ಹೊಸ ಕಾರು ಖರೀದಿಸಿ ತನ್ನ ಪುಟ್ಟ ಆನೆ ಎಂದ ಚಂದನ್ ಶೆಟ್ಟಿ: ಈ ಕಾರಿನ ವಿಶೇಷತೆಗಳೇನು?
ನಾಲ್ಕು ವರ್ಷದ ಮದುವೆ ಬಂಧನವನ್ನು ಈ ವರ್ಷದ ಮಧ್ಯದದಲ್ಲಿ ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ ಈ ವರ್ಷ ವಿಚ್ಛೇದನ ಪಡೆದುಕೊಳ್ಳುವ ಮೂಲಕ ಕೊನೆ ಮಾಡಿದ್ದರು. ಇಬ್ಬರೂ ವಿಚ್ಛೇದನ ಪಡೆದುಕೊಳ್ಳುವ ಮುನ್ನ ಕ್ಯಾಂಡಿಕ್ರಶ್ ಹೆಸರಿನ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು. ಇದರ ಚಿತ್ರೀಕರಣ ಕೂಡ ಮುಗಿದು, ಬಿಡುಗಡೆಯಾಗುವ ಸನಿಹದಲ್ಲಿದ್ದಾಗ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆದುಕೊಂಡಿದ್ದು ಸುದ್ದಿಯಾಗಿತ್ತು. ಈಗ ಸಿನಿಮಾ ತಂಡ ಚಿತ್ರದ ಹೆಸರನ್ನೇ ಬದಲಾವಣೆ ಮಾಡುವ ನಿರ್ಧಾರ ಮಾಡಿದೆ. ಕ್ಯಾಂಡಿಕ್ರಶ್ ಎನ್ನುವ ಬದಲಿಗೆ ಸಿನಿಮಾಗೆ 'ಮುದ್ದುರಾಕ್ಷಸಿ' ಎನ್ನುವ ಹೆಸರು ಮಾಡಿ ಮತ್ತೆ ಸುದ್ದಿಯಾಗಿದೆ.
ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರೂ ಕೂಡ ಸಿನಿಮಾದ ಪೋಸ್ಟರ್‌ಗಳನ್ನು ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್‌ಗಳಲ್ಲಿ ಹಂಚಿಕೊಂಡಿದ್ದಾರೆ. ಈ ನಡುವೆ ಚಂದನ್ ಶೆಟ್ಟಿ ಅವರು ಹೊಸ ಟೊಯೊಟಾ ಫಾರ್ಚುನರ್ ಲೆಜೆಂಡರ್ ಎಸ್‍ಯುವಿಯನ್ನು ಖರೀದಿಸಿದ್ದಾರೆ. ತನ್ನ ಹೊಸ ಕಾರಿನ ಜೊತೆ ಪೋಸ್ ಕೊಟ್ಟಿರುವ ಪೋಟೋವನ್ನು ಚಂದನ್ ಶೆಟ್ಟಿ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ "ಇದು ನನ್ನ ಸಣ್ಣ ಆನೆಯ ಮೊದಲ ಚಿತ್ರ" ಎಂದು ಬರೆದುಕೊಂಡಿದ್ದಾರೆ.

ಚಂದನ್ ಶೆಟ್ಟಿ ಹೊಸ ಕಾರಿನ ನಂಬರ್ KA 04NC 1414 ಆಗಿದೆ. ಚಂದನ್ ಶೆಟ್ಟಿ ಅವರು ಖರೀದಿಸಿದ ಟೊಯೊಟಾ ಫಾರ್ಚುನರ್ ಲೆಜೆಂಡರ್ (Toyota Fortuner Legender) ಎಸ್‍ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.43.66 ಲಕ್ಷದಿಂದ ರೂ.47.64 ಲಕ್ಷದವರೆಗೆ ಬೆಲೆಯಿದೆ. ಜನಪ್ರಿಯ ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಟಾಪ್ ವೆರಿಯೆಂಟ್ ಲೆಜೆಂಡರ್ ಆಗಿದೆ.
ವಿನ್ಯಾಸ: ಈ ಟೊಯೊಟಾ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಡ್ಯುಯಲ್ ಟೋನ್ ಪರ್ಲ್ ವೈಟ್ ಜೊತೆಗೆ ಬ್ಲಾಕ್ ರೂಫ್ ಕಲರ್ ಸ್ಕೀಮ್ ನಲ್ಲಿ ನೀಡಲಾಗುತ್ತಿದೆ. ಟೊಯೊಟಾ ಫಾರ್ಚುನರ್ ಲೆಜೆಂಡರ್ 4X2 ಮಾದರಿಗೆ ಹೋಲಿಸಿದರೆ 4X4 ವೆರಿಯೆಂಟ್ ಯಾವುದೇ ವಿಶೇಷ ಬಾಹ್ಯ ಬಿಟ್‌ಗಳನ್ನು ಪಡೆಯುವುದಿಲ್ಲ. ಫಾರ್ಚುನರ್ ಲೆಜೆಂಡರ್ ಎಸ್‍ಯುವಿಯು ಹೆಚ್ಚು ಅಗ್ರೇಸಿವ್ ಮತ್ತು ಸ್ಪೋರ್ಟಿಯರ್ ವಿನ್ಯಾಸವನ್ನು ಹೊಂದಿದೆ.
ಫಾರ್ಚುನರ್ ಲೆಜೆಂಡರ್ ಎಸ್‍ಯುವಿ ಹೆಡ್‌ಲ್ಯಾಂಪ್‌ಗಳ ಕೆಳಗೆ ಫಾಗ್ ಲ್ಯಾಂಪ್ ಗಳಿವೆ. ಇನ್ನು ಡೈನಾಮಿಕ್ ಟರ್ನ್ ಸಿಗ್ನಲ್ ಇಂಡೀಕೆಟರ್ ಗಳಿವೆ. ಫಾರ್ಚೂನರ್ ಲೆಜೆಂಡರ್ ಸುತ್ತಲೂ ಎಲ್ಇಡಿ ಲೈಟಿಂಗ್ ಹೊಂದಿದೆ. ಇನ್ನು ಇದರ ಸೈಡ್ ಪ್ರೊಫೈಲ್ ಬಗ್ಗೆ ಹೇಳುವುದಾದರೆ, ಇದರಲ್ಲಿ 18 ಇಂಚಿನ ಮೆಷಿನ್-ಕಟ್ ಅಲಾಯ್ ವ್ಹೀಲ್‌ಗಳನ್ನು ಅಳವಡಿಸಲಾಗಿದೆ. ಇನ್ನು ಡೋರಿನ ಹ್ಯಾಂಡಲ್‌ಗಳಲ್ಲಿ ಕೆಲವು ಕ್ರೋಮ್ ಇದೆ ಮತ್ತು ಉದ್ದಕ್ಕೂ ಸ್ಟ್ರಿಪ್ ಅನ್ನು ಸಹ ಕ್ರೋಮ್‌ನಿಂದ ಮಾಡಲಾಗಿದೆ.
ಇನ್ನು ಈ ಫಾರ್ಚುನರ್ ಲೆಜೆಂಡರ್ ವೆರಿಯೆಂಟ್ ಮಾದರಿಯ ಹಿಂಭಾಗದಲ್ಲಿ ನಯವಾದ-ಕಾಣುವ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಅದನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದು ಬ್ಲ್ಯಾಕ್ ಸ್ಟ್ರಿಪ್ ಸಹ ಪಡೆಯುತ್ತದೆ, ಅದು ಎರಡೂ ಟೈಲ್ ಲೈಟ್‌ಗಳನ್ನು ಅದರ ಉದ್ದಕ್ಕೂ 'ಫೋರ್ಟೂನರ್' ಬ್ರ್ಯಾಂಡಿಂಗ್‌ನೊಂದಿಗೆ ಸಂಪರ್ಕಗೊಂಡಿದೆ.
ಫೀಚರ್ಸ್: ಫಾರ್ಚುನರ್ ಲೆಜೆಂಡರ್ ವೆರಿಯೆಂಟ್ ಒಳಭಾಗದಲ್ಲಿಯು ಕೆಲವು ಅತ್ಯಾಧುನಿಕ ಫೀಚರ್ ಗಳನ್ನು ಒಳಗೊಂಡಿದೆ. ಫಾರ್ಚೂನರ್ ಲೆಜೆಂಡರ್ ಇಂಟಿರಿಯರ್ ಅಥವಾ ಒಳಭಾಗದಲ್ಲಿ ಡ್ಯುಯಲ್-ಟೋನ್ (ಬ್ಲ್ಯಾಕ್ ಮತ್ತು ಮರೂನ್) ಅಂಶಗಳನ್ನು ಹೊಂದಿದೆ, ಇದರಲ್ಲಿ ಸುತ್ತಲೂ ವೈಟ್ ಅಬೈಂಡ್ ಲೈಟ್ ಅನ್ನು ಹೊಂದಿದೆ. ಇದರೊಂದಿಗೆ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇಯನ್ನು ಒಳಗೊಂಡಿರುವ ದೊಡ್ಡ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಂದಿದೆ.
ಟೊಯೊಟಾ ಫಾರ್ಚೂನರ್ ಲೆಜೆಂಡರ್ ವೆರಿಯೆಂಟ್ ನಲ್ಲಿ ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ಬ್ರೇಕ್ ಅಸಿಸ್ಟ್, 360 ಡಿಗ್ರಿ ಕ್ಯಾಮೆರಾ, ಸ್ಟೆಬಿಲಿಟಿ ಕಂಟ್ರೋಲ್, ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಮೌಂಟಡ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್ (ಆಟೋ ಎಮರ್ಜೆನ್ಸಿ ಅನ್‌ಲಾಕ್) ಮತ್ತು ಎಮರ್ಜನ್ಸಿ ಬ್ರೇಕ್ ಸಿಗ್ನಲ್‌ನಂತಹ ಸಾಕಷ್ಟು ಸುರಕ್ಷತಾ ಫೀಚರ್ಸ್ ಗಳನ್ನು ಒಳಗೊಂಡಿವೆ.
ಎಂಜಿನ್: ಟೊಯೊಟಾ ಫಾರ್ಚುನರ್ ಲೆಜೆಂಡರ್ ಎಸ್‍ಯುವಿಯು 2.8 ಲೀಟರ್, 4-ಸಿಲಿಂಡರ್ ಡೀಸೆಲ್, ಇನ್-ಲೈನ್, 16-ವಾಲ್ವ್ DOHC ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 201 HP ಪವರ್ ಮತ್ತು 500 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.


Click it and Unblock the Notifications