ಇವಿ ವಾಹನ ಬಳಕೆಯಲ್ಲಿ ದೇಶದಲ್ಲಿ 3ನೇ ಸ್ಥಾನಕ್ಕೇರಿ ಇತರ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕ

ಭಾರತದಲ್ಲಿ ಅತಿ ವೇಗವಾಗಿ ಎಲೆಕ್ಟ್ರಿಕ್ ವಾಹನಗಳ ಬೆಳವಣಿಗೆ ಕಾಣುತ್ತಿರುವ ರಾಜ್ಯವಾಗಿ ಕರ್ನಾಟಕ ಗುರ್ತಿಸಿಕೊಂಡಿದೆ. 2018 ರಿಂದ ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಏರಿಕೆಯಾಗುತ್ತಲೇ ಇದ್ದು, ಇವಿ ವಾಹನಗಳನ್ನು ಅಳವಡಿಸಿಕೊಳ್ಳುವಲ್ಲಿ ಕರ್ನಾಟಕ ಇತರ ರಾಜ್ಯಗಳಿಗೆ ಮಾದರಿಯಾಗಿದೆ.

ಇವಿ ವಾಹನ ಬಳಕೆಯಲ್ಲಿ ದೇಶದಲ್ಲಿ 3ನೇ ಸ್ಥಾನಕ್ಕೇರಿ ಇತರ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕ

ಭಾರತದಲ್ಲಿ ಸಾರ್ವಜನಿಕರನ್ನು ಆದಷ್ಟು ಬೇಗ ಎಲೆಕ್ಟ್ರಿಕ್ ವಾಹನಗಳತ್ತ ಕೊಂಡೊಯ್ಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಹಳಷ್ಟು ಶ್ರಮಿಸುತ್ತಿವೆ. ಇದಕ್ಕೆ ಮುಖ್ಯ ಕಾರಣ ವಾಯು ಮಾಲೀನ್ಯ, ಈಗಾಗಲೇ ದೆಹಲಿಯ ಮಾಲೀನ್ಯದಿಂದಾಗಿ ಅಲ್ಲಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ತೀರ್ವಗತಿಯಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆಗೆ ಉತ್ತೇಜಿಸಲಾಗುತ್ತಿದೆ.

ಇವಿ ವಾಹನ ಬಳಕೆಯಲ್ಲಿ ದೇಶದಲ್ಲಿ 3ನೇ ಸ್ಥಾನಕ್ಕೇರಿ ಇತರ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕ

ಅಲ್ಲದೇ 15-20 ವರ್ಷದ ವಾಹನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಹಳೆಯ ವಾಹನಗಳಿಂದ ಹೆಚ್ಚಿನ ಕಾರ್ಬನ್ ಹೊರಸೂಸುವಿಕೆಯು ಪರಿಸರದ ಮೇಲೆ ತೀರ್ವ ಪಭಾವ ಭೀರುತ್ತಿದೆ. ಇದು ದೇಶದ ಇತರ ರಾಜ್ಯಗಳಿಗೂ ಮುನ್ಸೂಚನೆಯಾಗಿದೆ. ದೆಹಲಿಯಂತೆ ಇತರ ರಾಜ್ಯಗಳಲ್ಲೂ ವಾಯು ಮಾಲೀನ್ಯ ಹೆಚ್ಚಾದರೆ ಪರಿಸ್ಥಿತಿ ವಿಷಮವಾಗಲಿದೆ.

ಇವಿ ವಾಹನ ಬಳಕೆಯಲ್ಲಿ ದೇಶದಲ್ಲಿ 3ನೇ ಸ್ಥಾನಕ್ಕೇರಿ ಇತರ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕ

ಹಾಗಾಗಿಯೇ ಎಲ್ಲಾ ರಾಜ್ಯ ಸರ್ಕಾರಗಳು ಇವಿಗಳ ಬಳಕೆಗೆ ಹೆಚ್ಚು ಆಸಕ್ತಿ ತೋರುತ್ತಿವೆ. ಇದಕ್ಕೆ ನಮ್ಮ ರಾಜ್ಯವು ಹೊರತಾಗಿಲ್ಲ. ಕಳೆದ ಐದು ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಕ್ಷೇತ್ರದಲ್ಲಿ ಅಸಾಧಾರಣ ಬೆಳವಣಿಗೆಯನ್ನು ಕಂಡಿದೆ. ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳು ಅಗಾಧವಾಗಿ ಬೆಳೆಯುತ್ತಿವೆ.

ಇವಿ ವಾಹನ ಬಳಕೆಯಲ್ಲಿ ದೇಶದಲ್ಲಿ 3ನೇ ಸ್ಥಾನಕ್ಕೇರಿ ಇತರ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕ

ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವಲ್ಲಿ ದಕ್ಷಿಣದ ರಾಜ್ಯಗಳಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ವರದಿಯಾಗಿದೆ. ದಿ ಹಿಂದೂ ದಿನಪತ್ರಿಕೆಯ ಪ್ರಕಾರ, 2018 ಮತ್ತು 2021 ರ ನಡುವೆ ರಾಜ್ಯದಲ್ಲಿ ಐದು ಪಟ್ಟು ಹೆಚ್ಚು ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿವೆ.

ಇವಿ ವಾಹನ ಬಳಕೆಯಲ್ಲಿ ದೇಶದಲ್ಲಿ 3ನೇ ಸ್ಥಾನಕ್ಕೇರಿ ಇತರ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕ

ಹೀಗಾಗಿ ದೇಶದಲ್ಲೇ ಅತಿ ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. 2018 ರಲ್ಲಿ ರಾಜ್ಯದಲ್ಲಿ ಕೇವಲ 3,806 ಎಲೆಕ್ಟ್ರಿಕ್ ವಾಹನಗಳು ಮಾತ್ರ ನೋಂದಣಿಯಾಗಿದ್ದವು. ಈ ಸಂಖ್ಯೆ ನವೆಂಬರ್ 2021 ರ ಹೊತ್ತಿಗೆ 22,264 ಘಟಕಗಳಿಗೆ ಏರಿಕೆಯಾಗಿದೆ.

ಇವಿ ವಾಹನ ಬಳಕೆಯಲ್ಲಿ ದೇಶದಲ್ಲಿ 3ನೇ ಸ್ಥಾನಕ್ಕೇರಿ ಇತರ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕ

ಕರ್ನಾಟಕದಲ್ಲಿ ಪ್ರತಿ ದಿನ ನೂರಾರು ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗುತ್ತಿವೆ. ಅದರಲ್ಲೂ ರಾಜ್ಯದ ಬೆಂಗಳೂರು ನಗರವು ಎಲೆಕ್ಟ್ರಿಕ್ ವಾಹನಗಳ ಅತಿ ಹೆಚ್ಚು ಬೆಳವಣಿಗೆಯನ್ನು ಕಂಡಿದೆ. ಈ ಅಂಕಿಅಂಶಗಳಲ್ಲಿ ಕಾರುಗಳಿಗಿಂತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಇವಿ ವಾಹನ ಬಳಕೆಯಲ್ಲಿ ದೇಶದಲ್ಲಿ 3ನೇ ಸ್ಥಾನಕ್ಕೇರಿ ಇತರ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕ

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳು ಬೆಳೆದರೆ, 2030ರ ವೇಳೆಗೆ ನಗರವು ಎಲೆಕ್ಟ್ರಿಕ್ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಪ್ರಾಬಲ್ಯವನ್ನು ಹೊಂದಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಸರ್ಕಾರ ಕೂಡ ರಾಜ್ಯದ ಪ್ರಮುಖ ನಗರ ಪ್ರದೇಶಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮೂಲಭೂತ ಮೂಲಸೌಕರ್ಯಗಳನ್ನು ನವೀಕರಿಸುವ ಕೆಲಸವನ್ನು ತ್ವರಿತಗೊಳಿಸಿದೆ.

ಇವಿ ವಾಹನ ಬಳಕೆಯಲ್ಲಿ ದೇಶದಲ್ಲಿ 3ನೇ ಸ್ಥಾನಕ್ಕೇರಿ ಇತರ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕ

ಪ್ರಸ್ತುತ ಚಾರ್ಜಿಂಗ್ ಸ್ಟೇಷನ್‌ಗಳ ಸಂಖ್ಯೆಯು ಘಾತೀಯವಾಗಿ ಬೆಳೆಯುತ್ತಿದೆ. ಅದೇ ಸಮಯದಲ್ಲಿ, ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯು ಹೆಚ್ಚಿನ ವೇಗದಲ್ಲಿ ಹೆಚ್ಚುತ್ತಿರುವ ಕಾರಣ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳ ಬೇಡಿಕೆಯು ಹೆಚ್ಚುತ್ತಿದೆ. ಈ ನಡುವೆ ಬೆಂಗಳೂರು ನಗರದ ಕೆಲವೆಡೆ ಚಾರ್ಜಿಂಗ್ ಸ್ಟೇಷನ್‌ಗಳ ಕೊರತೆ ಇದೆ ಎಂದು ವರದಿಗಳು ತಿಳಿಸಿವೆ.

ಇವಿ ವಾಹನ ಬಳಕೆಯಲ್ಲಿ ದೇಶದಲ್ಲಿ 3ನೇ ಸ್ಥಾನಕ್ಕೇರಿ ಇತರ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕ

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯು ಬಹು ವೇಗದಲ್ಲಿ ಹೆಚ್ಚುತ್ತಿರುವ ಕಾರಣ, ನಮ್ಮ ಬೆಂಗಳೂರು ಮುಂದಿನ ವರ್ಷಗಲ್ಲಿ ವಿಶ್ವದ ಅತ್ಯಂತ ವೇಗದ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಸಾಧ್ಯತೆಯಿದೆ.

ಇವಿ ವಾಹನ ಬಳಕೆಯಲ್ಲಿ ದೇಶದಲ್ಲಿ 3ನೇ ಸ್ಥಾನಕ್ಕೇರಿ ಇತರ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕ

ಸದ್ಯಕ್ಕಿರುವ ಸವಾಲುಗಳು:

ಪ್ರಸ್ತುತ ಎಲೆಕ್ಟ್ರಿಕ್ ವಾಹನಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಬೆಂಕಿಯಿಂದಾಗಿ ವಾಹನ ಮಾರಟವು ಕುಸಿತಕಂಡಿದೆ. ಇದಕ್ಕೆ ಮುಖ್ಯ ಕಾರಣ ಕಳಪೆ ಬ್ಯಾಟರಿಗಳು, ಹಾಗಾಗಿ ಇದನ್ನು ಗಂಭೀರವಾಗಿ ಪರಿಗಣಸಿರುವ ಕೇಂದ್ರ ಸರ್ಕಾರ ಗುಣಮಟ್ಟದ ಬ್ಯಾಟರಿಗಳ ಅಳವಾಡಿಕೆಗೆ ಆದೇಶಿಸಿದೆ. ಇಲ್ಲವಾದಲ್ಲಿ ಕ್ರಮ ಕೈಗೊಳ್ಳುವುದಾಗಿ ಇವಿ ತಯಾರಕರಿಗೆ ಎಚ್ಚರಿಕೆ ನೀಡಿದೆ.

ಇವಿ ವಾಹನ ಬಳಕೆಯಲ್ಲಿ ದೇಶದಲ್ಲಿ 3ನೇ ಸ್ಥಾನಕ್ಕೇರಿ ಇತರ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕ

ಬ್ಯಾಟರಿಗಳನ್ನು ಚಾರ್ಜ್ ಮಾಡುವ ಬ್ಯಾಟರಿ ಸ್ವಾಪ್ ಕೇಂದ್ರಗಳು ರಾಜ್ಯದ ವಿವಿಧೆಡೆ ಹೆಚ್ಚಾಗತೊಡಗಿವೆ. ಆದರೆ ಪ್ರಸ್ತುತ ಬಳಕೆಯಲ್ಲಿರುವ ಎಲೆಕ್ಟ್ರಿಕ್ ವಾಹನಗಳಿಗೆ ಅವು ಸಾಕಾಗುವುದಿಲ್ಲ. ಈ ರೀತಿಯ ಪರಿಸರದಿಂದಾಗಿ ಅನೇಕ ಜನರು ಎಲೆಕ್ಟ್ರಿಕ್ ವಾಹನಗಳನ್ನು ಬಳಸಲು ಹಿಂಜರಿಯುತ್ತಾರೆ. ಮನೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಲು ಹಲವಾರು ಗಂಟೆಗಳ ಅಗತ್ಯವಿರುತ್ತದೆ. ಆದರೆ ಎಷ್ಟೋ ಜನ ಅಷ್ಟು ಸಮಯ ಕಾಯುವ ಮನಸ್ಥಿತಿಯಲ್ಲಿಲ್ಲ.

ಇವಿ ವಾಹನ ಬಳಕೆಯಲ್ಲಿ ದೇಶದಲ್ಲಿ 3ನೇ ಸ್ಥಾನಕ್ಕೇರಿ ಇತರ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕ

ಹಾಗಾಗಿಯೇ ಅನೇಕ ಜನರು ಇಂಧನ ಚಾಲಿತ ವಾಹನಗಳನ್ನು ಖರೀದಿಸುವುದನ್ನು ನಾವು ನೋಡಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಈ ಗ್ರಹಿಕೆಯನ್ನು ಬದಲಾಯಿಸುವ ಕೆಲಸ ಮಾಡುತ್ತಿವೆ. ಅದರಲ್ಲೂ ಕೇಂದ್ರ ಸರ್ಕಾರದ ವತಿಯಿಂದ ಸಬ್ಸಿಡಿ ಮತ್ತು ತೆರಿಗೆ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಅಂತೆಯೇ, ರಾಜ್ಯ ಸರ್ಕಾರಗಳು ಸಹ ಅವರ ಪರವಾಗಿ ಸಬ್ಸಿಡಿ ಮತ್ತು ನೋಂದಣಿ ಶುಲ್ಕದ ರಿಯಾಯಿತಿಯನ್ನು ನೀಡುತ್ತಿವೆ.

ಇವಿ ವಾಹನ ಬಳಕೆಯಲ್ಲಿ ದೇಶದಲ್ಲಿ 3ನೇ ಸ್ಥಾನಕ್ಕೇರಿ ಇತರ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕ

ಇದರಿಂದ ಜನರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗಿದ್ದಾರೆ. ಜೊತೆಗೆ ಪರಿಸರದ ಬಗ್ಗೆ ಆಸಕ್ತಿ ಇರುವವರು ಹಾಗೂ ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಅರಿವು ಇರುವವರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗಿದ್ದಾರೆ. ಇದರಿಂದಾಗಿ ದೇಶದಲ್ಲಿ ಬ್ಯಾಟರಿ ಚಾಲಿತ ವಾಹನಗಳ ಸಂಖ್ಯೆ ಹಿಂದೆಂದಿಗಿಂತಲೂ ಹಲವು ಪಟ್ಟು ಹೆಚ್ಚಾಗಿದೆ.

Most Read Articles

Kannada
English summary
Karnataka ranks 3rd in the country in EV vehicle usage
Story first published: Monday, June 13, 2022, 10:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X