ದುಬಾರಿ 'ಮಹೀಂದ್ರಾ ಥಾರ್ ರಾಕ್ಸ್' ಕಾರು ಖರೀದಿಸಿದ ಯುಟ್ಯೂಬರ್ ಮಧು ಗೌಡ ದಂಪತಿ!
ಇನ್‌ಸ್ಟಾಗ್ರಾಮ್ ಹಾಗೂ ಯುಟ್ಯೂಬರ್ ಬಳಕೆದಾರರಿಗೆ ಮಧು ಗೌಡ (Madhu Gowda) ಯಾರೆಂಬುದು ಗೊತ್ತೇ ಇರುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ಫುಲ್ ಫೇಮಸ್ ಆಗಿರುವ ಮಧು ಗೌಡ, ಅಕ್ಟೋಬರ್ 27 ರಂದು ನಿಖಿಲ್ ರವೀಂದ್ರ ಅವರೊಂದಿಗೆ ಸಪ್ತಪದಿ ತುಳಿದಿದ್ದರು. ಮದುವೆಗೂ ಮುನ್ನವೇ ಈ ದಂಪತಿ ಹೊಚ್ಚ ಹೊಸ ಮಹೀಂದ್ರಾ ಥಾರ್ ರಾಕ್ಸ್ (Mahindra Thar Roxx) ಎಸ್‌ಯುವಿಯನ್ನು ಬುಕ್ಕಿಂಗ್ ಮಾಡಿದ್ದರು. ಈ ಕಾರಿಗೆ ಹೆಚ್ಚಿನ ಡಿಮ್ಯಾಂಡ್ ಇರುವುದರಿಂದ ಈಚೆಗೆ ವಿತರಣೆಯನ್ನು ಪಡೆದುಕೊಂಡಿದ್ದಾರೆ.
ಈ ಬಗ್ಗೆ ಸ್ವತ: ಮಧು ಗೌಡ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಾಗೂ ಫೋಟೋಗಳನ್ನು ಪೋಸ್ಟ್ ಮಾಡಿದ್ದು, ಸಂತಸವನ್ನು ಹಂಚಿಕೊಂಡಿದ್ದಾರೆ. ನೂತನ ಮಹೀಂದ್ರಾ ಥಾರ್ ರಾಕ್ಸ್ ಎಸ್‌ಯುವಿ ಖರೀದಿ ಮಾಡುತ್ತಿರುವುದಕ್ಕೆ ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಮಧು ಗೌಡ ದಂಪತಿಗೆ ದೊಡ್ಡ ಮಟ್ಟದಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಮಹೀಂದ್ರಾ ಥಾರ್ ರಾಕ್ಸ್ ವಿಶೇಷತೆಗಳೇನು: ಈ ಕಾರು ಕನಿಷ್ಠ ರೂ.12.99 ಲಕ್ಷ ಮತ್ತು ಗರಿಷ್ಠ ರೂ.23.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಂಎಕ್ಸ್, ಎಂಎಕ್ಸ್1, ಎಂಎಕ್ಸ್3, ಎಎಕ್ಸ್, ಎಎಕ್ಸ್3ಎಲ್, ಎಎಕ್ಸ್5ಎಲ್, ಎಎಕ್ಸ್7ಎಲ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ.
ನೂತನ ಥಾರ್ ರಾಕ್ಸ್ 2 ಪವರ್‌ಟ್ರೇನ್‌ನ್ನು ಒಳಗೊಂಡಿದೆ. 2.0 ಲೀ. ಟರ್ಬೊ ಪೆಟ್ರೋಲ್ ಮತ್ತು 2 ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 12.4 ರಿಂದ 15.2 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ಈ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಸರ್ಕ್ಯೂಲರ್ ಫಾಗ್ ಲೈಟ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಹೊಂದಿದೆ. ಟ್ಯಾಂಗೋ ರೆಡ್, ಸ್ಟೆಲ್ತ್ ಬ್ಲ್ಯಾಕ್, ಎವರೆಸ್ಟ್ ವೈಟ್, ಡೀಪ್ ಫಾರೆಸ್ಟ್, ನೆಬ್ಯುಲಾ ಬ್ಲೂ, ಬ್ಯಾಟಲ್‌ಶಿಪ್ ಗ್ರೇ ಮತ್ತು ಬರ್ನ್ಟ್ ಸಿಯೆನ್ನಾ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಹೊಸ ಮಹೀಂದ್ರಾ ಥಾರ್ ರಾಕ್ಸ್ ಎಸ್‌ಯುವಿಯಲ್ಲಿ 5 ಮಂದಿ ಸುಲಭವಾಗಿ ಪ್ರಯಾಣಿಯಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 447 ಲೀಟರ್‌ನ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 10.25 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ರೇರ್ ಎಸಿ ವೆಂಟ್‌ಗಳನ್ನು ಪಡೆದಿದೆ.
ನೂತನ 'ಥಾರ್ ರಾಕ್ಸ್'ನ್ನು ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ ಅತ್ಯಂತ ಸುರಕ್ಷಿತ ಕಾರು ಎಂದು ತೀರ್ಮಾನಿಸಲಾಗಿದೆ. ಇದು 5 ಸ್ಟಾರ್ ಸೇಫ್ಟಿ ಎಸ್‌ಯುವಿಯಾಗಿ ಹೊರಹೊಮ್ಮಿದೆ. 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), 3-ಪಾಯಿಂಟ್ ಸೀಟ್ ಬೆಲ್ಟ್‌ಗಳು ಮತ್ತು 4 ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








