ಹೊಸ ಮಹೀಂದ್ರಾ ಥಾರ್ ಖರೀದಿಸಿದ ಉತ್ತರ ಕರ್ನಾಟಕದ 'ಡಾಕ್ಟರ್' ನಟಿ.. ಊದುಬತ್ತಿ ಹಚ್ಚಿ ಪೂಜೆ!
ಕನ್ನಡದ ಪ್ರಮುಖ ಯುವ ನಟಿಯಾಗಿ ಲಾವಣ್ಯ ಹಿರೇಮಠ (Lavanya hiremath) ಗುರುತಿಸಿಕೊಂಡಿದ್ದಾರೆ. ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಲಕ್ಷ್ಮೀ ಬಾರಮ್ಮ (Lakshmi Baramma) ಸೀರಿಯಲ್‌ನಲ್ಲಿ ನಟಿಸುವ ಮೂಲಕ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ರಾಯಚೂರಿನ ಲಿಂಗಸೂರಿನವರಾದ ಲಾವಣ್ಯ ದಂತ ವೈದ್ಯೆಯಾಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಆಕಾಶ್ ಆಚಾರ್ಯ ಎಂಬುವರೊಂದಿಗೆ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದರು. ಇತ್ತೀಚೆಗೆ ನಟಿ ಲಾವಣ್ಯ ಹಿರೇಮಠ ಹೊಚ್ಚ ಹೊಸ ಮಹೀಂದ್ರಾ ಥಾರ್ ಎಸ್‌ಯುವಿ ಖರೀದಿಸುವ ಮೂಲಕವು ದೊಡ್ಡಮಟ್ಟದಲ್ಲಿ ಸುದ್ದಿಯಾಗಿದ್ದಾರೆ.
ನೂತನ 3-ಡೋರ್ ಮಹೀಂದ್ರಾ ಥಾರ್ (3-Door Mahindra Thar) ಕಾರನ್ನು ಖರೀದಿಸಿರುವ ಬಗ್ಗೆ ಸ್ವತಃ ನಟಿ ಲಾವಣ್ಯ ಅವರೇ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಲಾವಣ್ಯ ಮಹೀಂದ್ರಾ ಶೋರೂಂಗೆ ಬರುವುದು, ಹೊಸ ಕಾರನ್ನು ಅನಾವರಣಗೊಳಿಸುವುದು.. ಕೇಕ್ ಕಟ್ ಮಾಡುವುದು ಹಾಗೂ ಊದುಬತ್ತಿ ಹಚ್ಚಿ ಪೂಜಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಹೊಸ ಕಾರು ತೆಗೆದುಕೊಂಡಿರುವುದಕ್ಕೆ ನಟಿ ಲಾವಣ್ಯಗೆ ಸ್ನೇಹಿತರು, ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಆದರೆ, ಲಾವಣ್ಯ ಅವರು ಮಹೀಂದ್ರಾ ಥಾರ್ ಎಸ್‌ಯುವಿಯ ಯಾವ ರೂಪಾಂತರವನ್ನು (ವೇರಿಯೆಂಟ್) ತೆಗೆದುಕೊಂಡಿದ್ದಾರೆ.. ಅದರ ಬೆಲೆ ಎಷ್ಟು ಎಂಬುದರ ಕುರಿತಂತೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.
ದೇಶೀಯವಾಗಿ ಖರೀದಿಗೆ ದೊರೆಯುವ 3-ಡೋರ್ ಮಹೀಂದ್ರಾ ಥಾರ್ ಎಸ್‌ಯುವಿ, ರೂ.11.35 ರಿಂದ ರೂ.17.60 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು, ಶಕ್ತಿಯುತವಾಗಿರುವ 1.5-ಲೀಟರ್ ಡೀಸೆಲ್, 2.2-ಲೀಟರ್ ಡೀಸೆಲ್ ಮತ್ತು 2.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ವೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಈ 3-ಡೋರ್ ಮಹೀಂದ್ರಾ ಥಾರ್‌ನಲ್ಲಿ 4 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಇದು ಆಫ್-ರೋಡ್ ಎಸ್‌ಯುವಿಯಾಗಿರುವುದರಿಂದ 15.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಕ್ರೂಸ್ ಕಂಟ್ರೋಲ್ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಎರಡು ತಿಂಗಳ ಹಿಂದೆ ಮಹೀಂದ್ರಾ ಥಾರ್ ರಾಕ್ಸ್ 5-ಡೋರ್ (Mahindra Thar Roxx 5-Door) ಎಸ್‌ಯುವಿಯೂ ಮಾರಾಟಕ್ಕೆ ಬಂದಿತ್ತು. ಈ ಕಾರು ಕನಿಷ್ಠ ರೂ.12.99 ಲಕ್ಷ ಮತ್ತು ಗರಿಷ್ಠ ರೂ.22.49 ಲಕ್ಷ (ಎಕ್ಸ್ ಶೋರೂಂ - ಬೆಂಗಳೂರು) ಬೆಲೆಯನ್ನು ಒಳಗೊಂಡಿದೆ. 2.0-ಲೀಟರ್ 4-ಸಿಲಿಂಡರ್ ಟರ್ಬೊ-ಪೆಟ್ರೋಲ್ ಹಾಗೂ 2-ಲೀಟರ್ 4-ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಇದರಲ್ಲಿ 5 ಜನರು ಓಡಾಟ ನಡೆಸಬಹುದು.
ನೂತನ ಮಹೀಂದ್ರಾ ಥಾರ್ ರಾಕ್ಸ್ 5-ಡೋರ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಪನೋರಮಿಕ್ ಸನ್‌ರೂಫ್‌ನಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. 6-ಏರ್‌ಬ್ಯಾಗ್, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಸೇರಿದಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications