ಗೃಹಲಕ್ಷ್ಮಿ ದುಡ್ಡು ಉಳಿಸಿ, ಮಗನಿಗೆ ದಸರಾ ಹಬ್ಬಕ್ಕೆ 'ಹೋಂಡಾ' ಬೈಕ್ ಕೊಡಿಸಿದ್ರು ತಾಯಿ.. ಮೆಚ್ಚುಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಆಡಳಿತರೂಢ ಕಾಂಗ್ರೆಸ್ ಸರ್ಕಾರ, ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಿಸುವ ನಿಟ್ಟಿನಲ್ಲಿ ಗೃಹಲಕ್ಷ್ಮಿ (GruhaLakshmi) ಯೋಜನೆ ಜಾರಿಗೊಳಿಸಿದೆ. ಇದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಬಡ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಿಂಗಳಿಗೆ ರೂ.2,000 ಜಮೆ ಮಾಡಲಾಗುತ್ತಿದೆ. ಹಲವು ಮಹಿಳೆಯರು ಈ ಹಣವನ್ನು ಉತ್ತಮವಾಗಿಯೇ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಹಿಂದೆ, ಗೃಹಲಕ್ಷ್ಮಿ ಹಣದಲ್ಲಿ ಮಹಿಳೆಯೊಬ್ಬರು ರೆಫ್ರಿಜರೇಟರ್ (ಫ್ರಿಡ್ಜ್) ಖರೀದಿ ಮಾಡಿದ್ದರು. ಅತ್ತೆಯೊಬ್ಬರು ತಮ್ಮ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟಿದ್ದರು ಹಾಗೂ ಅಜ್ಜಿಯೊಬ್ಬರು ಊರಿನ ಜನರಿಗೆಲ್ಲ ಹೋಳಿಗೆ ಊಟ ಹಾಕಿಸಿದ್ದರು.

ಸದ್ಯ, ಬೆಳಗಾವಿ ಮಹಿಳೆಯೊಬ್ಬರು ತಮ್ಮ ಮಗನಿಗೆ ಹೊಚ್ಚ ಹೊಸ ಹೋಂಡಾ ಮೋಟಾರ್‌ಸೈಕಲ್ ಖರೀದಿಸಲು, ಗೃಹಲಕ್ಷ್ಮಿ ಹಣವನ್ನು ಮುಂಗಡವಾಗಿ ಪಾವತಿಸಿ (Down Payment) ಮಾಡಿದ್ದಾರೆ. ಆ ತಾಯಿಗೆ ಮಹಿಳಾ ಹಾಗೂ ಮಕ್ಕಳ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಪತ್ರ ಬರೆಯುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

karnataka GruhaLakshmi Scheme Funds a Woman Paid Down Payment For Her Son Honda Bike

ಈ ಬಗ್ಗೆ 'ಎಕ್ಸ್' ಖಾತೆಯಲ್ಲಿಯೂ ಪೋಸ್ಟ್ ಮಾಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, 'ಗೋಕಾಕ್ ತಾಲ್ಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆ ಹಣ ಕೂಡಿಟ್ಟು, ತಮ್ಮ ಮಗ ರಮೇಶ ನೀಲಪ್ಪ ಸಣ್ಣಕ್ಕಿಗೆ ದ್ವಿಚಕ್ರ ವಾಹನ ಖರೀದಿಸಲು ಮುಂಗಡ ಹಣ ನೀಡಿರುವ ಸುದ್ದಿ ಕೇಳಿ ಮನಸ್ಸಿಗೆ ಖುಷಿ ತಂದಿದೆ' ಎಂದು ಹೇಳಿದ್ದಾರೆ.

ಮುಂದುವರಿದು, 'ಗೃಹಲಕ್ಷ್ಮಿ ಯೋಜನೆ ಹಣ ಇಂದು ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಬದುಕು ಕಟ್ಟಿಕೊಳ್ಳಲು ನೆರವಾಗಿದೆ. ಮಹಾನವಮಿ ಹಬ್ಬದಂದು ದ್ವಿಚಕ್ರ ವಾಹನ ಕೊಳ್ಳಲು ಮುಂದಾಗಿರುವ ತಾಯಿ - ಮಗನಿಗೆ ಮನಃಪೂರ್ವಕವಾಗಿ ಶುಭ ಕೋರುತ್ತೇನೆ' ಎಂದು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

karnataka GruhaLakshmi Scheme Funds a Woman Paid Down Payment For Her Son Honda Bike

ಗೃಹಲಕ್ಷ್ಮಿ ಹಣದಲ್ಲಿ ಮಹಿಳೆಯ ಪುತ್ರ ನೂತನ ಹೋಂಡಾ ಎಸ್‍ಪಿ160 (Honda SP160) ಬೈಕ್‌ನ್ನು ಖರೀದಿ ಮಾಡಿದ್ದಾರೆ. ಇದು ರೂ.1.18 ಲಕ್ಷ ದಿಂದ ರೂ.1.22 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಡೀಪ್ ಗ್ರೌಂಡ್ ಗ್ರೇ ಹಾಗೂ ಮ್ಯಾಟ್ ಡಾರ್ಕ್ ಬ್ಲೂ ಮೆಟಾಲಿಕ್ ಎಂಬ ಆಕರ್ಷಕ ಬಣ್ಣಗಳ (ಕಲರ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಹೋಂಡಾ ಎಸ್‍ಪಿ160 ಮೋಟಾರ್‌ಸೈಕಲ್ 162.7 ಸಿಸಿ, ಏರ್-ಕೋಲ್ಡ್, ಫ್ಯುಯೆಲ್-ಇಂಜೆಕ್ಟ್ ಪೆಟ್ರೋಲ್ ಎಂಜಿನ್ ಹೊಂದಿದೆ. 13.46 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 14.58 ಎನ್ಎಂ (ನ್ಯೂಟನ್ ಟಾರ್ಕ್) ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 65 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಹೋಂಡಾ ಎಸ್‍ಪಿ160 ಬೈಕ್ ಎಲ್‌ಇಡಿ ಹೆಡ್‌ಲೈಟ್, ಎಲ್‌ಇಡಿ ಟೈಲ್‌ಲ್ಯಾಂಪ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿದೆ. 139 ಕೆಜಿ ತೂಕವಿದ್ದು, 12 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, October 11, 2024, 10:27 [IST]
English summary
Karnataka gruha lakshmi scheme a woman paid down payment for her son honda bike
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+