ಸದ್ದಿಲ್ಲದೇ ಕಲ್ಲು ಬಂಡೆಯಂತ 'ಟಾಟಾ' ಕಾರು ಖರೀದಿಸಿದ ಕನ್ನಡದ ನಟಿ.. ಬೆಲೆ ಕೇಳಿದ್ರೆ ಬೆಚ್ಚಿಬೀಳ್ತಿರಾ!
ಕನ್ನಡದ ಬಿಗ್‌ಬಾಸ್ ಸೀಸನ್-8ರಲ್ಲಿ ಸ್ಪರ್ಧಿಯಾಗಿ ಭಾಗವಹಿಸುವ ಮೂಲಕ ನಟಿ ದಿವ್ಯಾ ಉರುಡುಗ (Divya Uruduga) ದೊಡ್ಡ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದರು. ಸದ್ಯ, ದಿವ್ಯಾ ಕಲರ್ಸ್ ಕನ್ನಡ ವಾಹಿನಿಯಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವ 'ನಿನಗಾಗಿ' ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಅವರಿಗೆ ಭಾರೀ ಸಂಖ್ಯೆಯ ಅಭಿಮಾನಿ ಬಳಗವೇ ಇದೆ. 'ಅರ್ಧಂಬರ್ಧ ಪ್ರೇಮಕಥೆ' ಸಿನಿಮಾ ಮೂಲಕ ದಿವ್ಯಾ ಸ್ಯಾಂಡಲ್‌ವುಡ್‌ಗೂ ಎಂಟ್ರಿ ಕೊಟ್ಟಿದ್ದರು. ಆದರೆ, ಈ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಸಕ್ಸಸ್ ಕಾಣಲಿಲ್ಲ.
ಇತ್ತೀಚೆಗೆ ನಟಿ ದಿವ್ಯಾ ಉರುಡುಗ ಅವರು, ಹೊಚ್ಚ ಹೊಸ ಟಾಟಾ ಹ್ಯಾರಿಯರ್ (Tata Harrier) ಎಸ್‌ಯುವಿಯನ್ನು ಖರೀದಿ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿಯೂ ಹಂಚಿಕೊಂಡಿದ್ದಾರೆ. ಅಭಿಮಾನಿಗಳು, ಸ್ನೇಹಿತರು ಹಾಗೂ ಸಿನಿರಂಗದ ಸೆಲೆಬ್ರಿಟಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ನಟಿ ದಿವ್ಯಾ ಉರುಡುಗ ನೂತನ ಕಾರನ್ನು ವಿತರಣೆ ಪಡೆಯುವಾಗ ಅರವಿಂದ್ ಕೆ.ಪಿ ಕೂಡ ಜೊತೆಗಿದ್ದರು. ಬಿಗ್‌ಬಾಸ್ ಶೋನಲ್ಲಿ ದಿವ್ಯಾ ಮಾತ್ರವಲ್ಲದೆ, ಅರವಿಂದ್ ಸಹ ಭಾಗವಹಿಸಿದ್ದರು. ಆಗ ಇಬ್ಬರ ನಡುವೆ ಸ್ನೇಹ ಏರ್ಪಟ್ಟಿತ್ತು. ನಂತರ ಅದು ಪ್ರೀತಿಗೆ ತಿರುಗಿತ್ತು. ಇದೀಗ ದಿವ್ಯಾ ಹಾಗೂ ಅರವಿಂದ್ ಮದುವೆಯಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ನೂತನ ಟಾಟಾ ಹ್ಯಾರಿಯರ್ ಎಸ್‌ಯುವಿ, ರೂ.14.99 ಲಕ್ಷದಿಂದ ರೂ.25.89 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ. 16.8 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹೊಸ ಟಾಟಾ ಹ್ಯಾರಿಯರ್ ಎಸ್‌ಯುವಿ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಕೋರಲ್ ರೆಡ್, ಪೆಬಲ್ ಗ್ರೇ, ಲೂನಾರ್ ವೈಟ್, ಒಬೆರಾನ್ ಬ್ಲಾಕ್ ಮತ್ತು ಸೀವೀಡ್ ಗ್ರೀನ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. ಈ ಕಾರನಲ್ಲಿ 5 ಮಂದಿ ಸುಲಭವಾಗಿ ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 445 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ನೂತನ ಹ್ಯಾರಿಯರ್ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಡುಯಲ್-ಜೋನ್ ಆಟೋಮೆಟಿಕ್ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಪನೊರೊಮಿಕ್ ಸನ್‌ರೂಫ್, ಏರ್ ಪ್ಯೂರಿಫೈಯರ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟುಗಳನ್ನು ಹೊಂದಿದೆ.
ಈ ಟಾಟಾ ಹ್ಯಾರಿಯರ್ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಹಿಲ್ ಅಸಿಸ್ಟ್, ಕ್ರೂಸ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications