ಇಷ್ಟು ಸಣ್ಣ ವಯಸ್ಸಿನಲ್ಲಿ ದುಬಾರಿ ಕಾರು ಖರೀದಿಸಿದ ಪುಟ್ಟ ಕಲಾವಿದೆ: ಕಾರಿನ ವಿಶೇಷತೆಗಳೇನು?

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ನಿವಾಸ ಕನ್ನಡಿಗರ ಮನಗೆದ್ದ ಸೀರಿಯಲ್​. ಈ ಜನಪ್ರಿಯ ಸೀರಿಯಲ್​ ಮೂಲಕ ಕಿರುತೆರೆ ಲೋಕಕ್ಕೆ ಕಾಲಿಟ್ಟಿದ್ದ ಪುಟ್ಟ ಕಲಾವಿದೆ ನಿಶಿತಾ (Nishita) ಕೂಡ ವೀಕ್ಷಕರ ಮನಸ್ಸನ್ನ ಗೆದ್ದಿದ್ದಾರೆ. ಕೇವಲ 6 ವರ್ಷ ವಯಸ್ಸಿನ ಬಾಲನಟಿ ನಿಶಿತಾ ಇತ್ತೀಚೆಗೆಸ್ ದುಬಾರಿ ಬೆಲೆಯ ಕಾರನ್ನು ಖರೀದಿಸಿದ್ದಾರೆ. ದುಬಾರಿ ಹ್ಯುಂಡೈ ಕ್ರೆಟಾ (Hyundai Creta) ಕಾರು ಖರೀದಿಸಿ ವಿತರಣೆ ಪಡೆಯುತ್ತಿರುವ ರೀಲ್ಸ್ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ರೀಲ್ಸ್ ವಿಡಿಯೋ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹೊಸ ಕಾರನ್ನು ಖರೀದಿ ಮಾಡಿದ ಖುಷಿಯಲ್ಲಿ ನಿಶಿತಾ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ರೀಲ್ಸ್ ವಿಡಿಯೋ ನೋಡಿದ ಅಭಿಮಾಗಳು ಶುಭ ಹಾರೈಸಿದ್ದಾರೆ. 6 ವರ್ಷ ವಯಸ್ಸಿನ ಬಾಲನಟಿ ನಿಶಿತಾ ಅ ಲಕ್ಷ್ಮೀ ನಿವಾಸ ಸೀರಿಯಲ್ ನಲ್ಲಿ ಮುದ್ದಾದ ಅಭಿನಯದ ಮೂಲಕ ಸಾಕಷ್ಟು ವೀಕ್ಷಕರ ಗಮನ ಸೆಳೆದಿದ್ದಾರೆ. ಲಕ್ಷ್ಮೀ ನಿವಾಸ ಸೀರಿಯಲ್ ನಲ್ಲಿ ಖುಷಿ ಪಾತ್ರಧಾರಿ ನಿಶಿತಾ ಸೋಷಿಯಲ್ ಮೀಡಿಯಾದಲ್ಲೂ ಸ್ಟಾರ್ ಎಂದು ಹೇಳಬಹುದು.

Child Artist Nishita New Hyundai Creta

ಸೋಷಿಯಲ್ ಮೀಡಿಯಾದಲ್ಲಿ ನಿಶಿತಾ ಸಖತ್ ಆಕ್ಟೀವ್ ಆಗಿದ್ದಾಳೆ. ಡ್ಯಾನ್ಸ್ ಮತ್ತು ಡೈಲಾಗ್ ಹೇಳಿ ರೀಲ್ಸ್ ಮಾಡುತ್ತಾರೆ. ನಿಶಿತಾ ಅವರ ಇನ್​ಸ್ಟಾಗ್ರಾಮ್​ ಅಕೌಂಟ್​ ತಾಯಿ ಹ್ಯಾಂಡಲ್ ಮಾಡುತ್ತಿದ್ದಾರೆ. ಇನ್​ಸ್ಟಾಗ್ರಾಮ್ ಖಾತೆಯಲ್ಲಿ 9 ಲಕ್ಷ ಫಾಲೋವರ್ಸ್ ಹೊಂದಿದ್ದಾರೆ. ಇನ್ನು ಬಾಲನಟಿ ನಿಶಿತಾ ಹೊಸ ಹ್ಯುಂಡೈ ಕ್ರೆಟಾ ಕಾರು ಖರೀದಿಸಿದ್ದಾರೆ. ಇದೇ ಕಾರು ನಿಶಿತಾ ಅವರ ತಾಯಿಯ ಹೆಸರಿನಲ್ಲಿದೆ.

ಬಾಲನಟಿ ನಿಶಿತಾ ಖರೀದಿಸಿದ ಹೊಸ ಹ್ಯುಂಡೈ ಕ್ರೆಟಾ ಎಸ್‍ಯುವಿ ಬಗ್ಗೆ ಹೇಳುವುದಾದರೆ, ಈ ಎಸ್‍ಯುವಿ ಹ್ಯುಂಡೈ ಕಂಪನಿಯ ಭರ್ಜರಿ ಬೇಡಿಕೆ ಹೊಂದಿರುವ ಕಾರ್ ಆಗಿದೆ. ಈ ವರ್ಷದ ಆರಂಭದಲ್ಲಿ ಹ್ಯುಂಡೈ ಫೇಸ್‌ಲಿಫ್ಟೆಡ್ ಕ್ರೆಟಾ ಎಸ್‌ಯುವಿಯನ್ನು ಬಿಡುಗಡೆ ಮಾಡಿತು. ಬಳಿಕ ಕೆಲವೇ ಅವಧಿ ಬಳಿಕ ಹ್ಯುಂಡೈ ಕಂಪನಿಯು ಕ್ರೆಟಾ ಎಸ್‍ಯುವಿಯ ಸ್ಪೋರ್ಟಿಯರ್ ಮಾದರಿಯಾದ ಕ್ರೆಟಾ ಎನ್ ಲೈನ್ ಮಾದರಿಯನ್ನು ಬಿಡುಗಡೆಗೊಳಿಸಿತು. ಕ್ರೆಟಾ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಎಸ್‍ಯುವಿಗಳಲ್ಲಿ ಒಂದಾಗಿದೆ.

Child Artist Nishita New Hyundai Creta

ಹಲವಾರು ವರ್ಷಗಳಿಂದ ಮಾರಾಟವಾಗಿದ್ದರೂ, ಇದು ಭಾರತೀಯ ಖರೀದಿದಾರರನ್ನು ಆಕರ್ಷಿಸುತ್ತಲೇ ಇದೆ. ಹ್ಯುಂಡೈ ಕೂಡ ನಿರಂತರವಾಗಿ ಮಾರುಕಟ್ಟೆ ಅಗತ್ಯಗಳಿಗೆ ಅನುಗುಣವಾಗಿ ತನ್ನ ಸೂಪರ್ ಹಿಟ್ ಕ್ರೆಟಾವನ್ನು ನವೀಕರಿಸುತ್ತಾ ಬಂದಿದೆ. ಕ್ರೆಟಾ ಎರಡು ಪೆಟ್ರೋಲ್ ಮತ್ತು ಒಂದು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬರುತ್ತದೆ. ಈ ಹ್ಯುಂಡೈ ಕ್ರೆಟಾ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ.

ಎಂಜಿನ್: ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ ಜೊತೆಗೆ 1.5 ಲೀಟರ್ ನ್ಯಾಚುರಲ್ಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಮತ್ತು 1.5 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಅನ್ನು ಸಹ ಹೊಂದಿದೆ. ಇದರಲ್ಲಿ 6-speed MT, CVT ಹಾಗೂ 7-speed DCT ಮತ್ತು 6-speed MT, 6-speed AT ಆಯ್ಕೆಯನ್ನು ನೀಡಲಾಗಿದೆ.

Child Artist Nishita New Hyundai Creta

ಇದರಲ್ಲಿ ಮೊದಲಿಗೆ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 ಪಿಎಸ್ ಪವರ್ ಮತ್ತು 144 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 1.5-ಲೀಟರ್ ಪವರ್ ಫುಲ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಪವರ್ ಹಾಗೂ 253 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ರೂಪಾಂತರಗಳು ಮತ್ತು ಫೀಚರ್ಸ್: ಹುಂಡೈ ಕ್ರೆಟಾವು E, EX, S, S(O), SX, SX Tech, ಮತ್ತು SX(O) ಎಂಬ ಏಳು ರೂಪಾಂತರಗಳಲ್ಲಿ ಲಭ್ಯವಿದೆ. ಪ್ರತಿಯೊಂದು ರೂಪಾಂತರವು ವಿಭಿನ್ನ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಕ್ರೆಟಾ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇಯ ಹೊರತಾಗಿ, ಅನ್ನು ಪರಿಷ್ಕೃತ ಕ್ಲೈಮೆಟ್ ಕಂಟ್ರೋಲ್ ಪ್ಯಾನಲ್, 360-ಡಿಗ್ರಿ ಕ್ಯಾಮೆರಾ ಮತ್ತು ಸುಧಾರಿತ ಡ್ರೈವರ್ ಅಸಿಸ್ಟ್ ಸಿಸ್ಟಂಗಳೊಂದಿಗೆ (ADAS) ಡ್ಯುಯಲ್-ಜೋನ್ AC ಯೊಂದಿಗೆ ಒದಗಿಸಲಾಗಿದೆ.

ಸುರಕ್ಷತಾ ಫೀಚರ್ಸ್: ಸುರಕ್ಷತೆಯ ವಿಷಯದಲ್ಲಿ ಹ್ಯುಂಡೈ ಕ್ರೆಟಾ ಎಸ್‍ಯುವಿಯು ಆರು ಏರ್‌ಬ್ಯಾಗ್‌ಗಳು, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS), ISOFIX ಚೈಲ್ಡ್ ಸೀಟ್ ಆಂಕರೇಜ್‌ಗಳು ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿಯನ್ನು ಒಳಗೊಂಡಿದೆ. ಹಿಂದಿನ ಸೀಟ್ 2 - ಸ್ಟೆಪ್ ರಿಕ್ಲೈನ್ ಫಂಕ್ಷನ್ ಮತ್ತು ದುಬಾರಿ ಪ್ಯಾಕೇಜ್ ಜೊತೆಗೆ, ಹೊಸ ಹುಂಡೈ CRETA ಒಳಭಾಗವು ಸೌಕರ್ಯ ಮತ್ತು ಅನುಕೂಲಕ್ಕಾಗಿ ಕ್ಯಾಬಿನ್‌ನಲ್ಲಿ ಸಾಕಷ್ಟು ಸ್ಥಳಾವಕಾಶವನ್ನು ನೀಡಲಾಗಿದೆ.

Article Published On: Monday, September 9, 2024, 9:54 [IST]
English summary
Kannada serial child artist nishita new hyundai creta top things
Read more on india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+