ಹೊಚ್ಚ ಹೊಸ ಪೋಕ್ಸ್‌ವ್ಯಾಗನ್ ವರ್ಟಸ್ ಜಿಟಿ ಕಾರು ಖರೀದಿಸಿದ ಕನ್ನಡದ ನಟಿ
ಕನ್ನಡದ ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಮಾಂಗಲ್ಯಂ ತಂತು ನಾನೇನ' ಧಾರಾವಾಹಿಯಲ್ಲಿ ಅಭಿನಯಿಸುವ ಮೂಲಕ ನಟಿ ಪ್ರಜ್ಞಾ ಭಟ್ (Prajna Bhat) ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ನಿನ್ನೆಯಷ್ಟೇ ನೂತನ ಪೋಕ್ಸ್‌ವ್ಯಾಗನ್ ವರ್ಟಸ್ ಜಿಟಿ ಪ್ಲಸ್ (Volkswagen Virtus GT Plus) ಕಾರನ್ನು ಕೊಂಡುಕೊಂಡಿದ್ದಾರೆ.
ಹೊಚ್ಚ ಹೊಸ ಪೋಕ್ಸ್‌ವ್ಯಾಗನ್ ವರ್ಟಸ್ ಜಿಟಿ ಪ್ಲಸ್ ಸೆಡಾನ್‌ನ್ನು ವಿತರಣೆ ಪಡೆಯುತ್ತಿರುವ ಫೋಟೋವನ್ನು ನಟಿ ಪ್ರಜ್ಞಾ ಭಟ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿಯೂ ಹಂಚಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ಪ್ರಜ್ಞಾ ಭಟ್, ಪತಿ ನಾಗಶ್ರೀತ್ ಭಟ್ ಅವರೊಂದಿಗೆ ನೂತನ ಕಾರನ್ನು ವಿತರಣೆ ಪಡೆಯುತ್ತಿರುವುದನ್ನು ಕಾಣಬಹುದು. ಶೃಂಗೇರಿ ಮೂಲದ ನಟಿ ಪ್ರಜ್ಞಾ ಭಟ್ 'ಒಲವೇ ಮಂದಾರ 2' ಸಿನಿಮಾದಲ್ಲಿಯೂ ನಟಿಸಿದ್ದಾರೆ.

ನಟಿ ಪ್ರಜ್ಞಾ ಭಟ್ ಪತಿಯೊಂದಿಗೆ ಖರೀದಿಸಿರುವ ಪೋಕ್ಸ್‌ವ್ಯಾಗನ್ ವರ್ಟಸ್ ಜಿಟಿ ಪ್ಲಸ್ ಸೆಡಾನ್ ಬಗ್ಗೆ ಹೇಳುವುದಾದರೆ, ಇದು ಸುಮಾರು ರೂ.17.60 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ ಕ್ಯಾಂಡಿ ವೈಟ್, ರಿಫ್ಲೆಕ್ಸ್ ಸಿಲ್ವರ್, ಡೀಪ್ ಬ್ಲ್ಯಾಕ್ ಪರ್ಲ್, ಲಾವಾ ಬ್ಲೂ ಸೇರಿದಂತೆ 8 ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಪೋಕ್ಸ್‌ವ್ಯಾಗನ್ ವರ್ಟಸ್ ಜಿಟಿ ಪ್ಲಸ್ (Volkswagen Virtus GT Plus) ಕಾರು, 1.5-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 150 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 6-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯಲಿದ್ದು, 18.67 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಈ ಕಾರು ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, ನೋಡಿದ ಕೊಡಲೇ ಪ್ರತಿಯೊಬ್ಬರನ್ನು ತನ್ನತ್ತ ಆಕರ್ಷಿಸುತ್ತದೆ. ಅದಕ್ಕಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಾರೆ. ಹಾಗೆಯೇ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ಇಂದೊದು ಸೆಡಾನ್ ಆಗಿರುವುದರಿಂದ 521 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಕೂಡ ಪಡೆದಿದೆ.
ನೂತನ ಪೋಕ್ಸ್‌ವ್ಯಾಗನ್ ವರ್ಟಸ್ ಜಿಟಿ ಸೆಡಾನ್, 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಸಿಂಗಲ್ ಪೇನ್ ಸನ್‌ರೂಫ್, ಕನೆಕ್ಟ್ದ್ ಕಾರ್ ಟೆಕ್, ವೈರ್‌ಲೆಸ್ ಫೋನ್ ಚಾರ್ಜರ್ , ರೈನ್ ಸೇನಾರ್ಸ್ ವೈಪರ್ಸ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತೆಗೂ ಈ ಕಾರು ಹೆಸರುವಾಸಿಯಾಗಿದ್ದು, ಗ್ಲೋಬಲ್ ಎನ್‌ಸಿಎಪಿಯಿಂದ 5 ಸ್ಟಾರ್ ರೇಟಿಂಗ್ ಪಡೆದಿದೆ. 6 ಏರ್ ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಹೋಲ್ಡ್ ಅಸಿಸ್ಟ್, ISOFIX ಚೈಲ್ಡ್ ಸೀಟ್ ಆಂಕರ್ಸ್, ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ. ಪೋಕ್ಸ್‌ವ್ಯಾಗನ್ ವರ್ಟಸ್ ಜಿಟಿ ಸೆಡಾನ್‌ಗೆ ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆರ್ನಾ, ಮಾರುತಿ ಸುಜುಕಿ ಸಿಯಾಜ್ ಮತ್ತು ಹೋಂಡಾ ಸಿಟಿ ದೊಡ್ಡ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








