ನೂತನ ಮಾರುತಿ ಸ್ವಿಫ್ಟ್ ಕಾರನ್ನು ಮನೆಗೆ ತಂದ 'ಮುದ್ದು ಜೋಡಿ' ಐಶ್ವರ್ಯಾ, ವಿನಯ್: ಯಾರಿವರು?

ಕನ್ನಡದ ಹಲವು ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ನಟಿ ಐಶ್ವರ್ಯಾ ಸಾಲಿಮಠ (Aishwarya Salimath) ಹಾಗೂ ನಟ ವಿನಯ್ (Vinay) ದಂಪತಿ ಮನೆ ಮಾತಾಗಿದ್ದಾರೆ. ಐಶ್ವರ್ಯಾಗೆ ಅಗ್ನಿಸಾಕ್ಷಿ ಹಾಗೂ ರಾಮಾಚಾರಿ ಧಾರಾವಾಹಿಗಳು ದೊಡ್ಡಮಟ್ಟದ ಹೆಸರನ್ನು ತಂದುಕೊಟ್ಟಿದ್ದವು. ಕನ್ನಡತಿ ಸೀರಿಯಲ್‌ನಲ್ಲಿ ಅಭಿನಯಿಸಿದ್ದ ವಿನಯ್ ಅವರ ನಟನೆಯನ್ನು ಟಿವಿ ವೀಕ್ಷಿಕರು ಮೆಚ್ಚಿದ್ದರು. ಈ ಮುದ್ದು ಜೋಡಿ, ಮಹಾಸತಿ ಎಂಬ ಧಾರಾವಾಹಿಯಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿತ್ತು. 2022 ರಲ್ಲಿ ಐಶ್ವರ್ಯಾ, ವಿನಯ್ ಸಪ್ತಪದಿಯನ್ನು ತುಳಿದಿದ್ದರು.

ಸದ್ಯ, ಐಶ್ವರ್ಯಾ ಸಾಲಿಮಠ ಮತ್ತು ವಿನಯ್ ದಂಪತಿ ಹೊಚ್ಚ ಹೊಸ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹ್ಯಾಚ್‌ಬ್ಯಾಕ್‌ನ್ನು ಖರೀದಿ ಮಾಡಿದ್ದಾರೆ. ಶೋರೂಂ ಮುಂಭಾಗ ನೂತನ ಕಾರನ್ನು ವಿತರಣೆ ಪಡೆಯುತ್ತಿರುವ ವಿಡಿಯೋವನ್ನು ಈ ಜೋಡಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿಯೂ ಪೋಸ್ಟ್ ಮಾಡಿದ್ದು, ಸ್ನೇಹಿತರು, ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

Kannada Famous Actor Vinay Uj And Actress Aishwarya Salimath Couple Buy New Maruti Suzuki Swift Car

ಐಶ್ವರ್ಯಾ ಹಾಗೂ ವಿನಯ್ ದಂಪತಿ ಬಿಳಿ (ವೈಟ್) ಬಣ್ಣದ ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ತೆಗೆದುಕೊಂಡಿದ್ದಾರೆ. ಆದರೆ, ಯಾವ ರೂಪಾಂತರವನ್ನು (ವೇರಿಯೆಂಟ್) ಕೊಂಡುಕೊಂಡಿದ್ದಾರೆ ಎಂಬುದರ ಕುರಿತಂತೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ದೇಶೀಯ ಮಾರುಕಟ್ಟೆಯಲ್ಲಿ ನೂತನ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ ರೂ.6.49 ರಿಂದ ರೂ.9.60 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ.

ಈ ಹೊಸ ಕಾರು ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವೈಟ್ ಹಾಗೂ ಮ್ಯಾಗ್ಮಾ ಗ್ರೇ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು.

Kannada Famous Actor Vinay Uj And Actress Aishwarya Salimath Couple Buy New Maruti Suzuki Swift Car

ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌, ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 80 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.8 ರಿಂದ 25.72 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಕಾರಿನ ಸಿಎನ್‌ಜಿ ಚಾಲಿತ ರೂಪಾಂತರವು 1.2-ಲೀಟರ್ ಎಂಜಿನ್‌ನ್ನು ಪಡೆದಿದ್ದು, 69 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 102 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 32.85 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತದೆ.

ನೂತನ ಕಾರು ಇನ್ಫೋಟೈನ್‌ಮೆಂಟ್ ಸ್ಕ್ರೀನ್‌ (9-ಇಂಚು), ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, October 15, 2024, 15:45 [IST]
English summary
Kannada famous actor vinay uj and actress aishwarya salimath couple buy new maruti suzuki swift car
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+