ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಹೊಸ ಯೋಜನೆ ಜಾರಿಗೊಳಿಸಲು ಮುಂದಾದ ರಾಜ್ಯ ಸರ್ಕಾರ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಪೆಟ್ರೋಲ್, ಡೀಸೆಲ್ ವಾಹನಗಳಿಂದ ಉಂಟಾಗುವ ವಾಯುಮಾಲಿನ್ಯದ ಸಮಸ್ಯೆಯನ್ನು ಪರಿಹರಿಸಬಹುದು.

ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಹೊಸ ಯೋಜನೆ ಜಾರಿಗೊಳಿಸಲು ಮುಂದಾದ ರಾಜ್ಯ ಸರ್ಕಾರ

ಜೊತೆಗೆ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆಗೊಳಿಸಬಹುದು. ಈ ಕಾರಣಕ್ಕೆ ಕೇಂದ್ರ ಸರ್ಕಾರವು ಫೇಮ್ ಇಂಡಿಯಾ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡುವುದು ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ವಾಹನಗಳ ಬೆಲೆ ದುಬಾರಿಯಾಗಿರುತ್ತದೆ. ಸಬ್ಸಿಡಿ ನೀಡಿದರೆ ಜನರಿಗೆ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವುದು ಸುಲಭವಾಗುತ್ತದೆ.

ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಹೊಸ ಯೋಜನೆ ಜಾರಿಗೊಳಿಸಲು ಮುಂದಾದ ರಾಜ್ಯ ಸರ್ಕಾರ

ಆದರೆ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳು ಸಾಕಷ್ಟು ಸಂಖ್ಯೆಯಲ್ಲಿಲ್ಲ. ಇದೂ ಸಹ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂಜರಿಯುವಂತೆ ಮಾಡಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಹೊಸ ಯೋಜನೆ ಜಾರಿಗೊಳಿಸಲು ಮುಂದಾದ ರಾಜ್ಯ ಸರ್ಕಾರ

ಈ ಸಮಸ್ಯೆಗೆ ಪರಿಹಾರ ನೀಡಲು ಕರ್ನಾಟಕ ರಾಜ್ಯ ಸರ್ಕಾರವು ಹೊಸ ಯೋಜನೆಯನ್ನು ಹಮ್ಮಿಕೊಂಡಿದೆ. ಇದರ ಪ್ರಕಾರ, ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ 20%ನಷ್ಟು ಅಥವಾ ರೂ.10 ಲಕ್ಷ ಸಬ್ಸಿಡಿ ನೀಡಲು ಕರ್ನಾಟಕ ಸರ್ಕಾರವು ಚಿಂತನೆ ನಡೆಸುತ್ತಿದೆ.

ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಹೊಸ ಯೋಜನೆ ಜಾರಿಗೊಳಿಸಲು ಮುಂದಾದ ರಾಜ್ಯ ಸರ್ಕಾರ

ಈ ಎರಡರಲ್ಲಿ ಯಾವುದು ದೊಡ್ಡದೊ ಅದನ್ನು ಸಬ್ಸಿಡಿಯಾಗಿ ನೀಡಲಾಗುತ್ತದೆ. ಸಾಮಾನ್ಯವಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ರೂ.30 ಲಕ್ಷಗಳಿಂದ ರೂ.40 ಲಕ್ಷಗಳವರೆಗೆ ಖರ್ಚಾಗುತ್ತದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಹೊಸ ಯೋಜನೆ ಜಾರಿಗೊಳಿಸಲು ಮುಂದಾದ ರಾಜ್ಯ ಸರ್ಕಾರ

ಸಬ್ಸಿಡಿ ನೀಡಿದರೆ ಚಾರ್ಜಿಂಗ್ ಕೇಂದ್ರಗಳಲ್ಲಿ ಹೂಡಿಕೆ ಮಾಡಲು ಜನರು ಮುಂದೆ ಬರುತ್ತಾರೆ ಎಂಬುದು ಅಧಿಕಾರಿಗಳ ಅಭಿಪ್ರಾಯ. ಚಾರ್ಜಿಂಗ್ ಕೇಂದ್ರಗಳ ಕೊರತೆಯನ್ನು ನೀಗಿಸಲು ಶೀಘ್ರದಲ್ಲೇ ಈ ಯೋಜನೆಯನ್ನು ಸರ್ಕಾರದ ಅನುಮೋದನೆಗಾಗಿ ಕಳುಹಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಹೊಸ ಯೋಜನೆ ಜಾರಿಗೊಳಿಸಲು ಮುಂದಾದ ರಾಜ್ಯ ಸರ್ಕಾರ

ಎಲೆಕ್ಟ್ರಿಕ್ ವಾಹನ ನೀತಿಯನ್ನು ಘೋಷಿಸಿದ ಮೊದಲ ರಾಜ್ಯ ಕರ್ನಾಟಕ. 2017ರಲ್ಲಿ ಕರ್ನಾಟಕ ಸರ್ಕಾರವು ಘೋಷಿಸಿದ ನೀತಿ ಎಲ್ಲರ ಗಮನ ಸೆಳೆದಿತ್ತು.ಈ ನೀತಿಯನ್ವಯ ಬೆಂಗಳೂರನ್ನು ಭಾರತದ ಎಲೆಕ್ಟ್ರಿಕ್ ವಾಹನ ರಾಜಧಾನಿಯನ್ನಾಗಿ ಮಾಡುವುದಾಗಿ ಹೇಳಲಾಗಿತ್ತು.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಹೊಸ ಯೋಜನೆ ಜಾರಿಗೊಳಿಸಲು ಮುಂದಾದ ರಾಜ್ಯ ಸರ್ಕಾರ

ಅಂದಿನಿಂದ ಕರ್ನಾಟಕವು ಎಲೆಕ್ಟ್ರಿಕ್ ವಾಹನಗಳ ಬೆಳವಣಿಗೆಯಲ್ಲಿ ಸ್ವಲ್ಪ ಮಟ್ಟಿನ ಪ್ರಗತಿ ಸಾಧಿಸಿದೆ. ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಮೂಲಸೌಕರ್ಯಗಳ ಕೊರತೆಯು ಅಡ್ಡಿಯಾಗಿದೆ.

ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಹೊಸ ಯೋಜನೆ ಜಾರಿಗೊಳಿಸಲು ಮುಂದಾದ ರಾಜ್ಯ ಸರ್ಕಾರ

ಈ ಕಾರಣಕ್ಕೆ ಚಾರ್ಜಿಂಗ್ ಕೇಂದ್ರಗಳನ್ನು ನಿರ್ಮಿಸಲು ಮುಂದೆ ಬರುವವರಿಗೆ ಸಬ್ಸಿಡಿ ನೀಡಲು ಸರ್ಕಾರವು ಮುಂದಾಗಿದೆ. ಈ ಬಗ್ಗೆ ಇಟಿ ಆಟೋ ವರದಿ ಮಾಡಿದೆ. ಸಬ್ಸಿಡಿ ಯೋಜನೆಗೆ ಸರ್ಕಾರವು ಅನುಮೋದನೆ ನೀಡಿದರೆ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಸಾಕಷ್ಟು ಜನರು ಮುಂದೆ ಬರುವ ನಿರೀಕ್ಷೆಗಳಿವೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.

Article Published On: Monday, October 12, 2020, 12:45 [IST]
English summary
Karnataka government new scheme for installation of electric vehicle charging stations. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+