ಲಾಕ್‌ಡೌನ್ ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪುತ್ರ

ಕರೋನಾ ವೈರಸ್ ಹರಡುವುದನ್ನು ತಡೆಯಲು ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಲಾಕ್‌ಡೌನ್ ಅವಧಿಯಲ್ಲಿ ಜನರ ಸಂಚಾರವನ್ನು ನಿಷೇಧಿಸಲಾಗಿದೆ. ತುರ್ತು ಕೆಲಸಕ್ಕೆ ಮನೆಯಿಂದ ಹೊರ ಬರುವವರ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪುತ್ರ

ಆದರೆ ಕೆಲವು ರಾಜಕಾರಣಿಗಳು ಹಾಗೂ ಅವರ ಸಂಬಂಧಿಕರು ಲಾಕ್‌ಡೌನ್ ತಮಗೆ ಅನ್ವಯಿಸುವುದಿಲ್ಲವೆಂಬ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಈಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ವರದಿಯಾಗಿದೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪುತ್ರ

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿರುವ ಅವರು ತಮ್ಮ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಕಾರಿನಲ್ಲಿ ನಂಜನಗೂಡಿನಲ್ಲಿರುವ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

MOST READ:ವಿಮಾನಗಳು ಹಾರಾಟ ನಡೆಸುವಾಗ, ಲ್ಯಾಂಡಿಂಗ್ ಆಗುವಾಗ ಉಂಟಾಗುವ ಶಬ್ದಗಳಿವು

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪುತ್ರ

ಈ ಘಟನೆ ಕಳೆದ ಮಂಗಳವಾರ ನಡೆದಿದೆ. ಈ ಘಟನೆಯ ಬಗೆಗಿನ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಸಾರ್ವಜನಿಕರು ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದಮುಖ್ಯಮಂತ್ರಿಗಳ ಪುತ್ರನ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪುತ್ರ

ಲಾಕ್‌ಡೌನ್ ಅವಧಿಯಲ್ಲಿ ರಾಜ್ಯ ಸರ್ಕಾರವು ದೇವಾಲಯಗಳನ್ನು ಮುಚ್ಚಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಸೋಂಕು ಹರಡಲು ಕಾರಣವಾಗುತ್ತದೆ ಎಂಬ ಕಾರಣಕ್ಕೆ ದೇವಾಲಯಗಳನ್ನು ಮುಚ್ಚಲಾಗಿದೆ.

MOST READ:ಪ್ರವಾಸದ ಹುಚ್ಚಿಗಾಗಿ ವಾಹನ ಕದಿಯುತ್ತಿದ್ದ ಎಂಜಿನಿಯರಿಂಗ್ ಪದವೀಧರ ಕೊನೆಗೂ ಲಾಕ್

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪುತ್ರ

ಆದರೆ ಈ ನಿಯಮಗಳು ಗಣ್ಯ ವ್ಯಕ್ತಿಗಳಿಗೆ ಅನ್ವಯಿಸುವುದಿಲ್ಲವೆಂಬುದು ಮುಖ್ಯಮಂತ್ರಿಗಳ ಪುತ್ರನ ನಡೆಯಿಂದ ಸಾಬೀತಾಗಿದೆ. ಕರ್ನಾಟಕದಲ್ಲಿ ಕರೋನಾ ವೈರಸ್ ಎರಡನೇ ಅಲೆ ತಾಂಡವವಾಡುತ್ತಿರುವುದರಿಂದ ಸೋಂಕು ಹರಡುವುದನ್ನು ತಡೆಯಲು ರಾಜ್ಯಾದ್ಯಂತ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪುತ್ರ

ಕರ್ನಾಟಕದಲ್ಲಿ ಮೇ 24ರ ಬೆಳಿಗ್ಗೆ 6 ಗಂಟೆಯವರೆಗೆ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಲಾಕ್‌ಡೌನ್ ಇನ್ನೂ ಜಾರಿಯಲ್ಲಿದ್ದರೂ ಸಹ ಬಿ.ವೈ.ವಿಜಯೇಂದ್ರರವರು ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‌ಯುವಿಯಲ್ಲಿ ತಮ್ಮ ಪತ್ನಿಯೊಂದಿಗೆ ನಂಜನಗೂಡು ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

MOST READ:ಭಾರತದಲ್ಲಿ ಹೆಚ್ಚು ಕಾರು ಮಾರಾಟವಾಗುವ ಹತ್ತು ಪ್ರಮುಖ ನಗರಗಳಿವು

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪುತ್ರ

ವಿಜಯೇಂದ್ರರವರು ಹಲವಾರು ಜಿಲ್ಲೆಗಳನ್ನು ದಾಟಿ ನಂಜನಗೂಡಿಗೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಪಮುಖ್ಯಮಂತ್ರಿಗಳು ವಿಜಯೇಂದ್ರ ಹಾಗೂ ಅವರ ಪತ್ನಿ ಕೋವಿಡ್ ಸೋಂಕಿತರ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸಲು ಹೋಗಿದ್ದರು.

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪುತ್ರ

ಕರೋನಾ ಮಹಾಮಾರಿಯನ್ನು ದೇಶದಿಂದ ನಿರ್ಮೂಲನೆ ಮಾಡಲು ಈ ಪೂಜೆ ನೆರವೇರಿಸಲಾಗಿದೆ ಎಂದು ಹೇಳಿದ್ದಾರೆ. ಒಂದೆಡೆ ಸರ್ಕಾರವು ಕರೋನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಲಾಕ್‌ಡೌನ್ ಜಾರಿಗೊಳಿಸಿ, ವಿನಾಕಾರಣ ಹೊರ ಬರುವವರ ವಾಹನಗಳನ್ನು ಜಪ್ತಿ ಮಾಡುತ್ತಿದೆ.

MOST READ:ಕರೋನಾ ಸೋಂಕಿತರ ಪಾಲಿಗೆ ದೇವರಾದ ಕರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪುತ್ರ

ಮತ್ತೊಂದೆಡೆ ರಾಜಕಾರಣಿಗಳ ಸಂಬಂಧಿಕರು ಹೊರಗೆ ಸುತ್ತುತ್ತಿದ್ದಾರೆ. ಇದರ ಜೊತೆಗೆ ಅವರು ಫೇಸ್ ಮಾಸ್ಕ್ ಸಹ ಧರಿಸುವುದಿಲ್ಲ. ವಿಜಯೇಂದ್ರರವರು ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಹಲವು ಭದ್ರತಾ ಕಾರುಗಳು ಅವರ ಜೊತೆಗಿದ್ದವು.

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪುತ್ರ

ಲಾಕ್‌ಡೌನ್ ಜಾರಿಗೊಳಿಸಿರುವುದರಿಂದ ಕರ್ನಾಟಕದಲ್ಲಿ ಮೇ 24ರವರೆಗೆ ಕ್ಯಾಬ್‌, ಟ್ಯಾಕ್ಸಿ, ಆಟೋ ರಿಕ್ಷಾ, ಬಸ್, ಮೆಟ್ರೋ ಹಾಗೂ ಇತರ ಖಾಸಗಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

MOST READ:ಜೀವದ ಹಂಗು ತೊರೆದು ಮಗುವಿನ ಪ್ರಾಣ ಉಳಿಸಿದ ರಿಯಲ್ ಹೀರೋಗೆ ಬೈಕ್ ಉಡುಗೊರೆ ನೀಡಿದ ಜಾವಾ ಕಂಪನಿ

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪುತ್ರ

ಆದರೆ ಈ ಅವಧಿಯಲ್ಲಿ ರೈಲು ಹಾಗೂ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ವಿಮಾನ ಹಾಗೂ ರೈಲು ಮೂಲಕ ಪ್ರಯಾಣಿಸುವವರು ಪ್ರಯಾಣದ ಟಿಕೆಟ್ ತೋರಿಸಿ ಸಂಚರಿಸಬಹುದು.

ಗಮನಿಸಿ: ಈ ಲೇಖನದಲ್ಲಿ ಕೆಲವು ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Karnataka Chief Minister son violates lockdown norms, visits temple in Mercedes Benz GLS. Read in Kannada.
Story first published: Thursday, May 20, 2021, 17:04 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X