಯಿಂದಲೂ ಅತ್ಯಾಧುನಿಕವಾಗಿದ್ದು, ನೋಡುಗರನ್ನು ಸೆಳೆಯುತ್ತದೆ. ಈ ಕಾರು 5, 6 ಹಾಗೂ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಸಿಗುತ್ತದೆ.

ಎಕ್ಸ್‌ಯುವಿ700 ಕಾರು ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 12 ಸ್ಪೀಕರ್, ದೊಡ್ಡದಾದ ಸನ್‌ರೂಫ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಹೊಂದಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಒಳಗೊಂಡಿದೆ.
ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಜನಪ್ರಿಯ ಎಸ್‌ಯುವಿಯಾಗಿದ್ದು, ರೂ.13.60 ಲಕ್ಷದಿಂದ ರೂ.24.54 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಝಡ್2, ಝಡ್4, ಝಡ್6, ಝಡ್8 ರೂಪಾಂತರ ಹಾಗೂ ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ನಾಪೋಲಿ ಬ್ಲ್ಯಾಕ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ. ಜೊತೆಗೆ 6 ಅಥವಾ 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ.

ಈ ಕಾರು 2 ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. 2.2-ಲೀಟರ್ ಡೀಸೆಲ್ ಹಾಗೂ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದ್ದು, 2WD (ಟೂ ವೀಲ್ ಡ್ರೈವ್) ಮತ್ತು 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.
ಸ್ಕಾರ್ಪಿಯೋ ಎನ್ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಕಾರು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್ ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications