ಕಲ್ಯಾಣ ಕರ್ನಾಟಕದ ಜನರಿಗೆ ಸಿಹಿಸುದ್ದಿ: ಶೀಘ್ರ 250 ಹೊಸ ಬಸ್‌ಗಳು ಬರಲಿವೆ.. ಬೇಗ ನಿಮ್ಮೂರಿಗೆ ಹೋಗಬಹುದು!
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ರಾಜ್ಯಾದ್ಯಂತ ಜಾರಿಗೊಳಿಸಿರುವ ಶಕ್ತಿ ಯೋಜನೆಯು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (ಕೆಕೆಆರ್‌ಟಿಸಿ - KKRTC) ವರವಾಗಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು 250 ಹೊಸ ಬಸ್‌ಗಳನ್ನು ಖರೀದಿಸಲು ಸಾರಿಗೆ ನಿಗಮವು ಮುಂದಾಗಿದೆ ಎಂದು ವರದಿಯಾಗಿದೆ.
ಕಳೆದ ವರ್ಷ 30 ನಾನ್ ಎಸಿ ಸ್ಲೀಪರ್ ಹಾಗೂ 6 ಮಲ್ಟಿ ಆಕ್ಸೆಲ್ ವೋಲ್ವೋ ಬಸ್‌ಗಳು ಒಳಗೊಂಡಂತೆ 854 ನೂತನ ಬಸ್‌ಗಳು ಕೆಕೆಆರ್‌ಟಿಸಿಯ ವಿವಿಧ ವಿಭಾಗಗಳಿಗೆ ಸೇರ್ಪಡೆಗೊಂಡಿದ್ದವು. ಸದ್ಯ ಐಷಾರಾಮಿ ಬಸ್‌ಗಳಿಗೆ ಡಿಮ್ಯಾಂಡ್ ಅಧಿಕವಾಗಿದ್ದು, ಖಾಸಗಿ ಟ್ರಾವೆಲ್ ಏಜೆನ್ಸಿಗಳಿಗೆ ಸ್ಪರ್ಧೆಯೊಡ್ಡಲು ಕೆಕೆಆರ್‌ಟಿಸಿ ಅತ್ಯಾಧುನಿಕ ಸೌಕರ್ಯವನ್ನು ಹೊಂದಿರುವ ನೂತನ ಬಸ್‌ಗಳನ್ನು ಕೊಂಡುಕೊಳ್ಳಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಖಾಸಗಿ ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿರುವ ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ರಾಚಪ್ಪ.ಎಂ ಅವರು, 'ಕಳೆದ ವರ್ಷ ಖರೀದಿಸಿದ ಬಸ್‌ಗಳು ದೂರದ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಆದಾಯದ ಪ್ರಮಾಣವನ್ನು ಕೂಡ ಹೆಚ್ಚಿಸಿವೆ. ಪ್ರಯಾಣಿಕರ ಬೇಡಿಕೆಯನ್ನು ಸರಿದೂಗಿಸಲು 250 ಹೊಸ ಬಸ್‌ಗಳನ್ನು ತೆಗೆದುಕೊಳ್ಳುವ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ' ಎಂದು ಹೇಳಿದ್ದಾರೆ.
'ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ರೂ.45 ಕೋಟಿ ನೆರವಿನಡಿಯಲ್ಲಿ, ನೂತನ ಬಸ್‌ಗಳನ್ನು ಖರೀದಿಸುವ ಪ್ರಕ್ರಿಯೆಯು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನುಷ್ಠಾನಗೊಳಿಸಿದ ಮಾದರಿ ನೀತಿ ಸಂಹಿತೆಯಿಂದಾಗಿ ತಡವಾಗಿದೆ. ಈ ನೀತಿ ಸಂಹಿತೆ ಜಾರಿಯನ್ನು ತೆರೆವುಗೊಳಿಸಿದ ಹೊಸ ಬಸ್‌ಗಳನ್ನು ಖರೀದಿಸುವ ಪ್ರಕ್ರಿಯೆಗೆ ಮತ್ತಷ್ಟು ವೇಗ ಸಿಗಲಿದೆ ಎಂದು ರಾಚಪ್ಪ ಅವರು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ವ್ಯಾಪ್ತಿಗೆ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಹಾಗೂ ವಿಜಯಪುರ ಜಿಲ್ಲೆಗಳು ಒಳಪಡಲಿವೆ. ಕೆಕೆಆರ್‌ಟಿಸಿಯ ಒಟ್ಟು 4,800 ಬಸ್‌ಗಳು ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಗೆ ಸಂಪರ್ಕವನ್ನು ಕಲ್ಪಿಸುತ್ತಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಗಮ್ಯ ಸ್ಥಾನವನ್ನು ತಲುಪಿಸುತ್ತವೆ.
ರಾಜ್ಯಾದ್ಯಂತ ಶಕ್ತಿ ಯೋಜನೆ ಆರಂಭವಾದ ಬಳಿಕ, ಕೆಕೆಆರ್‌ಟಿಸಿ ಬಸ್‌ಗಳು ಪ್ರತಿದಿನ 2.3 ಲಕ್ಷ ಕಿಲೋಮೀಟರ್‌ನಷ್ಟು ಹೆಚ್ಚುವರಿಯಾಗಿ ಸಂಚಾರವನ್ನು ನಡೆಸುತ್ತಿವೆ. ಈ ಯೋಜನೆ ಜಾರಿಯಾಗುವ ಮೊದಲು, ಸಾರಿಗೆ ನಿಗಮದ ಬಸ್‌ಗಳು ದಿನವೊಂದಕ್ಕೆ 14.46 ಲಕ್ಷ ಕಿಲೋಮೀಟರ್ ಓಡಾಟವನ್ನು ನಡೆಸುತ್ತಿದ್ದವು. ಪ್ರಸ್ತುತ ಎಲ್ಲಾ 8 ಜಿಲ್ಲೆಗಳಿಂದ ಪ್ರತಿದಿನ 16.7 ಲಕ್ಷ ಕಿಲೋಮೀಟರ್ ಕಾರ್ಯಾಚರಣೆಯನ್ನು ಮಾಡುತ್ತಿವೆ.
ಕಲ್ಯಾಣ ಕರ್ನಾಟಕ ಜಿಲ್ಲೆಗಳ ಜೀವನಾಡಿಯಾಗಿರುವ ಕೆಕೆಆರ್‌ಟಿಸಿಯ ಆದಾಯವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಷ್ಟದಿಂದ ನಿಧಾನವಾಗಿ ಹೊರಬರುತ್ತಿದೆ. ಹೊಸ ಬಸ್‌ಗಳು ಶೀಘ್ರದಲ್ಲಿಯೇ ಸೇರ್ಪಡೆಗೊಳ್ಳುವುದರಿಂದ ಸಾರ್ವಜನಿಕರಿಗೆ ದೊಡ್ಡ ಮಟ್ಟದಲ್ಲಿ ಅನುಕೂಲವಾಗಲಿದ್ದು, ದೂರದ ಊರುಗಳಿಗೆ ಆರಾದಾಯಕವಾಗಿ ತೆರಳಲು ಸಾಧ್ಯವಾಗಲಿದೆ. ಜೊತೆಗೆ ಹಬ್ಬಗಳ ಸಂದರ್ಭದಲ್ಲಿ ಉಂಟಾಗುತ್ತಿದ್ದ ಪ್ರಯಾಣಿಕರ ದಟ್ಟಣೆಯೂ ಕಡಿಮೆಯಾಗಲಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








