ದುಬಾರಿ ಬೆಲೆಯ 'ಅಂಬಾರಿ' SUV ಖರೀದಿಸಿದ ಕನ್ನಡದ ನಟಿ ಐಶ್ವರ್ಯ ಸಿಂಧೋಗಿ!

ಐಶ್ವರ್ಯ ಸಿಂಧೋಗಿ (Aishwarya Shindogi) ಜನಪ್ರಿಯ ಕಿರುತೆರೆ ನಟಿಯಾಗಿದ್ದಾರೆ. ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ ಸ್ಪರ್ಧಿಯಾಗಿ ಭಾಗವಹಿಸುವುದರೊಂದಿಗೆ ದೊಡ್ಡ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದರು. ಐಶ್ವರ್ಯ ಅವರು ನಾಗಿಣಿ 2, ಮಂಗಳ ಗೌರಿ ಮದುವೆ ಹಾಗೂ ನಮ್ಮ ಲಚ್ಚಿ ಧಾರವಾಹಿಗಳಲ್ಲೂ ಅಭಿನಯಿಸುವ ಮೂಲಕ ಮನೆ ಮಾತಾಗಿದ್ದಾರೆ. ಬೆಳ್ಳಿ ಪರದೆಯಲ್ಲೂ ಕಾಣಿಸಿಕೊಂಡಿದ್ದು, ಸಿಂಹಾದ್ರಿ, ಸಂಯುಕ್ತ 2, ಡಾರ್ಕ್ ಮತ್ತು ಸೈತಾನ್ ಸೇರಿದಂತೆ ವಿವಿಧ ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ.

ಸದ್ಯ, ನಟಿ ಐಶ್ವರ್ಯ ಸಿಂಧೋಗಿ ದುಬಾರಿ ಬೆಲೆಯ ಹೊಚ್ಚ ಹೊಸ ಎಂಜಿ ಹೆಕ್ಟರ್ ಎಸ್‌ಯುವಿ (MG Hector SUV) ಖರೀದಿ ಮಾಡಿದ್ದಾರೆ. ನೂತನ ಕಾರನ್ನು ಸ್ನೇಹಿತರಾದ ಮೋಕ್ಷಿತಾ ಪೈ ಹಾಗೂ ಶಿಶಿರ್ ಶಾಸ್ತ್ರಿ ಅವರೊಂದಿಗೂ ವಿತರಣೆ ಪಡೆದಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲೂ ಫುಲ್ ವೈರಲ್ ಆಗಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

Kannada Actor Aishwarya Shindogi Buys MG Hector Suv Details

ಎಂಜಿ ಹೆಕ್ಟರ್ ವಿಶೇಷತೆಗಳೇನು...

ಈ ಎಸ್‌ಯುವಿ ರೂ.14 ಲಕ್ಷದಿಂದ ರೂ.22.89 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 587 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ನೂತನ ಎಂಜಿ ಹೆಕ್ಟರ್ ಎಸ್‌ಯುವಿ, ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಇದು ನೋಡುಗರ ಕಣ್ಮನ ಸೆಳೆಯುತ್ತದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ ಸ್ಟೈಲ್, ಶೈನ್ ಪ್ರೋ, ಸೆಲೆಕ್ಟ್ ಪ್ರೋ & ಸ್ಮಾರ್ಟ್ ಪ್ರೋ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

ಹೊಸ ಹೆಕ್ಟರ್ ಕಾರು ಬಲಿಷ್ಠವಾದ ಎರಡು ಪವರ್‌ಟ್ರೇನ್ ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ಸಿಗುತ್ತದೆ. ಇದು 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2.0-ಲೀಟರ್ ಡಿಸೇಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್/ ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಹತ್ತಿರತ್ತಿರ 16 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡಬಲ್ಲದು.

ಈ ಎಸ್‌ಯುವಿ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ 14-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಇದರೊಟ್ಟಿಗೆ ಗ್ಲೇಜ್ ರೆಡ್, ಅರೋರಾ ಸಿಲ್ವರ್, ಸ್ಟಾರಿ ಬ್ಲ್ಯಾಕ್ & ಡ್ಯೂನ್ ಬ್ರೌನ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗಬಲ್ಲದು.

ನೂತನ ಎಂಜಿ ಹೆಕ್ಟರ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಒಳಗೊಂಡಿದೆ. ಈ ಕಾರಿಗೆ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್ ಹಾಗೂ ಟಾಟಾ ಹ್ಯಾರಿಯರ್ ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, May 17, 2025, 8:30 [IST]
English summary
Kannada actor aishwarya shindogi buys mg hector suv details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+