ಪಕ್ಕಾ ಉ.ಕರ್ನಾಟಕ ಹುಡ್ಗ.. ದುಬಾರಿ ಬೆಲೆಯ ಸ್ವದೇಶಿ 'Thar Roxx' ಖರೀದಿಸಿದ ಸರಿಗಮಪ ಖ್ಯಾತಿಯ ಬಾಳು ಬೆಳಗುಂದಿ!

ಬಾಳು ಬೆಳಗುಂದಿ (Balu Belagundi) ಪಕ್ಕಾ ಉತ್ತರ ಕರ್ನಾಟಕ ಪ್ರತಿಭೆಯಾಗಿದ್ದು, ಮೂಲತಃ ಹಾವೇರಿ ಜಿಲ್ಲೆಯವರು. ತಮ್ಮದೇ ಶೈಲಿಯಲ್ಲಿ ಹಾಡುಗಳನ್ನು ಬರೆದು ಹಾಡುವ ಅವರಿಗೆ ಯೂಟ್ಯೂಬ್‌ನಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಫಾಲೋವರ್‌ಗಳು ಇದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ (Sa Re Ga Ma Pa) ಶೋನಲ್ಲೂ ಬಾಳು ಬೆಳಗುಂದಿ ಸ್ಪರ್ಧಿಯಾಗಿದ್ದು, ಭರವಸೆಯ ಗಾಯಕರಾಗಿ ಹೊರಹೊಮ್ಮುತ್ತಿದ್ದಾರೆ. ಈಗಾಗಲೇ ಶಶಾಂಕ್ ಆಕ್ಷನ್ ಕಟ್ ಹೇಳಿ, ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿ ನಟಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ 'ಬ್ರ್ಯಾಟ್‌'ನಲ್ಲಿಯು ಹಾಡೊಂದನ್ನು ಹಾಡುವ ಅವಕಾಶ ಸಿಕ್ಕಿದೆ. ಈ ಚಾನ್ಸ್‌ನ್ನು ಸರಿಗಮಪ ಶೋನ ತೀರ್ಪುಗಾರರಾದ ಅರ್ಜುನ್ ಜನ್ಯ ಅವರು ನೀಡಿದ್ದಾರೆ.

ಸದ್ಯ, ಗಾಯಕ ಬಾಳು ಬೆಳಗುಂದಿ ಹೊಚ್ಚ ಹೊಸ ಮಹೀಂದ್ರಾ ಥಾರ್ ರಾಕ್ಸ್ (Mahindra Thar Roxx) ಎಸ್‌ಯುವಿಯನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಅವರೇ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

Kannada Famous Singer Saregamapa Fame Balu Belagundi Buy New Mahindra Thar Roxx Details

ಮಹೀಂದ್ರಾ ಥಾರ್ ರಾಕ್ಸ್ ವಿಶೇಷತೆಗಳೇನು..

ಇದೊಂದು ಜನಪ್ರಿಯ ಆಫ್-ರೋಡ್ ಎಸ್‌ಯುವಿಯಾಗಿದೆ. ರೂ.12.99 ಲಕ್ಷದಿಂದ ರೂ.23.39 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಈ ಕಾರಿನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಲಗೇಜ್ ತೆಗೆದುಕೊಂಡು ಹೋಗಲು 447 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಇದು ಎಲ್ಲರ ಕಣ್ಮನ ಸೆಳೆಯುತ್ತದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಸರ್ಕ್ಯೂಲರ್ ಫಾಗ್ ಲೈಟ್‌ಗಳು ಮತ್ತು ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಜೊತೆಗೆ ಟ್ಯಾಂಗೋ ರೆಡ್, ಸ್ಟೆಲ್ತ್ ಬ್ಲ್ಯಾಕ್, ಎವರೆಸ್ಟ್ ವೈಟ್, ಡೀಪ್ ಫಾರೆಸ್ಟ್, ನೆಬ್ಯುಲಾ ಬ್ಲೂ & ಬ್ಯಾಟಲ್‌ಶಿಪ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

Kannada Famous Singer Saregamapa Fame Balu Belagundi Buy New Mahindra Thar Roxx Details

ನೂತನ ಥಾರ್ ರಾಕ್ಸ್ ಬೆಲೆಗೆ ತಕ್ಕಂತೆ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 2.0-ಲೀ. ಟರ್ಬೊ ಪೆಟ್ರೋಲ್ ಮತ್ತು 2-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಇದು ಆಫ್-ರೋಡ್ ಎಸ್‌ಯುವಿಯಾಗಿರುವುದರಿಂದ ಕೊಂಚ ಮಟ್ಟಿಗೆ ಕಡಿಮೆ ಇಂಧನ ದಕ್ಷತೆಯನ್ನು ಹೊಂದಿದ್ದು, 12 ರಿಂದ 15.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹೊಸ ಥಾರ್ ರಾಕ್ಸ್ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ರೇರ್ ಎಸಿ ವೆಂಟ್‌ಗಳನ್ನು ಒಳಗೊಂಡಿದೆ.

ಈ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಗಾಗಿ 5-ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ. 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 3-ಪಾಯಿಂಟ್ ಸೀಟ್‌ ಬೆಲ್ಟ್‌ನಂತಹ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನೂ ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, May 21, 2025, 11:10 [IST]
English summary
Kannada famous singer saregamapa fame balu belagundi buy new mahindra thar roxx details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+