4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಭಾರತದಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ಆದರೆ ಹೆಚ್ಚಿನ ಜನರು ಹೆಲ್ಮೆಟ್ ಧರಿಸುವುದೇ ಇಲ್ಲ. ಭಾರತದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಿಂದ ಹೆಚ್ಚಿನ ಸಂಖ್ಯೆಯ ಸಾವು ಸಂಭವಿಸಲು ಹೆಲ್ಮೆಟ್ ಧರಿಸದೇ ಇರುವುದು ಸಹ ಮುಖ್ಯ ಕಾರಣವಾಗಿದೆ.

4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಈ ಕಾರಣಕ್ಕೆ ರಸ್ತೆ ಅಪಘಾತಗಳಿಂದ ಉಂಟಾಗುವ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡುವ ಸಲುವಾಗಿ ಕೇಂದ್ರ ಸರ್ಕಾರವು ಸಂಚಾರಿ ನಿಯಮಗಳನ್ನು ಕಠಿಣಗೊಳಿಸುತ್ತಿದೆ. 4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ.

4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಕೇಂದ್ರ ಸರ್ಕಾರವು ಮೋಟಾರು ವಾಹನ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ವಯ 4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ದ್ವಿಚಕ್ರ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಕರ್ನಾಟಕದ ಸಾರಿಗೆ ಇಲಾಖೆಯು ಈ ಬಗ್ಗೆ ಆದೇಶ ಹೊರಡಿಸಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಇನ್ನು ಮುಂದೆ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ 4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ಹೆಲ್ಮೆಟ್ ಧರಿಸುವುದು ಕಡ್ಡಾಯ. ಕಡ್ಡಾಯ ಹೆಲ್ಮೆಟ್ ನಿಯಮವನ್ನು ಉಲ್ಲಂಘಿಸುವವರ ಚಾಲನಾ ಪರವಾನಗಿಯನ್ನು ಮೂರು ತಿಂಗಳವರೆಗೆ ಅಮಾನತುಗೊಳಿಸಲು ಕರ್ನಾಟಕ ಸರ್ಕಾರವು ನಿರ್ಧರಿಸಿದೆ.

4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಇದರ ಜೊತೆಗೆ ದಂಡವನ್ನು ಸಹ ವಿಧಿಸಲಾಗುತ್ತದೆ. ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019ರ ಪ್ರಕಾರ, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವವರಿಗೆ ರೂ.1,000ಗಳ ದಂಡ ವಿಧಿಸಲಾಗುತ್ತದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಕರ್ನಾಟಕ ಸರ್ಕಾರವು ಈ ದಂಡದ ಮೊತ್ತವನ್ನು ರೂ.500ಗಳಿಗೆ ಇಳಿಸಿದೆ. ಸದ್ಯಕ್ಕೆ ಕರ್ನಾಟಕದಲ್ಲಿ 1.6 ಕೋಟಿ ದ್ವಿಚಕ್ರ ವಾಹನಗಳನ್ನು ನೋಂದಾಯಿಸಲಾಗಿದೆ. ಈ ಪೈಕಿ 60 ಲಕ್ಷ ದ್ವಿಚಕ್ರ ವಾಹನಗಳು ಬೆಂಗಳೂರಿನಲ್ಲಿವೆ.

4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರಿನಲ್ಲಿ ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿರುವವರ ವಿರುದ್ಧ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. 2018ರಲ್ಲಿ 16.4 ಲಕ್ಷ ಪ್ರಕರಣಗಳು ಹಾಗೂ 2019ರಲ್ಲಿ 20.3 ಲಕ್ಷ ಪ್ರಕರಣಗಳು ದಾಖಲಾಗಿವೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಈ ವರ್ಷದ ಸೆಪ್ಟೆಂಬರ್ ವೇಳೆಗೆ 20.7 ಲಕ್ಷ ಪ್ರಕರಣಗಳು ದಾಖಲಾಗಿವೆ. ಈಗ ನಿಯಮಗಳನ್ನು ಬಿಗಿಗೊಳಿಸಿರುವುದರಿಂದ, ಮುಂಬರುವ ದಿನಗಳಲ್ಲಿ ಈ ಪ್ರಕರಣಗಳ ಸಂಖ್ಯೆ ಕಡಿಮೆಯಾಗುವ ನಿರೀಕ್ಷೆಗಳಿವೆ.

4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಗಳು ರಕ್ಷಣೆಯನ್ನು ನೀಡುತ್ತವೆ. ಅಪಘಾತಗಳಾದಾಗ ತಲೆಗೆ ಪೆಟ್ಟು ಬೀಳುವುದನ್ನು ತಡೆಯುತ್ತವೆ. ಇದನ್ನು ಪ್ರತಿಯೊಬ್ಬರೂ ಅರಿತು ಹೆಲ್ಮೆಟ್ ಧರಿಸಿ ಪ್ರಯಾಣಿಸಬೇಕು. ಇದರಿಂದ ದಂಡ ಪಾವತಿಸುವುದು ತಪ್ಪುತ್ತದೆ. ಜೊತೆಗೆ ರಸ್ತೆ ಅಪಘಾತಗಳಲ್ಲಿನ ಸಾವುನೋವುಗಳ ಪ್ರಮಾಣ ಕಡಿಮೆಯಾಗುತ್ತದೆ.

ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.

Most Read Articles

Kannada
English summary
Karnataka government mandates helmet for children above 4 years. Read in Kannada.
Story first published: Tuesday, October 20, 2020, 17:35 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X