ಯಶ್ KGF ಕೋಟೆ ಸೇರಿತು ಹೊಸ ಕಾರು: ಕೋಟಿ ಬೆಲೆಯ ಕಾರುಗಳ ರಾಕಿ ಭಾಯ್ ಹೇಗಿದೆ ಗೊತ್ತಾ?

ನಟ ಯಶ್ (Yash) ಈಗ ಕೇವಲ ಸ್ಯಾಂಡಲ್​ವುಡ್ ಸ್ಟಾರ್ ಅಲ್ಲ. 'ಕೆಜಿಎಫ್​' ಬಳಿಕ ಪ್ಯಾನ್​ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರು ಜನಪ್ರಿಯ ಬ್ರ್ಯಾಂಡ್​ಗಳ ಅಂಬಾಸಿಡರ್ ಕೂಡ ಆಗಿದ್ದಾರೆ. ಅವರು ಜನಪ್ರಿಯತೆ ಮತ್ತು ಸಂಭಾವನೆಗೆ ತಕ್ಕಂತೆ ಲೈಫ್ಟ್ ಸ್ಟೈಲ್ ಕೂಡ ಬದಲಾಗುತ್ತದೆ. ಯಶ್ ಕೂಡ ತಮ್ಮ ಲೈಫ್ಟ್ ಸ್ಟೈಲ್ ತಕ್ಕಂತೆ ದುಬಾರಿ ಬೆಲೆಯ ಐಷಾರಾಮಿ ರೇಂಜ್​ ರೋವರ್ ಕಾರನ್ನು ಖರೀದಿಸಿದ್ದಾರೆ.

ಯಶ್ ಅವರು ಬ್ಲ್ಯಾಕ್ ಬಣ್ಣದ ರೇಂಜ್​ ರೋವರ್ ಕಾರನ್ನು ಖರೀದಿಸಿದ್ದಾರೆ. ಈ ರೇಂಜ್​ ರೋವರ್ ಎಸ್‍ಯುವಿ ಮಾದರಿಯನ್ನು ಸ್ವತಃ ಅವರೆ ಡ್ರೈವ್ ಮಾಡುವುತ್ತಿರುವುದು ವೀಡಿಯೊದಲ್ಲಿ ಕಾಣಬಹುದು. ಹೊಸ ರೇಂಜ್​ ರೋವರ್ ಕಾರಿನ ಮುಂದೆ ಪತ್ನಿ ರಾಧಿಕಾ ಪಂಡಿತ್ ಮತ್ತು ಮಕ್ಕಳಾದ ಯಥರ್ವ್​ ಮತ್ತು ಆಯ್ರಾ ಎತ್ತಿಕೊಂಡು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ರಾಕಿ ಭಾಯ್‌ಗೆ ನೆಟ್ಟಿಗರು ಶುಭಾಶಯ ಹೇಳುತ್ತಿದ್ದಾರೆ.

Yash Buys Range Rover

ರಾಕಿಂಗ್ ಸ್ಟಾರ್ ಯಶ್ ಅವರು ಖರೀದಿಸಿದ ರೇಂಜ್​ ರೋವರ್ ಬಗ್ಗೆ ಹೇಳುವುದಾದರೆ, ಹೊಸ ರೇಂಜ್​ ರೋವರ್ ಎಸ್‍ಯುವಿಯ ಬೆಲೆಯು ಸುಮಾರು ರೂ.2.39 - 4.17 ಕೋಟಿಯಾಗಿದೆ. ರೇಂಜ್ ರೋವರ್ ಅನ್ನು ಹೊಸ ಎಂಎಲ್ಎ-ಫ್ಲೆಕ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಅಭಿವೃದ್ಧಿಪಡಿಸಲಾಗಿದೆ. ಹೊಸ ಮಾದರಿಯು ಅದರ ಹಿಂದಿನ ಹೆಚ್ಚಿನ ಶೈಲಿಯನ್ನು ಉಳಿಸಿಕೊಂಡಿದೆ. ಆದರೆ ಕೆಲವು ಕಾಸ್ಮೆಟಿಕ್ ನವೀಕರಣಗಳನ್ನು ಪಡೆದುಕೊಂಡಿದೆ.

ಈ ಹೊಸ ರೇಂಜ್ ರೋವರ್ ಎಸ್‌ಯುವಿಯು ಪರಿಚಿತವಾಗಿ ಕಾಣುತ್ತದೆ ಮತ್ತು ವಿಭಿನ್ನ ಸಿಲೂಯೆಟ್ ಅನ್ನು ತಕ್ಷಣವೇ ಗುರುತಿಸಬಹುದಾಗಿದೆ. ಈ ನ್ಯೂ ಜನರೇಷನ್ ರೇಂಜ್ ರೋವರ್ ಎಸ್‍ಯುವಿಯ ಹೊಸ ಗ್ರಿಲ್ ಮತ್ತು ಹೆಡ್‌ಲ್ಯಾಂಪ್‌ನೊಂದಿಗೆ ಇದು ಹೆಚ್ಚು ಹೊಳಪು ತೋರುತ್ತಿದೆ. ಈ ರೇಂಜ್ ರೋವರ್ ಎಸ್‍ಯುವಿಯಲ್ಲಿ ಸಮತಟ್ಟಾದ ಮೇಲ್ಮೈಗಳು ಕೇವಲ 0.30 ಸಿಡಿಯ ಪ್ರಭಾವಶಾಲಿ ಡ್ರ್ಯಾಗ್ ಅಂಶವವನ್ನು ಒಳಗೊಂಡಿದೆ. ಈ ಮಾದರಿಯು 23-ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿವೆ.

ಆದರೆ ಇದರ ಸಣ್ಣ ಓವರ್‌ಹ್ಯಾಂಗ್‌ಗಳು ಬೃಹತ್ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದನ್ನು ಖಚಿತಪಡಿಸುತ್ತದೆ. ಈ ಎಸ್‍ಯುವಿಯ ಟರ್ನ್ ಇಂಡಿಕೇಟರ್‌ಗಳನ್ನು ಸಂಯೋಜಿಸುವ ಟೈಲ್‌ಗೇಟ್‌ನಲ್ಲಿನ ಬ್ಲ್ಯಾಕ್ ಅಸ್ಸೆಂಟ್ ಗಳನ್ನು ಸಂಪರ್ಕಗೊಂಡಿರುವ ಹಿಂಭಾಗದ ಸ್ಪೋರ್ಟ್ಸ್ ಬ್ಲ್ಯಾಕ್ಡ್-ಔಟ್ ಟೈಲ್‌ಲೈಟ್‌ಗಳಾಗಿವೆ. ಈ ನ್ಯೂ ಜನರೇಷನ್ ರೇಂಜ್ ರೋವರ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ 13.7-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇನ್ನು ಸೆಂಟರ್ ಕನ್ಸೋಲ್ ದೊಡ್ಡ 13.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ ಪ್ಲೇ ಹ್ಯಾಪ್ಟಿಕ್ ಪ್ರತಿಕ್ರಿಯೆಯೊಂದಿಗೆ ಹೊಂದಿದೆ.

ಇನ್ನು ಹಿಂಭಾಗದಲ್ಲಿ ಪ್ರಯಾಣಿಕರು 11.4-ಇಂಚಿನ ಮನರಂಜನಾ ಡಿಸ್ ಪ್ಲೇಯನ್ನು ಪಡೆಯುತ್ತಾರೆ. ಅದನ್ನು ಮುಂಭಾಗದ ಸೀಟ್‌ಬ್ಯಾಕ್‌ಗಳಿಗೆ ಜೋಡಿಸಲಾಗಿದೆ. ಇನ್ನು ಎಕ್ಸಿಕ್ಯುಟಿವ್ ಕ್ಲಾಸ್ ಹಿಂಬದಿಯ ಸೀಟುಗಳೊಂದಿಗೆ, ಸೆಂಟರ್ ಆರ್ಮ್‌ರೆಸ್ಟ್‌ನಲ್ಲಿ 8.0-ಇಂಚಿನ ಟಚ್‌ಸ್ಕ್ರೀನ್ ಕೂಡ ಇದೆ, ಇದರೊಂದಿಗೆ ನ್ಯೂ ಜನರೇಷನ್ ರೇಂಜ್ ರೋವರ್ 1600-ವ್ಯಾಟ್, 35-ಸ್ಪೀಕರ್ ಮೆರಿಡಿಯನ್ ಸಿಗ್ನೇಚರ್ ಸೌಂಡ್ ಸಿಸ್ಟಂ ಅನ್ನು ಸಹ ಪಡೆಯುತ್ತದೆ.

ಎಂಜಿನ್‌ಗಳಿಗೆ ಸಂಬಂಧಿಸಿದಂತೆ, 2022ರ ರೇಂಜ್ ರೋವರ್ ಎಸ್‍ಯುವಿಯಲ್ಲಿ 3 ಎಂಜಿನ್ ಆಯ್ಕೆಗಳಲ್ಲಿ ನೀಡಲಾಗಿದೆ. ಇದು 3.0-ಲೀಟರ್ ಪೆಟ್ರೋಲ್ ಮೈಲ್ಡ್-ಹೈಬ್ರಿಡ್, 3.0-ಲೀಟರ್ ಟರ್ಬೊ-ಡೀಸೆಲ್ ಮತ್ತು 4.4-ಲೀಟರ್ ಟ್ವಿನ್-ಟರ್ಬೊ ವಿ8 ಎಂಜಿನ್ ಗಳಾಗಿವೆ. ಇದರಲ್ಲಿ 3.0-ಲೀಟರ್ ಪೆಟ್ರೋಲ್ ಮೈಲ್ಡ್-ಹೈಬ್ರಿಡ್ 394 ಬಿಹೆಚ್‍ಪಿ ಪವರ್ ಮತ್ತು 550 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಇನ್ನು ಟರ್ಬೊ-ಡೀಸೆಲ್ ಎಂಜಿನ್ 346 ಬಿಹೆಚ್‍ಪಿ ಪವರ್ ಮತ್ತು 700 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, ಟ್ವಿನ್-ಟರ್ಬೊ ವಿ8 ಎಂಜಿನ್ 523 ಬಿಹೆಚ್‍ಪಿ ಪವರ್ ಮತ್ತು 750 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಸ್‍ಯುವಿಯು 5.3 ಸೆಕೆಂಡ್‌ಗಳಲ್ಲಿ 0-100 ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಈ ಎಸ್‍ಯುವಿಯು ಸುಮಾರು 80 ಕಿ.ಮೀ ರೇಂಜ್ ಹೊಂದಿರಲಿದೆ. ಎಲ್ಲಾ ಮಾದರಿಗಳು ಆಲ್-ವೀಲ್ ಡ್ರೈವ್ ಮತ್ತು ಸಕ್ರಿಯ-ಲಾಕಿಂಗ್ ರಿಯರ್ ಡಿಫರೆನ್ಷಿಯಲ್ ಜೊತೆಗೆ ಸ್ಟ್ಯಾಂಡರ್ಡ್ ಬರುತ್ತವೆ.

More from DriveSpark

Article Published On: Thursday, June 15, 2023, 16:35 [IST]
English summary
Kgf star yash buys new range rover suv details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+