Just In
Don't Miss!
- News
ಕೇಂದ್ರ ಸರ್ಕಾರ ಎನ್ಐಎ ನೋಟಿಸ್ ಮೂಲಕ ಕಿರುಕುಳ ನೀಡುತ್ತಿದೆ:ರೈತರ ಆರೋಪ
- Movies
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕರೋನಾ ವಿರುದ್ಧ ಹೋರಾಟಕ್ಕಾಗಿ 160 ಐಷಾರಾಮಿ ಕಾರಗಳನ್ನು ದೇಣಿಗೆ ನೀಡಿದ ಜೆಎಲ್ಆರ್
ಚೀನಾದಿಂದ ಆರಂಭವಾದ ಮಾಹಾಮಾರಿ ಕರೋನಾ ವೈರಸ್ ಇದೀಗ ವಿಶ್ವದ ಬಹುತೇಕ ರಾಷ್ಟ್ರಗಳಿಗೆ ವ್ಯಾಪ್ತಿಸಿದ್ದಲ್ಲದೇ ದಿನಂಪ್ರತಿ ಸಾವಿರಾರು ಜನ ಬಲಿ ಬಲಿ ಪಡೆಯುತ್ತಿದ್ದು, ವೈರಸ್ ವಿರುದ್ಧ ಹೋರಾಟಕ್ಕಾಗಿ ವೈದ್ಯಕೀಯ ಉಪಕರಣಗಳ ಕೊರತೆ ಎದುರಾಗಿದೆ.

ಇಡೀ ಜಗತ್ತನ್ನೇ ಆತಂಕಕ್ಕೆ ದೂಡಿರುವ ಮಹಾಮಾರಿ ಕರೋನಾ ವಿರುದ್ದ ಹೋರಾಟಕ್ಕೆ ವಿಶ್ವದ ಪ್ರಮುಖ ಒಂದಾಗಿ ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರದ ಪ್ರಯತ್ನಗಳಿಗೆ ಆಟೋ ಉತ್ಪಾದನಾ ಕಂಪನಿಗಳು ಅತಿ ಹೆಚ್ಚು ದೇಣಿಗೆ ನೀಡುವ ಮೂಲಕ ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿಯನ್ನು ಮೇರೆದಿವೆ. ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಹಲವು ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುತ್ತಿವೆ.

ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಮುಂದಾಗಿವೆ. ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗುತ್ತಿವೆ.

ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಆಟೋ ಕಂಪನಿಗಳು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲೇ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವುದಾಗಿ ಘೋಷಣೆ ಮಾಡಿವೆ.

ಭಾರತದಲ್ಲಿ ಮಾತ್ರವಲ್ಲದೇ ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲೂ ಆಟೋ ಉತ್ಪಾದನಾ ಕಂಪನಿಗಳು ತಮ್ಮ ಕೈಗಾದಷ್ಟು ದೇಣಿಗೆ ನೀಡುವ ಮೂಲಕ ಕರೋನಾ ವಿರುದ್ಧ ಹೋರಾಟಕ್ಕೆ ತಮ್ಮ ಪಾತ್ರವಹಿಸುತ್ತಿದ್ದು, ಜೆಎಲ್ಆರ್ ಕಂಪನಿಯು ಕೂಡಾ 167 ಐಷಾರಾಮಿ ಕಾರುಗಳನ್ನು ದೇಣಿಗೆ ನೀಡಿದೆ.

ಸಾಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ರೆಡ್ ಕ್ರಾಸ್ ಸಂಸ್ಥೆಗೆ 160 ಲ್ಯಾಂಡ್ ರೋವರ್ ರೇಂಜ್ ರೋವರ್ ಮತ್ತು ಡಿಫೆಂಡರ್ ಎಸ್ಯುವಿ ಕಾರುಗಳನ್ನು ದೇಣಿಗೆ ನೀಡಿದ್ದು, ಕರೋನಾ ವೈರಸ್ ಪೀಡಿತ ಪ್ರದೇಶಗಳಲ್ಲಿನ ಜನಸಹಾಯಕ್ಕಾಗಿ ಈ ಕಾರುಗಳನ್ನು ಬಳಕೆ ಮಾಡುವಂತೆ ಉಚಿತವಾಗಿ ನೀಡಿದೆ.

ಇಂಗ್ಲೆಂಡ್ ಒಂದರಲ್ಲೇ ಸುಮಾರು 67 ಡಿಫೆಂಡರ್ ಆಫ್ ರೋಡ್ ಕಾರುಗಳನ್ನು ದೇಣಿಗೆ ನೀಡಿರುವ ಜೆಎಲ್ಆರ್(ಜಾಗ್ವಾರ್, ಲ್ಯಾಂಡ್ ರೋವರ್ ಮತ್ತು ರೇಂಜ್ ರೋವರ್) ಕಂಪನಿಯು ಅಗತ್ಯ ವೈದ್ಯಕೀಯ ಉಪಕರಣಗಳನ್ನು ಸಹ ಒದಗಿಸುವುದಾಗಿ ಭರವಸೆ ನೀಡಿದೆ.

ಇನ್ನು ಚೀನಾದಿಂದ ಶುರುವಾದ ಕರೋನಾ ವೈರಸ್ ದಾಳಿಯು ಇದೀಗ ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಇದುವರೆಗೆ 11 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದಲ್ಲದೆ 61 ಸಾವಿರ ಜನ ಪ್ರಾಣಕಳೆದುಕೊಂಡಿದ್ದಾರೆ. 11 ಲಕ್ಷ ಜನರಲ್ಲಿ ಇದುವರೆಗೆ ಸುಮಾರು 2.36 ಲಕ್ಷ ಜನ ಗುಣಮುಖರಾಗಿದ್ದು, ಶೇ.5 ರಷ್ಟು ಸೋಂಕು ಪಿಡಿತರ ಸ್ಥಿತಿ ಶೋಚನೀಯವಾಗಿದೆ.