ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಶೋರೂಂನಲ್ಲಿ ಪ್ರದರ್ಶಕ್ಕಿಡಲಾಗಿದ್ದ ಕಿಯಾ ಸೆಲ್ಟೊಸ್ ಕಾರು ಪಾರ್ಕಿಂಗ್ ಮಾಡುತ್ತಿದ್ದಾಗ ಸಿಬ್ಬಂದಿಯ ಎಡವಟ್ಟಿನಿಂದ ಕೆಳಗೆ ಅಪ್ಪಳಿಸಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾರೊಬ್ಬರಿಗೂ ಪ್ರಾಣಹಾನಿ ಸಂಭವಿಸಿಲ್ಲ.

ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಹೌದು, ಇತ್ತೀಚೆಗಷ್ಟೇ ಹೊಸ ಕಾರು ಮಾರಾಟದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ದಾಖಲೆ ಪ್ರಮಾಣದ ಸೆಲ್ಟೊಸ್ ಎಸ್‌ಯುವಿ ಮಾರಾಟ ಮಾಡಿದ್ದು, ಇದೀಗ ಮತ್ತಷ್ಟು ಮಾರಾಟ ಮಳಿಗೆಗಳಿಗೆ ಚಾಲನೆ ನೀಡುತ್ತಿದೆ. ಈ ಮಧ್ಯೆ ಹೊಸ ಕಾರೊಂದು ಶೋರೂಂನಲ್ಲಿ ಪ್ರದರ್ಶನಕ್ಕಿಡುವಾಗ ದುರಂತಕ್ಕಿಡಾಗಿದ್ದು, ಸಿಬ್ಬಂದಿಯ ಎಡವಟ್ಟಿನಿಂದಾಗಿ ಕಾರು ಮೊದಲ ಮಹಡಿಯಿಂದ ಕೆಳಗೆ ಅಪ್ಪಳಿಸಿದೆ.

ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಮೊದಲ ಮಹಡಿಯಿಂದ ಅಪ್ಪಳಿಸಿದ ಪರಿಣಾಮ ಹೊಸ ಕಾರು ಸಂಪೂರ್ಣ ಜಖಂಗೊಂಡಿದ್ದು, ನವಿ ಮುಂಬೈನಲ್ಲಿ ಹೊಸದಾಗಿ ಶುರುವಾಗಿದ್ದ ಕಿಯಾ ಶೋರೂಂನಲ್ಲಿ ಈ ಘಟನೆ ನಡೆದಿದೆ.

ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಕಾರುಗಳ ಪ್ರದರ್ಶನಕ್ಕಾಗಿ ಕೆಳ ಮಹಡಿಯಿಂದ ಮೊದಲ ಮಹಡಿಗೆ ಶಿಫ್ಟ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಕಿರಿದಾದ ಜಾಗದಲ್ಲಿದ್ದ ಪರಿಣಾಮ ಶೋರೂಂ ಸಿಬ್ಬಂದಿಗೆ ಕಾರು ನಿಯಂತ್ರಣಕ್ಕೆ ಸಿಕ್ಕಿಲ್ಲ ಎನ್ನಲಾಗಿದೆ.

ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಘಟನೆಯಲ್ಲಿ ಶೋರೂಂ ಸಿಬ್ಬಂದಿಗೆ ಕೆಲವು ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಹೊಸ ಕಾರು ತಾಂತ್ರಿಕವಾಗಿ ಬಲಿಷ್ಠವಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ವಿಭಾಗದಲ್ಲೇ ವಿಶೇಷ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ. ಕಿಯಾ ಮೋಟಾರ್ಸ್ ಸಂಸ್ಥೆಯು ಸೆಲ್ಟೊಸ್ ಮಾರಾಟದಲ್ಲಿ ತಿಂಗಳಿನಿಂದ ತಿಂಗಳಿಗೆ ಭರ್ಜರಿ ಮುನ್ನಡೆ ಕಾಯ್ದುಕೊಳ್ಳುತ್ತಿದ್ದು, ನವೆಂಬರ್ ಅವಧಿಯ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆಯೊಂದಿಗೆ ನಂ.1 ಸ್ಥಾನಕ್ಕೇರಿದೆ.

ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಕಳೆದ ಎರಡು ತಿಂಗಳಿನಿಂದ ಕಾರು ಮಾರಾಟದಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸುತ್ತಿರುವ ಕಿಯಾ ಸಂಸ್ಥೆಯು ಗ್ರಾಹಕರ ಬೇಡಿಕೆಯೆಂತೆ ಸೆಲ್ಟೊಸ್ ಕಾರಿನ ಉತ್ಪಾದನೆಯನ್ನು ಹೆಚ್ಚಿಸಿದ್ದು, ಬುಕ್ಕಿಂಗ್ ಮಾಡಿದ ಒಂದೇ ವಾರದಲ್ಲಿ ಹೊಸ ಕಾರನ್ನು ವಿತರಣೆ ಮಾಡುವ ಭರವಸೆ ನೀಡುತ್ತಿದೆ.

ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಇದರಿಂದ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಇತರೆ ಕಾರು ಉತ್ಪಾದನಾ ಸಂಸ್ಥೆಗಳಿಗಿಂತಲೂ ಅತಿ ಕಡಿಮೆ ಕಾಯುವಿಕೆ ಅವಧಿಯೊಂದಿಗೆ ಭರ್ಜರಿ ಮಾರಾಟ ದಾಖಲಿಸುತ್ತಿದ್ದು, ನವೆಂಬರ್ ಅವಧಿಯಲ್ಲಿ 14,005 ಯುನಿಟ್ ಮಾರಾಟ ಮಾಡಿದೆ.

MOST READ: ಕಾರು ಖರೀದಿಸಿದ ಮಾಲೀಕನ ಮೇಲೆ ಕೇಸ್ ಜಡಿದ ಎಂಜಿ ಮೋಟಾರ್..!

ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕ್ರೆಟಾ, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಂಡಿದ್ದು, ಆಕರ್ಷಕ ಬೆಲೆಗಳೊಂದಿಗೆ ಎಸ್‌ಯುವಿ ಪ್ರಿಯರ ನೆಚ್ಚಿನ ಕಾರು ಮಾದರಿಯಾಗಿ ಹೊರಹೊಮ್ಮಿದೆ.

MOST READ: ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಆಕರ್ಷಕ ಬೆಲೆ, ಸುಧಾರಿತ ತಂತ್ರಜ್ಞಾನ ಬಳಕೆಯಿಂದಾಗಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನಪ್ರಿಯತೆ ಹೊಂದುತ್ತಿರುವ ಕಿಯಾ ಸೆಲ್ಟೊಸ್ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 16.99 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ.

MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ

ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ ಒಟ್ಟು 6 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 9 ವೆರಿಯೆಂಟ್‌ಗಳನ್ನು ಹೊಂದಿದೆ. ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.

ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದೆ.

ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆತಿದೆ.

ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಸುರಕ್ಷಾ ಸೌಲಭ್ಯಗಳು

ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು,ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್‌ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.

Source: Sagar Patel/YouTube

More from DriveSpark

Article Published On: Tuesday, December 10, 2019, 19:38 [IST]
English summary
Kia Seltos falls off from first floor of the dealership video. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+