ಪಂಚೆಯುಟ್ಟು ಬಂದ ಕನ್ನಡದ ಖ್ಯಾತ ಯೂಟ್ಯೂಬರ್.. ದುಬಾರಿ ಟೊಯೊಟಾ ಇನ್ನೋವಾ ಕಾರು ಖರೀದಿ!
ಕನ್ನಡದ ಜನಪ್ರಿಯ ಯೂಟ್ಯೂಬರ್ ಆಗಿ ಜೀವ ವಿನಯ್ (Jeeva Vinay) ಗುರುತಿಸಿಕೊಂಡಿದ್ದಾರೆ. ಯೂಟ್ಯೂಬ್‌ನಲ್ಲಿ ವಿಭಿನ್ನ ಶೈಲಿಯ ವಿಡಿಯೋ ಮಾಡುವ ವಿನಯ್ ಅವರಿಗೆ ಪ್ರತೇಕವಾದ ಅಭಿಮಾನಿ ಬಳಗವೇ ಇದೆ. ಅವರ ಜಾಯಿಂಟ್ ಕನ್ನಡ (Joint Kannada) ಹೆಸರಿನ ಯೂಟ್ಯೂಬ್ ಚಾನೆಲ್‌ಗೆ ಸರಿ ಸುಮಾರು 2.66 ಲಕ್ಷ ಸಬ್‌ಸ್ಕ್ರೈಬ್ ಇದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿಯೂ 84 ಸಾವಿರ ಫಾಲೋವರ್‌ಗಳನ್ನು ಹೊಂದಿದ್ದಾರೆ.
ಸದ್ಯ ಯೂಟ್ಯೂಬರ್ ಜೀವ ವಿನಯ್ ಹೊಚ್ಚ ಹೊಸ ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ಎಂಪಿಯನ್ನು ಖರೀದಿ ಮಾಡಿದ್ದಾರೆ. ಈ ಸಂಬಂಧ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿಯೂ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ವಿನಯ್ ಪಂಚೆಯುಟ್ಟು ಶೋರೂಂಗೆ ಬಂದು, ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ನೂತನ ಕಾರಿನ ವಿತರಣೆ ಪಡೆಯುತ್ತಿರುವುದನ್ನು ಕಾಣಬಹುದು.

ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿ ವಿಶೇಷತೆಗಳೇನು: ಇದು ರೂ.19.99 ಲಕ್ಷದಿಂದ ರೂ.26.55 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಜಿಎಕ್ಸ್, ಜಿಎಕ್ಸ್ ಪ್ಲಸ್, ವಿಎಕ್ಸ್ ಮತ್ತು ಝಡ್ಎಕ್ಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಪ್ಲಾಟಿನಂ ವೈಟ್ ಪರ್ಲ್, ಸೂಪರ್ ವೈಟ್ ಮತ್ತು ಸಿಲ್ವರ್ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಾಗುತ್ತದೆ.
ಈ ನೂತನ ಇನ್ನೋವಾ ಕ್ರಿಸ್ಟಾ ಕಾರು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. ಇದು 2.4-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 150 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 343 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 8 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ನೂತನ ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿ 7/8 ಆಸನಗಳನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ರೇರ್-ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಫ್ರಂಟ್ - ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.
ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿಯೂ ಖರೀದಿಗೆ ಲಭ್ಯ: ಇದು ರೂ.19.94 ಲಕ್ಷದಿಂದ ರೂ.31.34 ಲಕ್ಷ (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. 2-ಲೀಟರ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) & 2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 16.13 ರಿಂದ 23.24 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.
ಈ ಇನ್ನೋವಾ ಹೈಕ್ರಾಸ್ ಎಂಪಿವಿ 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications