ತಮ್ಮ ರಾಯಲ್ ಎನ್‌ಫೀಲ್ಡ್ ಬೈಕನ್ನು ವಿಶೇಷವಾಗಿ ಅಲಂಕರಿಸಿ ದಸರಾ ಹಬ್ಬದ ಶುಭಾಶಯ ಕೋರಿದ ಬಾಲಿವುಡ್ ನಟ
ಆಯುಧ ಪೂಜೆಗೆ ಜನರು ಕಾರುಗಳು, ಸ್ಕೂಟರ್‌ಗಳು ಮತ್ತು ಮೋಟಾರ್ ಬೈಕ್‌ಗಳನ್ನು ಒಳಗೊಂಡಂತೆ ತಮ್ಮ ವಾಹನಗಳನ್ನು ಪೂಜಿಸುತ್ತಾರೆ. ವಾಹನ ಪೂಜೆಯ ಸಮಯದಲ್ಲಿ ವಾಹನಗಳನ್ನು ಸಿಂಧೂರ, ಹಾರಗಳು, ಮಾವಿನ ಎಲೆಗಳು ಮತ್ತು ಬಾಳೆ ಸಸಿಗಳಿಂದ ಅಲಂಕರಿಸಿ ಪೂಜಿಸಲಾಗುತ್ತದೆ.

ವಾಹನಗಳ ಪೂಜೆಯ ಸಮಯದಲ್ಲಿ ಅತ್ಯಂತ ಮಹತ್ವಪೂರ್ಣವಾಗಿ ಬಿಳಿ ಕುಂಬಳಕಾಯಿಯನ್ನು ಸಿಂಧೂರ ಮತ್ತು ಅರಿಶಿನದಿಂದ ಅಲಂಕರಿಸಲಾಗುತ್ತದೆ ಮತ್ತು ಎಲ್ಲಾ ರೀತಿಯ ಅನಿಷ್ಟಗಳನ್ನು ತೊಡೆದುಹಾಕಲು ವಾಹನದ ಮುಂದೆ ಒಡೆದು ಹಾಕಲಾಗುತ್ತದೆ. ನಟ ಕಾರ್ತಿಕ್ ಆರ್ಯನ್ ಕೂಡ ತನ್ನ ಬೈಕ್ ಅನ್ನು ಹಬ್ಬಕ್ಕೆ ಅಲಂಕರಿಸಿದ್ದಾರೆ. ತಮ್ಮ ಪ್ರೀತಿಯ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ನೊಂದಿಗೆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ದಸರಾ ಹಬ್ಬದ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ.

ಕಾರ್ತಿಕ್ ಆರ್ಯನ್ ಬಾಲಿವುಡ್‌ನ ಸ್ಟಾರ್ ನಟರ ಸಾಲಲ್ಲಿ ನಿಲ್ಲುವ ನಟ. ಈ ಹ್ಯಾಂಡ್‌ಸಮ್ ನಟ ಅಪಾರ ಸಂಖ್ಯೆ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ನಟ ಕಾರ್ತಿಕ್ ಅವರು ಅಭಿನಯದ ಜೊತೆಗೆ ಸರಳ ವ್ಯಕ್ತತ್ವಕ್ಕೆ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.ನಟ ಕಾರ್ತಿಕ್ ಅವರ ಭೂಲ್ ಭುಲೈಯಾ-2 ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಮಾಲ್ ಮಾಡಿದೆ,

ನಟನ ಕಾರುಗಳು ಮತ್ತು ಮೋಟಾರ್‌ಸೈಕಲ್‌ಗಳ ಮೇಲಿನ ಪ್ರೀತಿ ಎಲ್ಲರಿಗೂ ತಿಳಿದಿದೆ ಮತ್ತು ಈ ಕ್ಲಾಸಿಕ್ 350 ಅನ್ನು 2021ರ ಕೊನೆಯಲ್ಲಿ ಕಾರ್ತಿಕ್ ಖರೀದಿಸಿದ್ದರು. ಈ ಬೈಕ್ ಕಳೆದ ವರ್ಷ ಸೆಪ್ಟೆಂಬರ್ 2021 ರಲ್ಲಿ ಭಾರತದಲ್ಲಿ ಬಿಡುಗಡೆಯಾದ ಹೊಸ-ಜನ್ ಕ್ಲಾಸಿಕ್ 350 ಆಗಿದೆ.

ರಾಯಲ್ ಎನ್‌ಫೀಲ್ಡ್ ತನ್ನ 2021ರ ಕ್ಲಾಸಿಕ್ 350 ಬೈಕ್ ಅನ್ನು ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಇತ್ತೀಚೆಗೆ ಈ ಹೊಸ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಉತ್ಪಾದನೆಯು 1 ಲಕ್ಷ ಮೈಲಿಗಲ್ಲನ್ನು ದಾಟಿದೆ. ಈ ಹೊಸ ಬೈಕ್ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿಯು ಮಾರಾಟವಾಗುತ್ತಿದೆ.

ಈ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಯುರೋಪ್, ದಕ್ಷಿಣ ಏಷ್ಯಾ, ದಕ್ಷಿಣ ಅಮೇರಿಕಾ, ಆಸ್ಟ್ರೇಲಿಯಾ, ಇತ್ಯಾದಿ ದೇಶಗಳಲ್ಲಿ ಮಾರಾಟವಾಗುತ್ತಿದೆ. ರಾಯಲ್ ಎನ್‌ಫೀಲ್ಡ್ ಈ ಮೈಲಿಗಲ್ಲನ್ನು ಬಹಳ ಹಿಂದೆಯೇ ಸಾಧಿಸುತ್ತಿತ್ತು, ಆದರೆ ಬಿಡಿ ಭಾಗಗಳ ಜಾಗತಿಕ ಕೊರತೆಯಿಂದ ತಡವಾಗಿದೆ.

ಈ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕಿಗೆ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಹೊಂದಿದೆ. ಇದರ ಪರಿಣಾಮವಾಗಿ ಕಾಯುವ ಅವಧಿಯು ಹೆಚ್ಚಾಗುತ್ತಿದೆ. ಈ ಕ್ಲಾಸಿಕ್ 350 ಬೈಕ್ ಅನ್ನು ಮಾದರಿಯು ರೆಡ್‌ಡಿಚ್, ಹಾಲ್ಕೈನ್, ಸಿಗ್ನಲ್ಸ್, ಡಾರ್ಕ್ ಮತ್ತು ಕ್ರೋಮ್ ಎಂಬ ಐದು ವೆರಿಯೆಂಟ್ ಗಳಲ್ಲಿ ಲಭ್ಯವಿದೆ,

ಈ ರಾಯಲ್ ಎನ್‌ಫೀಲ್ಡ್ ಬೈಕ್ J1A ಪ್ಲಾಟ್‌ಫಾರ್ಮ್ ಅಡಿಯಲ್ಲಿ ತಯಾರಿಸಲಾಗಿದೆ. ಇನ್ನು ಈ ಬೈಕ್ ಕ್ರೋಮ್ ರೆಡ್, ಕ್ರೋಮ್ ಬ್ರೊಂಜ್, ಡಾರ್ಕ್ ಸ್ಟೆಲ್ತ್ ಬ್ಲ್ಯಾಕ್, ಡಾರ್ಕ್ ಗನ್‌ಮೆಟಲ್ ಗ್ರೇ, ಸಿಗ್ನಲ್ಸ್ ಮಾರ್ಷ್ ಗ್ರೇ, ಸಿಗ್ನಲ್ಸ್ ಸ್ಯಾಂಡ್ ಸ್ಟಾರ್ಮ, ಹಾಲ್ಸಿಯಾನ್ ಗ್ರೀನ್, ಹಾಲ್ಸಿಯಾನ್ ಬ್ಲ್ಯಾಕ್, ಹಾಲ್ಸಿಯಾನ್ ಗ್ರೇ, ರೆಡ್‌ಡಿಚ್ ಗ್ರೀನ್ ಮತ್ತು ರೆಡ್‌ಡಿಚ್ ಗ್ರೇ ಎಂಬ ಬಣ್ಣಗಳನ್ನು ಹೊಂದಿದೆ.

ಈ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಮಾದರಿಯು ಇತ್ತೀಚೆಗೆ ಬಿಡುಗಡೆಯಾಗಿರುವ ಮಿಟಿಯೊರ್ 350 ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಳ್ಳಲಾಗಿದೆ. 2021ರ ಕ್ಲಾಸಿಕ್ 350 ಬೈಕ್ ಮಾದರಿಯಲ್ಲಿ ಸಸ್ಷೆಂಷನ್ ಸೆಟಪ್ ಮತ್ತು ಬ್ರೇಕಿಂಗ್ ಸಿಸ್ಟಂ ಅನ್ನು ಸಂಪೂರ್ಣವಾಗಿ ಬದಲಾವಣೆಗೊಳಿಸಿದೆ, ಈ ಹೊಸ ಬೈಕಿನಲ್ಲಿ ಫ್ಯೂಲ್ ಗೇಜ್ ಮತ್ತು ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಪ್ರಮುಖ ಆಕರ್ಷಣೆಯಾಗಿದೆ.

ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಕ್ಲಾಸಿಕ್ 350 ಬೈಕ್ ಮಾದರಿಯಲ್ಲಿ ಮಿಟಿಯೊರ್ 350 ಮಾದರಿಗಾಗಿ ಪರಿಚಯಿಸಿರುವ 349 ಸಿಸಿ SOHC ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 19.1 ಬಿಎಚ್‌ಪಿ ಪವರ್ ಮತ್ತು 28 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ,

ಈ ಹಿಂದಿನ ಮಾದರಿಗಳಲ್ಲಿ ಇದ್ದ ವೈಬ್ರೆಷನ್ ಸ್ಟ್ಯಾಂಡರ್ಡ್ ಗಣನೀಯವಾಗಿ ಸುಧಾರಣೆಯಾಗಿದೆ. ಜೊತೆಗೆ ಎಲೆಕ್ಟ್ರಾನಿಕ್ಸ್ ಸೌಲಭ್ಯಗಳು ಬೈಕ್ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲಿದ್ದು, ಹೊಸ ಮಾದರಿಯ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇದರ ಜೊತೆಗೆ ಎಲ್‌ಸಿಡಿ ಜೊತೆಗೆ ಪ್ರತ್ಯೇಕವಾದ ಫ್ಯೂಲ್ ಗೇಜ್ ಮತ್ತು ಟ್ರಿಪ್ಲರ್ ಮೀಟರ್ ನೀಡಲಾಗಿದ್ದು, ಮಿಟಿಯೊರ್ ಮಾದರಿಯಲ್ಲಿರುವಂತೆ ಪ್ರತ್ಯೇಕವಾದ ಟ್ವಿನ್ ಪಾಡ್ ನೀಡದೆ ಇಂಟ್ರಾಗ್ರೆಟೆಡ್ ಮಾಡಲಾಗಿದೆ.

ಟಾಪ್ ಎಂಡ್ ಮಾದರಿಗಳಿಗಾಗಿ ಮಾತ್ರವೇ ಕಂಪನಿಯು ಟ್ರಿಪ್ಪರ್ ಮೀಟರ್ ಅನ್ನು ಜೋಡಣೆ ಮಾಡಿದ್ದು, ಈ ಸ್ಮಾರ್ಟ್ ಫೋನ್ ಕನೆಕ್ಟಿವಿಟಿ ಮೂಲಕ ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಆದರೆ ಹೊಸ ಬೈಕಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಎಲ್ಇಡಿ ಹೆಡ್‌ಲ್ಯಾಂಪ್‌ಗಳ ಬದಲಾಗಿ ಹಾಲೊಜೆನ್ ಬಲ್ಬ್ ಬಳಕೆ ಮಾಡಿದ್ದು, ಹೆಡ್‌ಲ್ಯಾಂಪ್ ಮಾತ್ರವಲ್ಲ ಟೈಲ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಹಾಲೊಜೆನ್ ಬಲ್ಬ್ ಅನ್ನು ಹೊಂದಿದೆ.

ಕಂಪನಿಯು ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಮಾದರಿಯನ್ನು ಸಿಂಗಲ್ ಕ್ರೆಡಲ್ ಫ್ರೆಮ್ ಬದಲಾಗಿ ಡ್ಯುಯಲ್ ಡೌನ್ ಟ್ಯೂಬ್ ಚಾರ್ಸಿಯೊಂದಿಗೆ ಅಭಿವೃದ್ದಿಗೊಳಿಸಿದೆ. ಡಬಲ್ ಕ್ರೆಡ್ ಚಾರ್ಸಿಸ್ ಬದಲಾವಣೆಯಿಂದಾಗಿ ಬೈಕ್ ರೈಡಿಂಗ್ ದೂರದ ಪ್ರಯಾಣದಲ್ಲೂ ಉತ್ತಮ ಅನುಭವವನ್ನು ನೀಡುತ್ತದೆ. ಈ ಹೊಸ ಬೈಕ್ ಸಸ್ಪೆಂಕ್ಷನ್ 41 ಎಂಎಂ ಟೆಲಿಸ್ಕೊಪಿಕ್ ಫೋರ್ಕ್‌ನೊಂದಿಗೆ 170 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಇನ್ನು ಇದರ , ಈ ಬ್ರೇಕಿಂಗ್ ಕೂಡ ಸಾಕಷ್ಟು ಸುಧಾರಿಸಿದೆ. ಇದು ಎರಡೂ ಕಡೆಗಳಲ್ಲಿ ಡಿಸ್ಕ್ ಬ್ರೇಕ್ ಅನ್ನು ನೀಡಲಾಗಿದೆ,

ಇದರೊಂದಿಗೆ ಎಬಿಎಸ್‌ನೊಂದಿಗೆ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಖರೀದಿದಾರರು ಆಯ್ಕೆ ಮಾಡಿದ ರೂಪಾಂತರವನ್ನು ಅವಲಂಬಿಸಿ ಸಿಂಗಲ್-ಚಾನೆಲ್ ಅಥವಾ ಡ್ಯುಯಲ್-ಚಾನೆಲ್ ಎಬಿಎಸ್ ಪಡೆಯುತ್ತಾರೆ ಒಟ್ಟಾರೆಯಾಗಿ, ಹೊಸ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350ಹಳೆಯ ಮಾದರಿಗಿಂತ ದೊಡ್ಡ ಸುಧಾರಣೆಯಾಗಿದೆ.ಈ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಹೈನೆಸ್ ಸಿಬಿ350 ಮತ್ತು ಜಾವಾ ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications








