ಕರ್ನಾಟಕಕ್ಕೆ 4 ಪ್ರಶಸ್ತಿಗಳು: ಕೇಂದ್ರ ಸಚಿವ ನಿತಿನ್ ಗಡ್ಕರಿ ಮೆಚ್ಚುಗೆ: ಬೆಸ್ಕಾಂಗೆ ಚಿನ್ನದ ಪ್ರಶಸ್ತಿ

ನವದೆಹಲಿಯಲ್ಲಿ ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್ - 2025 ನ್ನು ಮೋಟಾರಿಂಗ್ ವರ್ಲ್ಡ್ ಮ್ಯಾಗಜಿನ್ ಆಫ್ ಡೆಲ್ಲಿ ಪ್ರೆಸ್ ಗ್ರೂಪ್ ರವರು ಆಯೋಜಿಸಿದ್ದು, ಈ ಪ್ರಶಸ್ತಿ ಸಮಾರಂಭದ ಮುಖ್ಯ ಅತಿಥಿಯಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಭಾಗವಹಿಸಿದ್ದರು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಹವಾಮಾನ ನೀತಿ ತಜ್ಞರಿಂದ ಪ್ರಶಸ್ತಿಗಳನ್ನು ಆಯ್ಕೆ ಮಾಡಿದ್ದು, ಪ್ರಶಸ್ತಿ ಸಮಾರಂಭದಲ್ಲಿ ಕರ್ನಾಟಕ ರಾಜ್ಯವು ಒಟ್ಟು ನಾಲ್ಕು (4) ಪ್ರಶಸ್ತಿಗಳನ್ನು ಪಡೆದುಕೊಂಡಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಶಸ್ತಿಗಳ ವಿವರವು ಕೆಳಕಂಡಂತಿದೆ.

1) ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಅಳವಡಿಸಿಕೊಳ್ಳುವಲ್ಲಿ ಅತ್ಯುತ್ತಮ ರಾಜ್ಯ: ಕರ್ನಾಟಕ ರಾಜ್ಯವು ದ್ವಿಚಕ್ರ ವಿದ್ಯುತ್ ಚಾಲಿತ ವಾಹನಗಳ ನೋಂದಣಿ ಹಾಗೂ ವಿದ್ಯುತ್ತೀಕರಣದಲ್ಲಿ ಮೇಲುಗೈ ಸಾಧಿಸಿದ ಕಾರಣ, ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಗೆ (RTO) ಬೆಳ್ಳಿ ಪ್ರಶಸ್ತಿಯನ್ನು ನೀಡಲಾಗಿದೆ. (Best state for adoption of two - wheeler electric vehicles (Silver)

karnataka-received-4-awards-for-adoption-of-electric-vehicles

2) ಎಲೆಕ್ಟ್ರಿಕ್ ಕಾರುಗಳನ್ನು ಅಳವಡಿಸಿಕೊಳ್ಳುವಲ್ಲಿ ಅತ್ಯುತ್ತಮ ರಾಜ್ಯ: ಕರ್ನಾಟಕ ರಾಜ್ಯವು ನಾಲ್ಕು ಚಕ್ರ ವಿದ್ಯುತ್ ಚಾಲಿತ ವಾಹನಗಳ ನೋಂದಣಿ ಹಾಗೂ ವಿದ್ಯುತ್ತೀಕರಣದಲ್ಲಿ 6% ಸಾಧನೆ ಮಾಡಿ, ನವೀನ ಪರಿಸರ ವ್ಯವಸ್ಥೆಯನ್ನು ಒಳಗೊಂಡಿರುವ ಕಾರಣ ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಗೆ(RTO) ಬೆಳ್ಳಿ ಪ್ರಶಸ್ತಿಯನ್ನು ನೀಡಲಾಗಿದೆ. (Best state for adoption of four - wheeler electric vehicles (Silver)

3) ಎಲೆಕ್ಟ್ರಿಕ್ ಬಸ್‌ಗಳನ್ನು ಅಳವಡಿಸಿಕೊಳ್ಳುವಲ್ಲಿ ಉತ್ತಮ ನಗರ (ಬೆಂಗಳೂರು): ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ಬೆಂಗಳೂರು ನಗರದಲ್ಲಿ ಒಟ್ಟು 1,568 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್ಸುಗಳನ್ನು ಸಂಯೋಜಿತ ಬಹು ಮಾದರಿ ಯೋಜನೆಯೊಂದಿಗೆ ಒಪಂದದ ಆಧಾರಿತ ಸಂಗ್ರಹಣೆಯಲ್ಲಿ ಹೊಂದಿರುವ ಕಾರಣ, ಕರ್ನಾಟಕ ಸರ್ಕಾರದ BMTC ಗೆ ಬೆಳ್ಳಿ ಪ್ರಶಸ್ತಿಯನ್ನು ನೀಡಲಾಗಿದೆ. (Best city for electric bus adoption (Silver)

4) ಅತ್ಯುತ್ತಮ ಚಾರ್ಜಿಂಗ್ ಮೂಲಸೌಕರ್ಯ: ಕರ್ನಾಟಕ ರಾಜ್ಯದಲ್ಲಿ ಇಂಧನ ಇಲಾಖೆಯ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು (BESCOM) ಎಲೆಕ್ಟ್ರಿಕ್ ವಾಹನಗಳಿಗೆ ಅನುಕೂಲವಾಗಲು 6,000 ಕ್ಕಿಂತ ಹೆಚ್ಚು ಚಾರ್ಜಿಂಗ್ ಕೇಂದ್ರಗಳನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿದ್ದು, ದೇಶದಲ್ಲಿಯೇ ಇದು ಪ್ರಥಮವಾಗಿರುವ ಕಾರಣ, ಬೆಸ್ಕಾಂಗೆ ಚಿನ್ನದ ಪ್ರಶಸ್ತಿ ನೀಡಲಾಗಿದೆ. (Best Electric Charging Infrastructure State (Gold) - Award to BESCOM)

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ಮೇಲ್ಕಂಡ ನಾಲ್ಕು (4) ಪ್ರಶಸ್ತಿಗಳನ್ನು ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ - 2025 ರಲ್ಲಿ ಕರ್ನಾಟಕ ಸರ್ಕಾರಕ್ಕೆ ಪ್ರಧಾನ ಮಾಡಿದ್ದು, ಕರ್ನಾಟಕ ರಾಜ್ಯವು ಗ್ರೀನ್ ಮೊಬಿಲಿಟಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಉತೇಜನ ನೀಡುವಲ್ಲಿ ಯಶಸ್ವಿಯಾಗಿದೆ ಎಂದು ಕೆಎಸ್‌ಆರ್‌ಟಿಸಿ ಹೇಳಿದೆ.

16-12-2025 ರಂದು ನವದೆಹಲಿಯಲ್ಲಿ ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್ - 2025 ನ್ನು ಮೋಟಾರಿಂಗ್ ವರ್ಲ್ಡ್ ಮ್ಯಾಗಜಿನ್ ಆಫ್ ಡೆಲ್ಲಿ ಪ್ರೆಸ್ ಗ್ರೂಪ್ ರವರು ಆಯೋಜಿಸಿದ್ದರು. ಈ ಪ್ರಶಸ್ತಿ ಸಮಾರಂಭದ ಮುಖ್ಯ ಅತಿಥಿಯಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವಾರು ಗಣ್ಯವ್ಯಕ್ತಿಗಳು ಭಾಗವಹಿಸಿದ್ದರು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, December 29, 2025, 12:02 [IST]
English summary
Karnataka received 4 awards for adoption of electric vehicles
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+