ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ಗೆ ದುಬಾರಿ ಕಾರು ಗಿಫ್ಟ್ ನೀಡಿದ ನಟ ಕಿಚ್ಚಾ ಸುದೀಪ್
ಕನ್ನಡ, ತೆಲುಗು, ತಮಿಳು, ಹಿಂದಿ ಸಿನಿಮಾ ಇಂಡಸ್ಟ್ರಿಗಳಲ್ಲಿ ತನ್ನ ನೃತ್ಯ ಸಂಯೋಜನೆಯಿಂದಲೇ ಖ್ಯಾತಿ ಗಳಿಸಿರುವ ಜಾನಿ ಮಾಸ್ಟರ್, ಪ್ರಸ್ತುತ ದೇಶದಲ್ಲಿ ಅತ್ಯಂತ ಬೇಡಿಕೆ ಇರುವ ಕೊರಿಯೋಗ್ರಫರ್‌ಗಳಲ್ಲಿ ಒಬ್ಬರಾಗಿದ್ದಾರೆ. ಹೀರೋಗಳ ಬಾಡಿ ಲ್ಯಾಂಗ್ವೇಜ್‌ಗೆ ಅನುಗುಣವಾಗಿ ಸ್ಟೆಪ್ಸ್ ಹಾಕಿಸುವ ಮೂಲಕ ಹಲವು ಹೀರೋಗಳ ಫೇವರೆಟ್ ಕೊರಿಯೋಗ್ರಫರ್ ಆಗಿದ್ದಾರೆ.

ಇತ್ತೀಚೆಗೆ ಜಾನಿ ಮಾಸ್ಟರ್ ಅವರೊಂದಿಗೆ ಕೆಲಸ ಮಾಡಿದ ಕನ್ನಡದ ಸ್ಟಾರ್ ಹೀರೋ ಕಿಚ್ಚಾ ಸುದೀಪ್ ಅವರು ತಮ್ಮ ನೃತ್ಯ ಸಂಯೋಜನೆಗೆ ದುಬಾರಿ ಉಡುಗೊರೆ ನೀಡಿದ್ದಾರೆ. 'ವಿಕ್ರಾಂತ್ ರೋಣ' ಚಿತ್ರದ ನೃತ್ಯ ನಿರ್ದೇಶಕರಾದ ಜಾನಿ ಮಾಸ್ಟರ್‌ಗೆ ಸುದೀಪ್ ಮಹಿಂದ್ರಾ ಥಾರ್ ಕಾರನ್ನು ಗಿಫ್ಟ್ ನೀಡಿದ್ದಾರೆ. ಈ ಬಗ್ಗೆ ಸ್ವತಃ ಫೋಟೋ ಹಂಚಿಕೊಂಡಿರುವ ಜಾನಿ ಮಾಸ್ಟರ್ ಅವರು ಕಿಚ್ಚ ಸುದೀಪ್ಗೆ ಧನ್ಯವಾದ ಹೇಳಿದ್ದಾರೆ. ಸದ್ಯ, ಈ ಪೋಸ್ಟ್ ನೋಡಿದ ಅಭಿಮಾನಿಗಳು ಕಿಚ್ಚ ಸುದೀಪ್ ಅವರನ್ನು ಹಾಡಿ ಹೊಗಳಿದ್ದಾರೆ.

ಜಾನಿ ಮಾಸ್ಟರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಮಹೀಂದ್ರಾ ಥಾರ್ ಎಸ್‌ಯುವಿ ಮತ್ತು ಸ್ಟಾರ್ ಹೀರೋ ಸುದೀಪ್ ಕಿಚ್ಚ ಅವರೊಂದಿಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಜಾನಿ ಮಾಸ್ಟರ್ ಅವರು ಕಿಚ್ಚ ಸುದೀಪ್ ಮತ್ತು ಅವರ ಕುಟುಂಬ ಸದಸ್ಯರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಫೋಟೋಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಮಹೀಂದ್ರಾ ಥಾರ್ ಬೆಲೆ ಸುಮಾರು ರೂ. 14 ಲಕ್ಷ (ಎಕ್ಸ್ ಶೋ ರೂಂ) ಇದೆ.

ಜಾನಿ ಮಾಸ್ಟರ್ ಅವರು ತಮಿಳು, ತೆಲುಗು ಚಿತ್ರರಂಗಳಲ್ಲಿ ಹೆಚ್ಚು ಹೆಸರು ಮಾಡಿದರೂ, ಕನ್ನಡ ಚಿತ್ರರಂಗದ ಜತೆಗೆ ಕೂಡಾ ಅವರಿಗೆ ಒಳ್ಳೆಯ ನಂಟಿದೆ. ಪುನೀತ್ ಅವರ ನಟನೆಯ ರಾಜಕುಮಾರ, ನಟಸಾರ್ವಭೌಮ, ಯುವರತ್ನ ಸಿನಿಮಾದ ಕೆಲ ಹಾಡುಗಳಿಗೆ ಜಾನಿ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ. ಟಾಲಿವುಡ್ನ ಬುಟ್ಟ ಬೊಮ್ಮಾ ಜತೆಗೆ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ತಮಿಳು ಹೀರೋ ವಿಜಯ್ ನಟನೆಯ ಬೀಸ್ಟ್ ಸಿನಿಮಾದ ಅರಬಿಕ್ ಕುತ್ತೂ ಹಾಡಿಗೂ ಜಾನಿ ಮಾಸ್ಟರ್ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ.

ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ 'ವಿಕ್ರಾಂತ್ ರೋಣ' ಶೀಘ್ರದಲ್ಲೇ ತೆರೆಗೆ ಬರಲಿದೆ. ಸುದೀಪ್ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಅವರ ಮೇಲೆ ಚಿತ್ರೀಕರಿಸಿದ ಹಾಡಿಗೆ ಜಾನಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಇದಲ್ಲದೆ, ಜಾನಿ ಮಾಸ್ಟರ್ ಇತ್ತೀಚೆಗೆ ರಜನಿಕಾಂತ್ ಅವರ ಮಗಳು ಐಶ್ವರ್ಯಾ ರಜನಿಕಾಂತ್ ಅವರ 'ಪಯಾನಿ' ಮ್ಯೂಸಿಕ್ ವೀಡಿಯೊಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಈ ಹಾಡಿನಲ್ಲಿ ಜಾನಿ ಮಾಸ್ಟರ್ ಅವರೊಂದಿಗೆ ಶ್ರುತಿ ವರ್ಮಾ ಕೂಡ ನಟಿಸಿದ್ದಾರೆ.

ಜಾನಿ ಮಾಸ್ಟರ್‌ಗೆ ನಿರ್ದೇಶಕನಾಗುವ ಆಸೆ ತುಂಬಾ ಬಲವಾಗಿದೆ. ಈ ಕುರಿತು ಹಲವು ಬಾರಿ ಸತಃ ಅವರೇ ಹೇಳಿಕೊಂಡಿದ್ದಾರೆ. ಈ ಸ್ಟಾರ್ ಕೊರಿಯೋಗ್ರಾಫರ್ ಯಾವಾಗ ನಿರ್ದೇಶಕರಾಗಲಿದ್ದಾರೆ ಕಾದು ನೋಡಬೇಕು. ಪ್ರಸ್ತುತ ತೆಲುಗಿನ ಡ್ಯಾನ್ಸ್ ಶೋವೊಂದರಲ್ಲಿ ಜಡ್ಜ್ ಆಗಿ ವ್ಯಾವಹರಿಸುತ್ತಿದ್ದಾರೆ. ಇನ್ನು ತೆಲುಗಿನಲ್ಲಿ ಜೂನಿಯರ್ ಎನ್‌ಟಿಆರ್ , ರಾಮ್ ಚರಣ್ ತೇಜ್, ಮಹೇಶ್ ಬಾಬುರಂತಹ ಟಾಪ್ ಸ್ಟಾರ್ ಹೀರೋಗಳಿಗೆ ಜಾನಿ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ.

ಇನ್ನು ಆಫ್ ರೋಡಿಂಗ್ ವೈಶಿಷ್ಟ್ಯತೆಯೊಂದಿಗೆ ತನ್ನದೆ ಆದ ಜನಪ್ರಿಯೆತೆ ಹೊಂದಿರುವ ಥಾರ್ ಕಾರು ಮಾದರಿಯು ಸಾಮಾನ್ಯ ಕಾರು ಮಾದರಿಗಳಂತೆ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ನ್ಯೂ ಜನರೇಷನ್ ಥಾರ್ ಖರೀದಿ ಮಾಡಿರುವ ಗ್ರಾಹಕರಲ್ಲಿ ಬಹುತೇಕರು ಹೊಸದಾಗಿ ಆಫ್ ಕೌಶಲ್ಯದ ಆಸಕ್ತಿಯೊಂದಿಗೆ ಥಾರ್ ಮಾಲೀಕತ್ವ ಪಡೆದುಕೊಂಡವರಾಗಿದ್ದಾರೆ.

ಶೇ.57ರಷ್ಟು ಗ್ರಾಹಕರು ಹೊಸದಾಗಿ ಆಫ್ ರೋಡಿಂಗ್ ಕಾರು ಖರೀದಿ ಮಾಡುತ್ತಿರುವ ಗ್ರಾಹಕರಾಗಿದ್ದು, ಮ್ಯಾನುವಲ್‌ಗಿಂತಲೂ ಹೆಚ್ಚು ಆಟೋಮ್ಯಾಟಿಕ್ ಡೀಸೆಲ್ ಮಾದರಿಗಳಿಗೆ ಹೆಚ್ಚು ಬೇಡಿಕೆ ಸಲ್ಲಿಸುತ್ತಿದ್ದಾರೆ.

ಥಾರ್ ಕಾರು ಮಾದರಿಗಾಗಿ ಮಹೀಂದ್ರಾ ಕಂಪನಿಯು ಇದುವರೆಗೆ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಾ ಬಂದಿದ್ದು, ಹೊಸ ಕಾರು ಬಿಡುಗಡೆಯ ನಂತರ 80 ಸಾವಿರಕ್ಕೂ ಹೆಚ್ಚು ಗ್ರಾಹಕರಿಂದ ಬುಕಿಂಗ್ ಪಡೆದುಕೊಂಡಿದೆ.

ಹೊಸ ಥಾರ್ ಕಾರು ಮಾದರಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ.

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದೆ.

ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್ ನೀಡಲಾಗಿದೆ.

ಇದರೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.


Click it and Unblock the Notifications








