'ಲಕ್ಷ್ಮೀ ಬಾರಮ್ಮ' ನಟಿ ರಶ್ಮಿ ಪ್ರಭಾಕರ್ರಿಂದ ದುಬಾರಿ ಮಹೀಂದ್ರಾ ಕಾರು ಖರೀದಿ.. ಅರಮನೆಯಂತಹ ವೈಶಿಷ್ಟ್ಯಗಳು!
ನಟಿ ರಶ್ಮಿ ಪ್ರಭಾಕರ್ (Rashmi Prabhakar), ಕಲರ್ಸ್ ಕನ್ನಡ ವಾಹಿನಿ ಪ್ರಸಾರವಾಗುತ್ತಿದ್ದ 'ಲಕ್ಷ್ಮೀ ಬಾರಮ್ಮ' ಧಾರಾವಾಹಿಯ 'ಚಿನ್ನು' ಪಾತ್ರದಲ್ಲಿ ಅಭಿಯಿಸುವ ಮೂಲಕ ಮನೆ ಮಾತಾಗಿದ್ದರು. ಸದ್ಯ, ತೆಲುಗಿನಲ್ಲಿ ಫುಲ್ ಬ್ಯುಸಿಯಾಗಿದ್ದು, 'ಬೊಮ್ಮರಿಲು' ಸೀರಿಯಲ್‌ನಲ್ಲಿ ನಟಿಸುತ್ತಿದ್ದು, ನೆಗೆಟಿವ್ ರೋಲ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ರಶ್ಮಿ ಪ್ರಭಾಕರ್ 'ಲಕ್ಷ್ಮೀ ಬಾರಮ್ಮ ಮಾತ್ರವಲ್ಲದೆ, ಕನ್ನಡದ ಶುಭ ವಿವಾಹ, ಮಹಾಭಾರತ ಮತ್ತು ಜೀವನ ಚೈತ್ರ ಧಾರವಾಹಿಯಲ್ಲಿಯೂ ಅಭಿನಯಿಸಿದ್ದಾರೆ. ಬಿಬಿ5 ಹಾಗೂ ಮಹಾಕಾವ್ಯ ಸಿನಿಮಾಗಳಲ್ಲಿ ಕೂಡ ಬಣ್ಣ ಹಚ್ಚಿದ್ದಾರೆ.
ಇದೀಗ, ನಟಿ ರಶ್ಮಿ ಪ್ರಭಾಕರ್ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ 700 (Mahindra XUV 700) ಎಸ್‌ಯುವಿಯನ್ನು ಖರೀದಿ ಮಾಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪತಿ ನಿಖಿಲ್ ಭಾರ್ಗವ್ ಹಾಗೂ ಕುಟುಂಬದ ಸದಸ್ಯರೊಂದಿಗೆ ನೂತನ ಕಾರನ್ನು ವಿತರಣೆ ಪಡೆಯುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸೆಲೆಬ್ರಿಟಿಗಳು, ಸ್ನೇಹಿತರು ಮತ್ತು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಮಹೀಂದ್ರಾ ಎಕ್ಸ್‌ಯುವಿ 700 ವಿಶೇಷತೆಗಳೇನು: ಈ ಕಾರು ರೂ.13.99 ಲಕ್ಷದಿಂದ ರೂ.25.74 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಎಎಕ್ಸ್3, ಎಎಕ್ಸ್5 ಮತ್ತು ಎಎಕ್ಸ್7 ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಮಿಡ್‌ನೈಟ್ ಬ್ಲ್ಯಾಕ್, ಎವರೆಸ್ಟ್ ವೈಟ್, ಡ್ಯಾಜ್ಲಿಂಗ್ ಸಿಲ್ವರ್, ರೆಡ್ ರೇಜ್ ಮತ್ತು ಎಲೆಕ್ಟ್ರಿಕ್ ಬ್ಲೂ ಒಳಗೊಂಡನಂತೆ ವಿವಿಧ ಬಣ್ಣಗಳನ್ನು ಪಡೆದಿದೆ.
ನೂತನ ಮಹೀಂದ್ರಾ ಎಕ್ಸ್‌ಯುವಿ 700 ಎಸ್‌ಯುವಿ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, 'ಸಿ' ಆಕಾರಕ್ಕೆ ಹೋಲುವ ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು 18-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಇದರೊಟ್ಟಿಗೆ 5, 6 ಮತ್ತು 7 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಲಭ್ಯವಿದೆ.

ಈ ಎಸ್‌ಯುವಿ ಶಕ್ತಿಯುತವಾದ ಎರಡು ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಇದರ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 200 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 2.2-ಲೀಟರ್ ಡೀಸೆಲ್ ಎಂಜಿನ್, 185 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 450 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಹೊಸ ಮಹೀಂದ್ರಾ ಎಕ್ಸ್‌ಯುವಿ 700 ಎಸ್‌ಯುವಿ, ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. ಎಫ್‌ಡಬ್ಲ್ಯೂಡಿ (ಫ್ರಂಟ್-ವೀಲ್ ಡ್ರೈವ್) ಹಾಗೂ ಎಡಬ್ಲ್ಯೂಡಿ (ಆಲ್-ವೀಲ್ ಡ್ರೈವ್) ಟೆಕ್ನಾಲಜಿಯನ್ನು ಪಡೆದಿದೆ. ಸರಿ ಸುಮಾರು 17 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.
ನೂತನ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ (10.25-ಇಂಚು), 12-ಸ್ಪೀಕರ್ ಆಡಿಯೊ ಸಿಸ್ಟಮ್, ಪನೋರಮಿಕ್ ಸನ್‌ರೂಫ್ ಮತ್ತು ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications