ರಿಷಬ್ ಶೆಟ್ಟಿ ನೆಚ್ಚಿನ ಲಕ್ಸುರಿ Toyota ಕಾರು.. ಇದರ ವೈಶಿಷ್ಟ್ಯಗಳಿವು! ನಿಮಗೆ ಗೊತ್ತಿರದ ವಿಚಾರಗಳು
ನಟ ರಿಷಬ್ ಶೆಟ್ಟಿ (Rishab Shetty) ನಟಿಸಿ, ಆಕ್ಷನ್ ಕಟ್ ಹೇಳಿರುವ 'ಕಾಂತಾರ' ಪ್ರೀಕ್ವೆಲ್ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ. ಬಹುಮುಖ ಪ್ರತಿಭೆಯಾಗಿರುವ ರಿಷಬ್ ಶೆಟ್ಟಿ ಅವರಿಗೆ ಭಾರೀ ಸಂಖ್ಯೆಯಲ್ಲಿ ಅಭಿಮಾನಿ ಬಳಗವು ಇದೆ. ಕಳೆದ ಏಪ್ರಿಲ್ ತಿಂಗಳು ಅವರು, ನೂತನ ಟೊಯೊಟಾ ವೆಲ್‌ಫೈರ್ (Toyota Vellfire) ಎಂಪಿವಿ ಖರೀದಿ ಮಾಡಿದ್ದರು. ಅದಕ್ಕೆ ಸಂಬಂಧಿಸಿದ ಹಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿದ್ದವು. ನಾವಿಲ್ಲಿ ಈ ಕಾರಿನ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ಇದೊಂದು ಐಷಾರಾಮಿ ಎಂಪಿವಿಯಾಗಿದ್ದು, ದುಬಾರಿ ಬೆಲೆಯನ್ನು ಹೊಂದಿದೆ. ಕನಿಷ್ಠ ರೂ.1.22 ಕೋಟಿ ಹಾಗೂ ಗರಿಷ್ಠ ರೂ.1.32 ಕೋಟಿ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಐ ಮತ್ತು ವಿಐಪಿ ಎಕ್ಸಿಕ್ಯೂಟಿವ್ ಎಂಬ 2 ಆಕರ್ಷಕವಾದ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಪ್ರತಿಯೊಬ್ಬರನ್ನು ತನ್ನತ್ತ ಆಕರ್ಷಿಸುತ್ತದೆ. ಉತ್ತಮವಾದ ಗ್ರಿಲ್ ಹಾಗೂ ಬಂಪರ್‌ನ್ನು ಪಡೆದಿದೆ. 3 ಲೈನ್ ಎಲ್ಇಡಿ ಹೆಡ್‌ಲೈಟ್‌ಗಳು, ಸ್ಲೀಕ್ ಎಲ್ಇಡಿ ಡಿಆರ್‌ಎಲ್‌ಗಳು, ಶಾರ್ಪ್ ಪಾಯಿಂಟೆಡ್ ಎಲ್ಇಡಿ ಟೈಲ್ ಲ್ಯಾಂಪ್‌ಗಳು, ರೂಫ್ ಸ್ಪಾಯ್ಲರ್ ಹಾಗೂ 19 ಇಂಚಿನ ಡುಯಲ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಪ್ಲಾಟಿನಂ ವೈಟ್ ಪರ್ಲ್, ಪ್ರೆಶಿಯಸ್ ಮೆಟಲ್ ಹಾಗೂ ಬ್ಲ್ಯಾಕ್ ಬಣ್ಣಗಳೊಂದಿಗೂ ಲಭ್ಯವಿದೆ.
ಸುತ್ತಳತೆ (Dimensions):
ನೂತನ ಟೊಯೊಟಾ ವೆಲ್‌ಫೈರ್ ಎಂಪಿವಿಯು ದೊಡ್ಡ ಗಾತ್ರದಲ್ಲಿದೆ. 5005 ಎಂಎಂ ಉದ್ದ, 1850 ಎಂಎಂ ಅಗಲ ಮತ್ತು 1950 ಎಂಎಂ ಎತ್ತರವಿದೆ. ಜೊತೆಗಿದು 161 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 3000 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. 2065 ಕೆಜಿ ತೂಕವು ಇದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಇದು 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 148 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.
ಕಾರ್ಯಕ್ಷಮತೆ (Performance):
ಹೊಸ ಟೊಯೊಟಾ ವೆಲ್‌ಫೈರ್ ಎಂಪಿವಿಯು ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 2.5-ಲೀಟರ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಹೊಂದಿದೆ. 6000 ಆರ್‌ಪಿಎಂನಲ್ಲಿ 190 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 4500 ಆರ್‌ಪಿಎಂನಲ್ಲಿ 240 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಈ ಕಾರಿನ ಇಂಧನ ದಕ್ಷತೆಯೂ ಚೆನ್ನಾಗಿದೆ. 19.28 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 60 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 11 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ವೈಶಿಷ್ಟ್ಯಗಳು (Features):
ಇದರ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. 5-ಡೋರ್‌ಗಳನ್ನು ಒಳಗೊಂಡಿದೆ. 14 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಬಿಯೆಂಟ್ ಲೈಟಿಂಗ್, 8 ವೇ ಚಾಲಿತ ಡ್ರೈವರ್ ಸೀಟ್, 15 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಹೆಡ್ಸ್ ಅಪ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಡುಯಲ್ ಪ್ಯಾನಲ್ ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ನೂತನ ಟೊಯೊಟಾ ವೆಲ್‌ಫೈರ್ ಎಂಪಿವಿ ಪ್ರಯಾಣಿಕರ ರಕ್ಷಣೆಗಾಗಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ. 6 ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications








