ವೈರ್‌ಲೆಸ್ ಚಾರ್ಜಿಂಗ್ ತಂತ್ರಜ್ಞಾನದ ಬೈಕ್ ಅಭಿವೃದ್ಧಿಪಡಿಸಿದ ಎಂಜಿನಿಯರಿಂಗ್ ವಿದ್ಯಾರ್ಥಿಗಳು

ಕೆಎಲ್ ಡೀಮ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವೈರ್‌ಲೆಸ್ ಚಾರ್ಜಿಂಗ್ ತಂತ್ರಜ್ಞಾನ ಹೊಂದಿರುವ ವಿಶಿಷ್ಟವಾದ ಎಲೆಕ್ಟ್ರಿಕ್ ಬೈಕ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮೂರನೇ ಹಾಗೂ ನಾಲ್ಕನೇ ವರ್ಷದ ವಿದ್ಯಾರ್ಥಿಗಳ ತಂಡವು ಕೆಎಲ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಯುನಿವರ್ಸಿಟಿಯ ಕೆಲವು ಹಳೆಯ ವಿದ್ಯಾರ್ಥಿಗಳೊಂದಿಗೆ ಸೇರಿ ಈ ಎಲೆಕ್ಟ್ರಿಕ್ ಬೈಕಿನ ಮೂಲಮಾದರಿಯನ್ನು ಅಭಿವೃದ್ಧಿಪಡಿಸಿದೆ.

ಈ ತಂಡವು ಅಭಿವೃದ್ಧಿಪಡಿಸಿರುವ ಈ ಎಲೆಕ್ಟ್ರಿಕ್ ಬೈಕ್ ಗಂಟೆಗೆ ಗರಿಷ್ಠ 55 ಕಿ.ಮೀ ವೇಗದಲ್ಲಿ ಚಲಿಸುತ್ತದೆ. ಒಂದು ಬಾರಿ ಪೂರ್ತಿಯಾಗಿ ಚಾರ್ಜ್‌ ಆದ ನಂತರ ಈ ಬೈಕ್ 85 - 100 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಬೈಕಿನಲ್ಲಿರುವ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಲು 5 ಗಂಟೆ ಬೇಕಾಗುತ್ತದೆ. ಚಾರ್ಜಿಂಗ್ ತಂತ್ರಜ್ಞಾನವು ಪ್ರೊಗ್ರಾಮೆಬಲ್ ಸೆಲ್ ಬ್ಯಾಲೆನ್ಸಿಂಗ್ ವೈಶಿಷ್ಟ್ಯದೊಂದಿಗೆ ಸೇರಿ, ದೀರ್ಘಕಾಲೀನ ಚಾರ್ಜ್'ಗಳಿಗೆ ಬ್ಯಾಟರಿ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

ಈ ಎಲೆಕ್ಟ್ರಿಕ್ ಬೈಕಿನಲ್ಲಿ ಸೆಲ್ ಬ್ಯಾಲೆನ್ಸಿಂಗ್ ಹಾಗೂ ವೈರ್‌ಲೆಸ್ ಚಾರ್ಜಿಂಗ್‌ನಂತಹ ಆಧುನಿಕ ಫೀಚರ್'ಗಳನ್ನು ಅಳವಡಿಸಲಾಗಿದೆ. ಇಂತಹ ಫೀಚರ್'ಗಳನ್ನು ಇತ್ತೀಚಿನ ದಿನಗಳಲ್ಲಿ ದುಬಾರಿ ಎಲೆಕ್ಟ್ರಿಕ್ ವಾಹನಗಳಲ್ಲಿ ಬಳಸಲಾಗುತ್ತದೆ.

ಈ ತಂಡವು ವಿಶ್ವವಿದ್ಯಾಲಯದಲ್ಲಿರುವ ವಿವಿಧ ಸೌಲಭ್ಯಗಳನ್ನು ಬಳಸಿಕೊಂಡು ಮೂಲಮಾದರಿಯನ್ನು ಅಭಿವೃದ್ಧಿಪಡಿಸಿದೆ. ಈ ತಂಡವು ಅಸ್ತಿತ್ವದಲ್ಲಿರುವ ಬೈಕಿನಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಅದನ್ನು ವೈರ್‌ಲೆಸ್ ಚಾರ್ಜಿಂಗ್‌ನೊಂದಿಗೆ ಇ-ಬೈಕಿನ ಮೂಲಮಾದರಿಯಂತೆ ಅಭಿವೃದ್ಧಿಪಡಿಸಿದೆ.

ಬೈಕ್ ಅಭಿವೃದ್ಧಿಪಡಿಸಿರುವ ವಿದ್ಯಾರ್ಥಿಗಳ ತಂಡವು ಬೈಕಿನ ವಿನ್ಯಾಸದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿ, ಅದರಲ್ಲಿ ಬಿಎಲ್‌ಡಿಸಿ ಮೋಟರ್ (ಬ್ರಷ್‌ಲೆಸ್ ಡಿಸಿ ಎಲೆಕ್ಟ್ರಿಕ್ ಮೋಟರ್) ಅನ್ನು ಗೇರ್ ಮಾಡ್ಯೂಲ್‌ಗೆ ಕಂಟ್ರೋಲರ್ ಮೂಲಕ ನೀಡಿದೆ.

ಈ ಯೋಜನೆಯ ಕಲ್ಪನೆಯನ್ನು ಅಭಿವೃದ್ಧಿಪಡಿಸಲು ವಿಶ್ವವಿದ್ಯಾಲಯವು ಈ ತಂಡಕ್ಕೆ ರೂ.1.40 ಲಕ್ಷ ಧನ ಸಹಾಯ ಮಾಡಿದೆ. ಈ ಬಗ್ಗೆ ಮಾತನಾಡಿರುವ ಕೆಎಲ್ ಡೀಮ್ಡ್ ವಿಶ್ವವಿದ್ಯಾಲಯದ ಅಧ್ಯಕ್ಷ ಕೊನೆರು ಸತ್ಯನಾರಾಯಣ, ಈ ವಿದ್ಯಾರ್ಥಿಗಳ ಉತ್ಸಾಹ ಹಾಗೂ ಕಠಿಣ ಪರಿಶ್ರಮವನ್ನು ಇಡೀ ವಿಶ್ವವಿದ್ಯಾಲಯವು ಮೆಚ್ಚುತ್ತಿದೆ. ವಿದ್ಯಾರ್ಥಿಗಳ ಹಾಗೂ ದೇಶದ ದೀರ್ಘಕಾಲೀನ ಪ್ರಯೋಜನಗಳಿಗಾಗಿ ನಾವು ಸಂಶೋಧನೆ ಹಾಗೂ ನಾವೀನ್ಯತೆಗಳತ್ತ ಗಮನ ಹರಿಸುತ್ತಿದ್ದೇವೆ ಎಂದು ಹೇಳಿದರು.

ಬೈಕ್ ತಯಾರಿ ಯೋಜನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಮೊದಲ ವರ್ಷದಿಂದಲೇ ಮೂಲ ಮಾದರಿ ತಯಾರಿಕೆಯಂತಹ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತಿ ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕೆಎಲ್ ವಿಶ್ವವಿದ್ಯಾಲಯದ ಲ್ಯಾಬ್, ಯಂತ್ರಗಳು ಹಾಗೂ ಎಲೆಕ್ಟ್ರಾನಿಕ್ಸ್‌ನೊಂದಿಗೆ ಕೆಲಸ ಮಾಡಲು ಬಲವಾದ ಅಡಿಪಾಯವನ್ನು ಒದಗಿಸಿದೆ.

Most Read Articles

Kannada
English summary
KL university students develops electric bike prototype with wireless charging. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X