ರಾಜ್ಯದ ಎಂಪಿಗಳಿಗೆ ಹೊಸ 'ಇನ್ನೋವಾ' ಕಾರು ಖರೀದಿಸಿದ ಸಿದ್ದರಾಮಯ್ಯ ಸರ್ಕಾರ: ಬೆಲೆ ಎಷ್ಟು, ವಿಶೇಷತೆಗಳೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ, ಕಳೆದ ವರ್ಷ ಸಂಪುಟದ ಸಚಿವರಿಗಾಗಿ ಹೊಚ್ಚ ಹೊಸ ಟೊಯೊಟಾ ಇನ್ನೋವಾ ಎಂಪಿವಿಗಳನ್ನು ಖರೀದಿಸಿತ್ತು. ಸದ್ಯ, ರಾಜ್ಯದ 26 ಸಂಸದರಿಗಾಗಿಯೂ ನೂತನ ಇನ್ನೋವಾ ಎಂಪಿವಿಗಳನ್ನೇ ಖರೀದಿ ಮಾಡಿದೆ ಎಂದು ವಿವಿಧ ಮಾಧ್ಯಮಗಳಲ್ಲಿ ವರದಿಯಾಗಿದೆ. 26 ಕಾರುಗಳಲ್ಲಿ 21ನ್ನು ಸಂಸದರಿಗೆ ಹಸ್ತಾಂತರಿಸಲಾಗಿದ್ದು, ಹಂಚಿಕೆಯಾಗದೆ ಉಳಿದ 5 ಕಾರುಗಳನ್ನು ಬೆಂಗಳೂರಿನ ಕೃಪಾ ಅತಿಥಿ ಗೃಹದಲ್ಲಿ ಇಡಲಾಗಿದೆ ಎಂದು ತಿಳಿದುಬಂದಿದೆ.

'ರಾಜ್ಯದಿಂದ ಸಂಸತ್ತಿಗೆ ಚುನಾಯಿತರುವ ಸಂಸದರಿಗೆ ರಾಜ್ಯ ಸರ್ಕಾರವೇ ಹೊಸ ಕಾರನ್ನು ಖರೀದಿಸುತ್ತದೆ. 3 ವರ್ಷಗಳ ಕಾಲ ಉಪಯೋಗಿಸಿದ ಅಥವಾ 1 ಲಕ್ಷ ಕಿಲೋಮೀಟರ್‌ಗೂ ಹೆಚ್ಚು ಸಂಚರಿಸಿದ ಬಳಿಕ, ಹಳೆಯ ಕಾರನ್ನು ಬದಲಾಯಿಸಲಾಗುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಎಂದು ಅಧಿಕಾರಿಗಳು ಹೇಳುತ್ತಾರೆ.

Karnataka Government Buys New Toyota Innova Crysta Mpv For Parliament Members

ರಾಜ್ಯ ಸರ್ಕಾರ ಸಂಸದರಿಗಾಗಿ ಟಾಪ್ ಎಂಡ್ ಮಾಡೆಲ್ ಟೊಯೋಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ಎಂಪಿವಿಗಳನ್ನು ಖರೀದಿಸಿದೆ ಎಂದು ಗೊತ್ತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಹೊಸ ಇನ್ನೋವಾ ಕ್ರಿಸ್ಟಾ ಕಾರು, ರೂ.19.99 ಲಕ್ಷದಿಂದ ರೂ.26.55 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ಈ ಟೊಯೋಟಾ ಇನ್ನೋವಾ ಕ್ರಿಸ್ಟಾ ಎಂಪಿವಿ ಆಕರ್ಷಕವಾದ ವಿನ್ಯಾಸ (ಡಿಸೈನ್) ಒಳಗೊಂಡಿದೆ. ಪ್ಲಾಟಿನಂ ವೈಟ್ ಪರ್ಲ್, ಸೂಪರ್ ವೈಟ್, ಸಿಲ್ವರ್ ಮೆಟಾಲಿಕ್ ಮತ್ತು ಆಟಿಟ್ಯೂಡ್ ಬ್ಲ್ಯಾಕ್ ಮೈಕಾ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಜೊತೆಗೆ ಜಿಎಕ್ಸ್, ಜಿಎಕ್ಸ್ ಪ್ಲಸ್, ವಿಎಕ್ಸ್ & ಜಡ್ಎಕ್ಸ್ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ.

ನೂತನ ಇನ್ನೋವಾ ಕ್ರಿಸ್ಟಾ ಕಾರು ಶಕ್ತಿಯುತವಾದ 2.4 - ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 150 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 343 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯ ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಬರೋಬ್ಬರಿ 8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಎಂಪಿವಿ 7 ಹಾಗೂ 8 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಜೊತೆಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 300 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ - ಎಸಿ ವೆಂಟ್‌ಗಳು, ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ ಟೊಯೋಟಾ ಇನ್ನೋವಾ ಕ್ರಿಸ್ಟಾ ಎಂಪಿವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7 - ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಸ್ಟಾರ್ಟ್ ಅಸಿಸ್ಟ್, ಬ್ರೇಕ್ ಅಸಿಸ್ಟ್, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ. ಈ ಕಾರಿಗೆ ಕಿಯಾ ಕ್ಯಾರೆನ್ಸ್ ಎಂಪಿವಿ ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, December 16, 2024, 13:36 [IST]
English summary
Karnataka government buys new toyota innova crysta mpv for parliament members
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+