ಬಡವರ ಮಕ್ಕಳು ಬೆಳಿಬೇಕು.. ಕನ್ನಡದ ಹಾಸ್ಯ ನಟ ಚಿಲ್ಲರ್ ಮಂಜುರಿಂದ ದುಬಾರಿ ಟಾಟಾ ಕರ್ವ್ ಕಾರು ಖರೀದಿ!

ಚಿಲ್ಲರ್ ಮಂಜು (Chiller Manju) ಕನ್ನಡದ ಉದಯೋನ್ಮುಖ ಹಾಸ್ಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಪ್ರತ್ರ್ಯೇಕವಾದ ಅಭಿಮಾನಿ ಬಳಗವು ಇದೆ. ಯುವ ನಟ ಶ್ರೇಯಸ್ ಮಂಜು ನಟನೆಯ 'ದಿಲ್ ದಾರ್' ಸಿನಿಮಾದಲ್ಲಿಯೂ ಅವರು ಅಭಿನಯಿಸಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಶೋ ಗಿಚ್ಚಿ ಗಿಲಿಗಿಲಿಯಲ್ಲಿ ಚಿಲ್ಲರ್ ಮಂಜು ಪರ್ಮನೆಂಟ್ ಕಲಾವಿದರಾಗಿದ್ದರು. ಅವರು ತಮ್ಮ ಮನೋಜ್ಞ ಅಭಿನಯದ ಮೂಲಕ ಕಿರುತೆರೆ ವೀಕ್ಷಕರ ಮನ ಗೆಲ್ಲುವಲ್ಲಿಯೂ ಯಶಸ್ವಿಯಾಗಿದ್ದರು. ಸಾಮಾನ್ಯ ಕುಟುಂಬದಿಂದ ಬಂದ ಮಂಜು, ಜೀವನದಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ.

ಸದ್ಯ, ನಟ ಚಿಲ್ಲರ್ ಮಂಜು ಸಂಕ್ರಾಂತಿ ಹಬ್ಬಕ್ಕೆ ಹೊಚ್ಚ ಹೊಸ ಟಾಟಾ ಕರ್ವ್ (Tata Curvv) ಕೂಪೆ ಎಸ್‌ಯುವಿಯನ್ನು ಖರೀದಿ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿಯೂ ಹಂಚಿಕೊಂಡಿದ್ದು, ನೂತನ ಕಾರಿನ ವಿತರಣೆ ಪಡೆಯುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ನಟ ಚಿಲ್ಲರ್ ಮಂಜು ಈ ಕಾರು ತೆಗೆದುಕೊಂಡಿರುವುದಕ್ಕೆ ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

Kannada Comedy Actor Chiller Manju Buys Tata Curvv Suv Details

ಹೊಸ ಟಾಟಾ ಕರ್ವ್ ವಿಶೇಷತೆಗಳೇನು: ಈ ಕಾರು ರೂ.10 ಲಕ್ಷದಿಂದ ರೂ.19 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಸ್ಮಾರ್ಟ್, ಕ್ರಿಯೇಟಿವ್ ಮತ್ತು ಅಕಾಂಪ್ಲಿಶ್ಡ್ ಎಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಜೊತೆಗೆ ಆಕರ್ಷಕವಾದ ವಿನ್ಯಾಸ ಪಡೆದಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಡುಯಲ್-ಟೋನ್ ಅಲಾಯ್ ವೀಲ್‌ಗಳು & ಎಲ್‌ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ.

ಈ ಕಾರು ವಿವಿಧ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. 1.2 ಲೀಟರ್ ಟರ್ಬೊ ಪೆಟ್ರೋಲ್, 1.2 ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ. 17.67 ರಿಂದ 19.25 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Kannada Comedy Actor Chiller Manju Buys Tata Curvv Suv Details

ನೂತನ ಟಾಟಾ ಕರ್ವ್ ಎಸ್‌ಯುವಿಯಲ್ಲಿ 5 ಮಂದಿ ಓಡಾಟ ನಡೆಸಬಹುದು. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 4-ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಪನೊರೊಮಿಕ್ ಸನ್‌ರೂಫ್, 6-ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.

ಹೊಸ ಕರ್ವ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಟಾಟಾ ಕರ್ವ್ ಇವಿ ಕೂಡ ಲಭ್ಯ: ಈ ಎಲೆಕ್ಟ್ರಿಕ್ ಕಾರು, ರೂ.17.49 ಲಕ್ಷದಿಂದ ರೂ.21.99 ಲಕ್ಷ ಎಕ್ಸ್ ಶೋರೂಂ ದರದವನ್ನು ಹೊಂದಿದೆ. 45 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 55 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 502 ರಿಂದ 585 ಕಿಲೋಮೀಟರ್‌‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, January 18, 2025, 8:34 [IST]
English summary
Kannada comedy actor chiller manju buys tata curvv suv details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+