Just In
Don't Miss!
- Movies
'ಬೆಲ್ ಬಾಟಂ-2' ಟೈಟಲ್ ಪೋಸ್ಟರ್ ಅನಾವರಣ: ಡಿಟೆಕ್ಟಿವ್ ದಿವಾಕರ್ ಈಸ್ ಬ್ಯಾಕ್
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Sports
ಭಾರತೀಯರ ನಿಂದಿಸಿದ ಕಿಡಿಗೇಡಿಗಳ ಕಂಡುಹಿಡಿಯುವಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ವಿಫಲ
- News
ಶಶಿಕಲಾ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿ
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಾಯ್ತು 85 ಲೀಟರ್ ಇಂಧನ
ಪ್ಲಾಸ್ಟಿಕ್ ತ್ಯಾಜ್ಯದಿಂದ ಇಂಧನವನ್ನು ಉತ್ಪಾದಿಸುವ ಯೋಜನೆಯನ್ನು ಜಾರಿಗೆ ತರಲು ಥಾಣೆ ಜಿಲ್ಲೆಯ ಕಲ್ಯಾಣ್-ಡೊಂಬಿವ್ಲಿ ನಗರಸಭೆ ಮಹಾರಾಷ್ಟ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿಯನ್ನು ಕೋರಿದೆ.

ಕಲ್ಯಾಣ್-ಡೊಂಬಿವ್ಲಿ ನಗರಸಭೆ ಪ್ಲಾಸ್ಟಿಕ್ ತ್ಯಾಜ್ಯದಿಂದ 85 ಲೀಟರ್ ಇಂಧನವನ್ನು ಯಶಸ್ವಿಯಾಗಿ ಉತ್ಪಾದಿಸಿದೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಕೋರಲಾಗಿದೆ. ಕಲ್ಯಾಣದ ಪರೇವ್ ಪ್ರದೇಶದಲ್ಲಿ, ಪ್ಲಾಸ್ಟಿಕ್ ತ್ಯಾಜ್ಯದಿಂದ ಇಂಧನವನ್ನು ಉತ್ಪಾದಿಸುವ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ ಎಂದು ಕಲ್ಯಾಣ್-ಡೊಂಬಿವ್ಲಿ ನಗರಸಭೆ ತಿಳಿಸಿದೆ.

ಒಂದು ಟನ್ ಪ್ಲಾಸ್ಟಿಕ್ ತ್ಯಾಜ್ಯದಿಂದ ಸುಮಾರು 500 ಲೀಟರ್ ಇಂಧನವನ್ನು ಉತ್ಪಾದಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಇಂಧನವನ್ನು ಆಯಿಲ್ ಬಾಯ್ಲರ್ ಗಳಲ್ಲಿ ಬಳಸಬಹುದು. ಇದನ್ನು ವಾಹನಗಳಲ್ಲಿ ಬಳಸಬಹುದೇ ಎಂಬುದರ ಬಗ್ಗೆ ಪರೀಕ್ಷೆಗಳು ನಡೆಯುತ್ತಿವೆ ಎಂದು ಕಲ್ಯಾಣ್-ಡೊಂಬಿವ್ಲಿ ನಗರಸಭೆಯ ಅಧಿಕಾರಿಗಳು ತಿಳಿಸಿದ್ದಾರೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಕಲ್ಯಾಣ್-ಡೊಂಬಿವ್ಲಿ ನಗರಸಭೆಯ ಈ ಯೋಜನೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಭಾರತದಲ್ಲಿ ಪ್ಲಾಸ್ಟಿಕ್‌ನ ವಿಪರೀತ ಬಳಕೆಯಿಂದಾಗಿ ಪರಿಸರಕ್ಕೆ ಹಾನಿಯಾಗುತ್ತಿದೆ. ಈ ಕಾರಣಕ್ಕೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡಿ ರಸ್ತೆ ನಿರ್ಮಾಣದಂತಹ ಯೋಜನೆಗಳಲ್ಲಿ ಬಳಸಲಾಗುತ್ತಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ಹಾಗೂ ಈ ಇಂಧನಗಳಿಂದ ಪರಿಸರಕ್ಕೆ ಹಾನಿಯಾಗುತ್ತಿರುವುದರಿಂದ ಕೇಂದ್ರ ಸರ್ಕಾರವು ಈಗ ಪರ್ಯಾಯ ಇಂಧನಗಳ ಬಳಕೆಯನ್ನು ಉತ್ತೇಜಿಸುತ್ತಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಪೆಟ್ರೋಲ್, ಡೀಸೆಲ್ ಬದಲಿಗೆ ಸಿಎನ್‌ಜಿ ಹಾಗೂ ಎಲ್‌ಎನ್‌ಜಿಯಂತಹ ಪರ್ಯಾಯ ಇಂಧನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಯೋಜನೆಗಳನ್ನು ರೂಪಿಸುತ್ತಿದೆ. ಸಿಎನ್‌ಜಿ ಈಗಾಗಲೇ ಭಾರತದಲ್ಲಿ ಬಳಕೆಯಾಗುತ್ತಿದೆ.

ಮುಂಬರುವ ದಿನಗಳಲ್ಲಿ ಎಲ್‌ಎನ್‌ಜಿ ಇಂಧನದ ಬಳಕೆಯು ಹೆಚ್ಚಾಗುವ ಸಾಧ್ಯತೆಗಳಿವೆ. ಎಲ್‌ಎನ್‌ಜಿ ಬಳಕೆಯು ಕಡಿಮೆ ವೆಚ್ಚದ್ದಾಗಿದೆ. ಜೊತೆಗೆ ಇದರಿಂದ ಉಂಟಾಗುವ ವಾಯು ಮಾಲಿನ್ಯ ಪ್ರಮಾಣವು ಕಡಿಮೆ ಎಂದು ವರದಿಯಾಗಿದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಈ ಪರ್ಯಾಯ ಇಂಧನಗಳ ಬಳಕೆಯ ಮೂಲಕ ಪರಿಸರವನ್ನು ರಕ್ಷಿಸಲು ಹಾಗೂ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ನಿರ್ಧರಿಸಿದೆ. ಇದರ ಜೊತೆಗೆ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಗೂ ಉತ್ತೇಜನವನ್ನು ನೀಡುತ್ತಿದೆ.

ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ. ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಸಬ್ಸಿಡಿ, ರಸ್ತೆ ತೆರಿಗೆ ವಿನಾಯಿತಿ, ನೋಂದಣಿ ಶುಲ್ಕದಿಂದ ವಿನಾಯಿತಿ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.