7-ಸೀಟರ್.. ರಸ್ತೆ ಮೇಲಿನ ಅರಮನೆಯಂತಿದೆ.. ಹೊಸ MPV ಖರೀದಿಸಿದ ಕನ್ನಡಿಗ ಕೆ.ಎಲ್ ರಾಹುಲ್, ಬೆಲೆ ಎಷ್ಟು, ಹೇಗಿದೆ?

ಕನ್ನಡಿಗ, ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ (K.L Rahul) ಅವರಿಗೆ ಕಾರುಗಳ ಮೇಲೆ ವಿಶೇಷ ಪ್ರೀತಿಯಿದೆ. ಮರ್ಸಿಡಿಸ್ ಸಿ43 ಎಎಂಜಿ, ಬಿಎಂಡಬ್ಲ್ಯೂ ಎಕ್ಸ್7, ಆಡಿ ಆರ್8 ಸೇರಿದಂತೆ ವಿವಿಧ ಸೆಡಾನ್ ಹಾಗೂ ಎಸ್‌ಯುವಿಗಳ ಮಾಲೀಕರಾಗಿದ್ದಾರೆ. ಸದ್ಯ ಹೊಚ್ಚ ಹೊಸ ಎಂಜಿ ಎಂ9 ಎಲೆಕ್ಟ್ರಿಕ್ ಎಂಪಿವಿ (MG M9 Electric Mpv) ಖರೀದಿ ಮಾಡಿದ್ದಾರೆ. ನೂತನ ಕಾರನ್ನು ಖುಷಿ - ಖುಷಿಯಿಂದ ವಿತರಣೆಯನ್ನು ಪಡೆದಿದ್ದಾರೆ.

ಎಂಜಿ ಎಂ9 ವಿಶೇಷತೆಗಳೇನು:

ಇದೊಂದು ಐಷಾರಾಮಿ ಎಲೆಕ್ಟ್ರಿಕ್ ಎಂಪಿವಿಯಾಗಿದ್ದು, ದುಬಾರಿ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.69.90 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. ಜೊತೆಗೆ ದೇಶದ ವಿವಿಧ ನಗರಗಳಲ್ಲಿ ರೂ.73,46 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಕೇವಲ 'ಸ್ಟ್ಯಾಂಡರ್ಡ್' ಆಯ್ಕೆಯಲ್ಲಿ ಮಾತ್ರ ಸಿಗಲಿದ್ದು, ಯಾವುದೇ ರೂಪಾಂತರಗಳನ್ನು (ವೇರಿಯೆಂಟ್) ಹೊಂದಿಲ್ಲ.

K L Rahul Buys MG M9 Electric Mpv Details

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಕನೆಕ್ಟ್ಡ್ ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಸ್ಲೈಡಿಂಗ್ ಡೋರ್‌ಗಳು ಹಾಗೂ 19 ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಮೆಟಲ್ ಬ್ಲ್ಯಾಕ್, ಬ್ಲ್ಯಾಕ್ ರೂಫ್ ವಿತ್ ಪರ್ಲ್ ಲಸ್ಟರ್ ವೈಟ್ & ಬ್ಲ್ಯಾಕ್ ರೂಫ್ ವಿತ್ ಕಾಂಕ್ರೀಟ್ ಗ್ರೇ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ 'ಎಂಜಿ ಎಂ9 ಎಲೆಕ್ಟ್ರಿಕ್ ಎಂಪಿವಿ' ಹೆಚ್ಚು ವಿಶಾಲ ಗಾತ್ರದಲ್ಲಿದೆ. 5,270 ಮಿ.ಮೀ ಉದ್ದ, 2,000 ಎಂಎಂ ಅಗಲ ಮತ್ತು 1,840 ಮಿ.ಮೀ ಎತ್ತರವಿದೆ. 3,200 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 2,600 ಕೆಜಿ ತೂಕವಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 90 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 548 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 242 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಈ ಕಾರಿನ ಬ್ಯಾಟರಿಯು 160 ಕೆಡಬ್ಲ್ಯೂ ಡಿಸಿ ಫಾಸ್ಟ್ ಚಾರ್ಜಿಂಗ್‌ನ್ನು ಉಪಯೋಗಿಸಿದಾಗ, ಪೂರ್ತಿ ಚಾರ್ಜ್ ಆಗಲು 90 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಹಾಗೆಯೇ 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 8.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಇಕೋ, ನಾರ್ಮಲ್ & ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ.

ಹೊಸ 'ಎಂಜಿ ಎಂ9' ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 7 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 465 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಇದು ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಕಪ್ ಹೋಲ್ಡರ್‌ಗಳು, ಸನ್‌ರೂಫ್, 64 ಕಲರ್ ಆಂಬಿಯೆಂಟ್ ಲೈಟಿಂಗ್ ಹಾಗೂ ಪ್ರೀಮಿಯಂ ಜೆಬಿಎಲ್ ಸೌಂಡ್ ಸಿಸ್ಟಮ್‌ನ್ನು ತನ್ನದಾಗಿಸಿಕೊಂಡಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Wednesday, October 15, 2025, 15:31 [IST]
English summary
K l rahul buys mg m9 electric mpv details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+