ಕೆಂಪು ದೀಪು: ಯಾರಿಗುಂಟು ಯಾರಿಗಿಲ್ಲ? ಇಲ್ಲಿದೆ ನೋಡಿ ವಿವರ

By Nagaraja

ಗಣ್ಯ, ಅತಿ ಗಣ್ಯ, ಸರ್ಕಾರಿ ಅಧಿಕಾರಿಗಳ ಅಧಿಕೃತ ವಾಹನಗಳ ಮೇಲೆ ಕೆಂಪು ದೀಪ ಉಪಯೋಗಿಸುವ ಸಂಬಂಧ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಎಸ್‌ಎಲ್‌ಪಿ (ಸಿವಿಲ್) ಸಂಖ್ಯೆ 25237/2010ರ ಪ್ರಕರಣದಲ್ಲಿ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಇದುವರೆಗೂ ಈ ಸಂಬಂಧ ಹೊರಡಿಸಲಾದ ಅಧಿಸೂಚನೆಯಗಳನ್ನು ಹಿಂದಕ್ಕೆ ಪಡೆದು, ಈ ಕೆಳಕಂಡ ಪ್ರತಿಷ್ಠಿತ ವ್ಯಕ್ತಿಗಳ ಅಧಿಕೃತ ವಾಹನಗಳ ಮೇಲೆ ಮಾತ್ರ ವಿಐಪಿ ರೆಡ್ ಟಾಪ್ ಲೈಟ್ ಬಳಸಲು ಕರ್ನಾಟಕ ಸರ್ಕಾರವು ಈ ಮೂಲಕ ನಿರ್ಧಿಷ್ಟಪಡಿಸಿ ಅಧಿಸೂಚನೆ ಹೊರಡಿಸಿದೆ.

ಯಾರಿಗುಂಟು ಯಾರಿಗಿಲ್ಲ..?
ಸುಪ್ರೀಂಕೋರ್ಟ್ ನಿರ್ದೇಶನದಂತೆ ಶಾಸಕಾಂಗ ಹಾಗೂ ನ್ಯಾಯಾಂಗ ಪ್ರಮುಖರಿಗೆ ಮಾತ್ರ ವಾಹನಗಳ ಮೇಲೆ ಕೆಂಪು ದೀಪ ಬಳಸುವ ಅವಕಾಶ ನೀಡುವ ಕುರಿತಂತೆ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದಾಗಿ ಗೌರವಾನ್ವಿತ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿ ಹಾಗೂ ಮಂತ್ರಿಮಂಡಲದ ಸಚಿವರುಗಳು, ಮಾನ್ಯ ಸಭಾಪತಿ, ಕರ್ನಾಟಕ ವಿಧಾನ ಪರಿಷತ್ತು, ಮಾನ್ಯ ಸಭಾಧ್ಯಕ್ಷರು, ಕರ್ನಾಟಕ ವಿಧಾನ ಸಭೆ, ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಹಾಗೂ ಹಾಲಿ ನ್ಯಾಯಾದೀಶರುಗಳು, ಮಾತ್ರ ತಮ್ಮ ವಾಹನಗಳ ಮೇಲೆ ಕೆಂಪು ದೀಪ ಬಳಸಬಹುದು.

ಮೇಲ್ಕಂಡ ಪ್ರತಿಷ್ಠಿತ ಗಣ್ಯರನ್ನು ಹೊರತುಪಡಿಸಿ, ಸಚಿವರುಗಳ ಸಮಾನ ಸ್ಥಾನಮಾನ ಹೊಂದಿರುವ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಮುಖ್ಯಸ್ಥರು ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ಸಮಾನ ಸ್ಥಾನಮಾನ ಹೊಂದಿರುವ ನ್ಯಾಯಮಂಡಳಿ, ಆಯೋಗಗಳ ಅಧ್ಯಕ್ಷರುಗಳು, ಸದಸ್ಯರುಗಳು ತಮ್ಮ ಅಧಿಕೃತ ವಾಹನಗಳ ಮೇಲೆ ಕೆಂಪು ದೀಪ ಅಳವಡಿಸಿಕೊಳ್ಳುವಂತಿಲ್ಲ.

ಪೊಲೀಸ್ ಜೀಪುಗಳಿಗೂ ಬಿತ್ತು ಬ್ರೇಕ್...
ಇದೇ ರೀತಿ ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳೂ ಸೇರಿದಂತೆ ಯಾವುದೇ ಸರ್ಕಾರಿ ಅಧಿಕಾರಿಗಳು ಮತ್ತು ಇತರೆ ಗಣ್ಯರು ತಮ್ಮ ಅಧಿಕೃತ ವಾಹನಗಳ ಮೇಲೆ ಕೆಂಪು ದೀಪ ಅಳವಡಿಸಿಕೊಳ್ಳುವಂತಿಲ್ಲ.

ಪ್ರತಿಷ್ಠಿತ ವ್ಯಕ್ತಿಗಳ ಭದ್ರತೆಗೆ ಉಪಯೋಗಿಸುವ ಪೊಲೀಸ್ ಎಸ್ಕಾರ್ಟ್ ವಾಹನಗಳು ಕೇಂದ್ರ ಮೋಟಾರು ವಾಹನ ನಿಯಮಗಳ 1989 ರ ನಿಯಮ 108 (3) ರನ್ವಯ ನೀಲಿ ಬಣ್ಣದ ದೀಪ ಅಳವಡಿಸಿಕೊಳ್ಳತಕ್ಕದ್ದು ಎಂದು ಸಾರಿಗೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಕೆಂಪು ದೀಪು: ಯಾರಿಗುಂಟು ಯಾರಿಗಿಲ್ಲ?

ಇಲ್ಲಿಯವರೆಗೆ ಸರ್ಕಾರದ ವಿವಿಧ ಅಂಗಗಳ 32 ಪ್ರಮುಖ ಹುದ್ದೆಗಳನ್ನು ಹೊಂದಿರುವವರಿಗೆ ಕೆಂಪು ದೀಪ ಬಳಸಲು ಅವಕಾಶವಿತ್ತು. ಆ ಅಧಿಸೂಚನೆಯನ್ನು ಈಗ ವಾಪಸ್‌ ಪಡೆಯಲಾಗಿದೆ.

ಕೆಂಪು ದೀಪು: ಯಾರಿಗುಂಟು ಯಾರಿಗಿಲ್ಲ?

ಇದರಿಂದಾಗಿ ಪೊಲೀಸ್‌ ಅಧಿಕಾರಿಗಳು, ನಿಗಮ ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು ಸೇರಿದಂತೆ ಅನೇಕರು ಇನ್ನುಮುಂದೆ ಕೆಂಪುದೀಪದ ಸೌಕರ್ಯದಿಂದ ವಂಚಿತರಾಗಲಿದ್ದಾರೆ.

ಕೆಂಪು ದೀಪು: ಯಾರಿಗುಂಟು ಯಾರಿಗಿಲ್ಲ?

ಗಣ್ಯ- ಅತಿಗಣ್ಯ, ಸರ್ಕಾರಿ ಅಧಿಕಾರಿಗಳ ಅಧಿಕೃತ ವಾಹನಗಳ ಮೇಲೆ ಕೆಂಪು ದೀಪ ಉಪಯೋಗಿಸುವ ಸಂಬಂಧ ಸುಪ್ರೀಂಕೋರ್ಟ್‌ 2010ರಲ್ಲಿ ಪ್ರಕರಣವೊಂದರ ವಿಚಾರಣೆ ನಡೆಸಿ ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ.

ಕೆಂಪು ದೀಪು: ಯಾರಿಗುಂಟು ಯಾರಿಗಿಲ್ಲ?

ಹಾಗೆಯೇ ಪ್ರತಿಷ್ಠಿತ ವ್ಯಕ್ತಿಗಳ ಭದ್ರತೆಗೆ ಉಪಯೋಗಿಸುವ ಪೊಲೀಸ್ ಎಸ್ಕಾರ್ಟ್ ವಾಹನಗಳು ಕೇಂದ್ರ ಮೋಟಾರು ವಾಹನ ನಿಯಮಗಳ 1989ರ ನಿಯಮ 108 (3) ರನ್ವಯ ನೀಲಿ ಬಣ್ಣದ ದೀಪ ಅಳವಡಿಸಿಕೊಳ್ಳತಕ್ಕದ್ದು ಎಂದು ಸಾರಿಗೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಕೆಂಪು ದೀಪು: ಯಾರಿಗುಂಟು ಯಾರಿಗಿಲ್ಲ?

ಒಟ್ಟಾರೆಯಾಗಿ ಗಣ್ಯ ವ್ಯಕ್ತಿಗಳ ಕುಟುಂಬದವರು ತಮ್ಮ ಖಾಸಗಿ ಸಂಚಾರಕ್ಕಾಗಿ ಕೆಂಪು ದೀಪಗಳನ್ನು ಬಳಸುತ್ತಿರುವುದಕ್ಕೆ ಇನ್ನು ಮುಂದೆ ಕಡಿವಾಣ ಬೀಳಲಿದೆ. ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ನಮ್ಮ ಜತೆ ಹಂಚಿಕೊಳ್ಳಿರಿ...

Most Read Articles

Kannada
English summary
The Karnataka government issued guidelines to restrict the use of red beacon vehicles to limited number of functionaries. The decision comes in the light of a Supreme Court directive to state governments for restricting the use of beacon lights to minimize inconvenience for common public
Story first published: Saturday, June 8, 2013, 11:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X