Just In
- 38 min ago
ಫೋಕ್ಸ್ವ್ಯಾಗನ್ ಐಡಿ.4 ಜಿಟಿಎಕ್ಸ್ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರಿನ ಟೀಸರ್ ಬಿಡುಗಡೆ
- 39 min ago
ಕೇವಲ 48 ನಿಮಿಷಗಳಲ್ಲಿ ಸೋಲ್ಡ್ ಔಟ್ ಆದ ಕೆಟಿಎಂ 1290 ಸೂಪರ್ ಡ್ಯೂಕ್ ಆರ್ಆರ್
- 2 hrs ago
ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ
- 2 hrs ago
ದುಬಾರಿ ಬೆಲೆಯ ಲ್ಯಾಂಡ್ ರೋವರ್ ಡಿಫೆಂಡರ್ ಎಸ್ಯುವಿ ಖರೀದಿಸಿದ ನಟ ಅರ್ಜುನ್ ಕಪೂರ್
Don't Miss!
- News
ಸುಳ್ಳು ಹೇಳಿದ್ದು ಸಾಬೀತಾದರೆ ಮೋದಿ ಬಸ್ಕಿ ಹೊಡೆಯಬೇಕು; ಮಮತಾ ಬ್ಯಾನರ್ಜಿ
- Sports
ಸ್ವಿಗ್ಗಿಯಿಂದ ರೋಹಿತ್ ಶರ್ಮಾಗೆ ಅವಮಾನ ; ಕಿಡಿಕಾರಿದ ಫ್ಯಾನ್ಸ್
- Lifestyle
ರಕ್ತದಲ್ಲಿ ಕಬ್ಬಿಣದಂಶ ಹೆಚ್ಚಾದರೆ ಆಯುಸ್ಸು ಕಡಿಮೆಯಾಗುವುದು
- Education
NEET PG Admit Card 2021: ನೀಟ್ ಪಿಜಿ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Finance
ಸುಮಾರು 5,550 ಕೋಟಿ ರು ಡಿವಿಡೆಂಡ್ ಘೋಷಿಸಿದ ಟಿಸಿಎಸ್
- Movies
'ಅಮಿತಾಭ್ ಮಗಳ ಪಾತ್ರ ಮಾಡ್ತಿದ್ದೇನೆ' ಎಂದಾಗ ರಶ್ಮಿಕಾ ಪೋಷಕರ ಪ್ರತಿಕ್ರಿಯೆ ಹೇಗಿತ್ತು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸೂಪರ್ ಹಿಟ್ ಚಿತ್ರ ನೀಡಿದ ನಿರ್ದೇಶಕನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಿರ್ಮಾಪಕ
ವಯಾಕಾಮ್ 18 ಹಾಗೂ ಆಂಡೋ ಜೋಸೆಫ್ ಜಂಟಿ ನಿರ್ಮಾಣದ ಕಣ್ಣುಮ್ ಕಣ್ಣುಮ್ ಕೊಲ್ಲೈಯಡಿತಾಳ್ ಚಿತ್ರವು 2020ರ ಫೆಬ್ರವರಿ 28ರಂದು ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ದುಲ್ಕರ್ ಸಲ್ಮಾನ್, ರೀತು ವರ್ಮಾ, ವಿಜಯ್ ಟಿವಿ ಖ್ಯಾತಿಯ ರಕ್ಷನ್ ಹಾಗೂ ನಿರಂಜನಿ ಗೌತಮ್ ಮೆನನ್ ನಟಿಸಿದ್ದಾರೆ.

ಆಕ್ಷನ್, ಥ್ರಿಲ್ಲರ್, ರೋಮ್ಯಾನ್ಸ್ ಹಾಗೂ ಹಾಸ್ಯದ ಸಮ್ಮಿಶ್ರಣವಾಗಿದ್ದ ಈ ಚಿತ್ರವು ಸೂಪರ್ ಹಿಟ್ ಆಗಿತ್ತು. ಈ ಚಿತ್ರವು ತೆಲುಗಿನಲ್ಲಿ ಬಿಡುಗಡೆಯಾಗಿ ಅಲ್ಲಿಯೂ ಸಹ ಸೂಪರ್ ಹಿಟ್ ಆಗಿತ್ತು. ಅಂದ ಹಾಗೆ ಈ ಚಿತ್ರವು ತಮಿಳು, ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಿತ್ತು.

ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಚಿತ್ರದ ನಿರ್ದೇಶಕ ಡೇಸಿಂಗ್ ಪೆರಿಯಾಸಾಮಿ ಹಾಗೂ ನಟಿ ನಿರಂಜನಿ ನಡುವೆ ಪ್ರೀತಿ ಅರಳಿತ್ತು. ಇವರಿಬ್ಬರು ಇತ್ತೀಚೆಗೆ ವಿವಾಹವಾದರು. ಈ ಸಮಾರಂಭದಲ್ಲಿ ತಮಿಳು ಚಲನಚಿತ್ರೋದ್ಯಮದ ಹಲವು ಗಣ್ಯರು ಉಪಸ್ಥಿತರಿದ್ದು, ನವ ದಂಪತಿಗೆ ಶುಭ ಹಾರೈಸಿದರು.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಈ ಶುಭ ಸಂದರ್ಭದಲ್ಲಿ ಚಿತ್ರದ ನಿರ್ಮಾಪಕ ಆಂಡೋ, ನವವಿವಾಹಿತ ದಂಪತಿಗಳಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ್ದಾರೆ. ಚಿತ್ರವು ಯಶಸ್ವಿಯಾದ ಹಿನ್ನೆಲೆಯಲ್ಲಿ ಚಿತ್ರದ ಭಾಗವಾಗಿದ್ದ ನವ ದಂಪತಿಗಳಿಗೆ ಅವರು ಫೋರ್ಡ್ ಇಕೋಸ್ಪೋರ್ಟ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

ನಿರ್ದೇಶಕ ಡೇಸಿಂಗ್ ಪೆರಿಯಸಾಮಿ ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ತುಂಬಾ ಧನ್ಯವಾದಗಳು ಸರ್. ಇದು ನಿಜಕ್ಕೂ ಸರ್ಪ್ರೈಸ್ ಗಿಫ್ಟ್ ಎಂದು ಅವರು ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಅವರು ಮಾರ್ಚ್ 5ರಂದು ಪೋಸ್ಟ್ ಮಾಡಿದ್ದಾರೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಫೋರ್ಡ್ ಇಕೋ ಸ್ಪೋರ್ಟ್ ಕಾರ್ ಬಗ್ಗೆ:
ಡೇಸಿಂಗ್ ಪೆರಿಯಸಾಮಿ ಅವರು ಉಡುಗೊರೆಯಾಗಿ ಪಡೆದ ಫೋರ್ಡ್ ಇಕೋಸ್ಪೋರ್ಟ್ ಕಾರು ಹೆಚ್ಚು ಸುರಕ್ಷತಾ ಫೀಚರ್'ಗಳನ್ನು ಹೊಂದಿದೆ. ಈ ಕಾರ್ ಅನ್ನು 9 ಮಾದರಿಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಈ ಕಾರಿನ ಬೆಲೆ ಎಕ್ಸ್ ಶೋರೂಂ ದರದಂತೆ ರೂ.7.99 ಲಕ್ಷದಿಂದ ರೂ.11.49 ಲಕ್ಷಗಳಾಗಿದೆ. ಫೋರ್ಡ್ ಕಂಪನಿಯು ಈ ವರ್ಷದ ಜನವರಿ 5ರಂದು ಈ ಕಾರಿನ ಹೊಸ ಆವೃತ್ತಿಯನ್ನು ಬಿಡುಗಡೆಗೊಳಿಸಿತು. ಹೊಸ ಕಾರಿನಲ್ಲಿ ಕೆಲವು ಅಪ್ ಡೇಟ್ ಗಳನ್ನು ಮಾಡಲಾಗಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಈ ಕಾರಿನಲ್ಲಿ 8 ಇಂಚಿನ ಟಚ್ಸ್ಕ್ರೀನ್ ಇನ್ಫೋಟೇನ್ಮೆಂಟ್ ಸಿಸ್ಟಂ, ಆಟೋಮ್ಯಾಟಿಕ್ ಹೆಡ್ಲ್ಯಾಂಪ್, ಸ್ಟಾರ್ಟ್ / ಸ್ಟಾಪ್ ಪುಶ್ ಬಟನ್, ಸ್ಟೀಯರಿಂಗ್ ವ್ಹೀಲ್ನಲ್ಲಿ ಮಲ್ಟಿಫಂಕ್ಷನ್ ಕಂಟ್ರೋಲ್, ಆಟೋಮ್ಯಾಟಿಕ್ ವೈಪರ್, ಆರು ಏರ್ಬ್ಯಾಗ್ಗಳು, ಎಬಿಎಸ್ ವಿಥ್ ಇಬಿಡಿ ಸೇರಿದಂತೆ ಹಲವಾರು ಫೀಚರ್'ಗಳನ್ನು ನೀಡಲಾಗಿದೆ.

ಫೋರ್ಡ್ ಇಕೋಸ್ಪೋರ್ಟ್ ಕಾರ್ ಅನ್ನು 1.5 ಲೀಟರಿನ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ಪೆಟ್ರೋಲ್ ಎಂಜಿನ್ 123 ಬಿಹೆಚ್ಪಿ ಪವರ್ ಹಾಗೂ 150 ಎನ್ಎಂ ಟಾರ್ಕ್ ಉತ್ಪಾದಿಸಿದರೆ, ಡೀಸೆಲ್ ಎಂಜಿನ್ 100 ಬಿಹೆಚ್ಪಿ ಪವರ್ ಹಾಗೂ 215 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್'ಗಳೊಂದಿಗೆ ಸ್ಟಾಂಡರ್ಡ್ ಆಗಿ ನೀಡಲಾಗುತ್ತದೆ. ಪೆಟ್ರೋಲ್ ಎಂಜಿನ್ನಲ್ಲಿ 6-ಸ್ಪೀಡ್ ಆಟೋಮ್ಯಾಟಿಕ್ ಡಾರ್ಕ್ ಕನ್ವರ್ಟರ್ ಗೇರ್ಬಾಕ್ಸ್ ಆಯ್ಕೆಯನ್ನು ನೀಡಲಾಗುತ್ತದೆ.