ಮೊಬೈಲ್ ಕ್ಲಿನಿಕ್‌ಗಳಾಗಿ ಬದಲಾದ ಕೆಎಸ್‌ಆರ್‌ಟಿಸಿ ಬಸ್ಸುಗಳು
ಕರೋನಾ ವೈರಸ್ ಸೋಂಕು ವೇಗವಾಗಿ ಹರಡುತ್ತಿದೆ. ಭಾರತದಲ್ಲಿ ಈಗಾಗಲೇ ಸೋಂಕಿತರ ಸಂಖ್ಯೆ 75,000ದ ಗಡಿ ದಾಟಿದೆ. ಸೋಂಕಿನ ಪ್ರಮಾಣ ಹೆಚ್ಕುತ್ತಿರುವ ಕಾರಣಕ್ಕೆ ವೈದ್ಯಕೀಯ ಸಲಕರಣೆಗಳ ಕೊರತೆ ಎದುರಾಗಿದೆ.

ವೈದ್ಯಕೀಯ ಉಪಕರಣಗಳು ಮಾತ್ರವಲ್ಲದೆ ಆಸ್ಪತ್ರೆಗಳ ಕೊರತೆಯೂ ಸಹ ಎದುರಾಗುತ್ತಿದೆ. ಈ ಕೊರತೆಯನ್ನು ಹೋಗಲಾಡಿಸಲು ಆಯಾ ರಾಜ್ಯ ಸರ್ಕಾರಗಳು ವಿಶಿಷ್ಟ ಕ್ರಮಗಳನ್ನು ಕೈಗೊಳ್ಳುತ್ತಿವೆ. ರೈಲು ಬೋಗಿಗಳನ್ನು ಪ್ರತ್ಯೇಕ ವಾರ್ಡ್ಗಳನ್ನಾಗಿ ಬದಲಿಸಲಾಗಿತ್ತು. ಈಗ ಬಸ್‌ಗಳನ್ನು ಮೊಬೈಲ್ ಕ್ಲಿನಿಕ್‌ಗಳನ್ನಾಗಿ ಬದಲಿಸಲಾಗುತ್ತಿದೆ.

ಆಯಾ ರಾಜ್ಯ ಸರ್ಕಾರಗಳು ಸಾರ್ವಜನಿಕ ಸಾರಿಗೆ ಬಸ್ಸುಗಳನ್ನು ತಾತ್ಕಾಲಿಕ ಆಸ್ಪತ್ರೆಗಳಾಗಿ ಬದಲಿಸುತ್ತಿವೆ. ಕರೋನಾ ಕಾಣಿಸಿಕೊಂಡ ಆರಂಭದ ದಿನಗಳಲ್ಲಿ ಚೀನಾ ದೇಶವು ಕೆಲವೇ ದಿನಗಳಲ್ಲಿ ಕರೋನಾಗೆ ಪ್ರತ್ಯೇಕ ಆಸ್ಪತ್ರೆಯನ್ನು ನಿರ್ಮಿಸಿತ್ತು.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಭಾರತದಲ್ಲಿ ಸದ್ಯವಿರುವ ಸನ್ನಿವೇಶದಲ್ಲಿ ವೇಗವಾಗಿ ಆಸ್ಪತ್ರೆಯನ್ನು ನಿರ್ಮಿಸುವ ಸಾಧ್ಯತೆಯಿಲ್ಲ. ಈ ಕಾರಣಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳನ್ನು ಹಾಗೂ ಶಾಲೆಗಳನ್ನು ತಾತ್ಕಾಲಿಕ ಆಸ್ಪತ್ರೆಗಳಾಗಿ ಪರಿವರ್ತಿಸಲಾಗುತ್ತಿದೆ.

ಆರಂಭದಲ್ಲಿ ಉತ್ತರ ಭಾರತದ ರಾಜ್ಯಗಳಲ್ಲಿ ಮಾತ್ರ ಈ ರೀತಿಯ ಕ್ರಮ ಕೈಗೊಳ್ಳಲಾಗಿತ್ತು. ಈಗ ದಕ್ಷಿಣ ಭಾರತದ ರಾಜ್ಯಗಳಲ್ಲಿಯೂ ಈ ಪ್ರಯತ್ನಕ್ಕೆ ಕೈಹಾಕಲಾಗಿದೆ. ಈ ಹಿಂದೆ ಕೇರಳ ಹಾಗೂ ಆಂಧ್ರಪ್ರದೇಶ ರಾಜ್ಯಗಳ ಸರ್ಕಾರಿ ಬಸ್ಸುಗಳನ್ನು ತಾತ್ಕಾಲಿಕ ಆಸ್ಪತ್ರೆ ಹಾಗೂ ಕೋವಿಡ್ -19 ಪರೀಕ್ಷಾ ಕೇಂದ್ರಗಳಾಗಿ ಪರಿವರ್ತಿಸಲಾಗಿತ್ತು.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಈಗ ಕರ್ನಾಟಕ ಸರ್ಕಾರವು ಸಹ ಇದೇ ಹಾದಿಯನ್ನು ತುಳಿದಿದೆ. ಕರ್ನಾಟಕ ಸರ್ಕಾರದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್‌ಗಳನ್ನು ಜ್ವರ ಹಾಗೂ ಕೋವಿಡ್ -19 ಕುರಿತು ಅಧ್ಯಯನ ನಡೆಸುತ್ತಿರುವ ತಾತ್ಕಾಲಿಕ ಆಸ್ಪತ್ರೆಗಳಾಗಿ ಬದಲಿಸಲಾಗಿದೆ.

ಈ ಬಸ್ಸುಗಳು ಕರೋನಾ ವೈರಸ್ ಹೆಚ್ಚಾಗಿರುವ ರೆಡ್ ಝೋನ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಲಾಗಿದೆ. ಯಾವುದೇ ರೀತಿಯ ಜ್ವರ ಕಾಣಿಸಿಕೊಂಡರು ರಕ್ತದ ಮಾದರಿಯನ್ನು ಸಂಗ್ರಹಿಸಿ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನು ನೀಡಲಾಗುತ್ತದೆ.
MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ವಿಶೇಷವಾಗಿ ಮಾರ್ಪಡಿಸಿದ ಈ ಬಸ್ ಆಸ್ಪತ್ರೆಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಸಾರ್ವಜನಿಕ ಬಳಕೆಗಾಗಿ ಉದ್ಘಾಟಿಸಿದರು. ಈ ಬಸ್ ಆಸ್ಪತ್ರೆಗಳು ಈಗಾಗಲೇ ಅಸ್ತಿತ್ವದಲ್ಲಿರುವ ಆಸ್ಪತ್ರೆಗಳೊಂದಿಗೆ ಕಾರ್ಯ ನಿರ್ವಹಿಸಲಿವೆ.

ಈ ಬಸ್‌ಗಳಲ್ಲಿ ಪ್ರತ್ಯೇಕ ವಾರ್ಡ್, ಚಿಕಿತ್ಸಾ ಕೊಠಡಿ ಸೇರಿದಂತೆ ವಿವಿಧ ಸೌಲಭ್ಯಗಳಿವೆ. ಇದರ ಜೊತೆಗೆ ಪ್ರತಿ ಬಸ್‌ನಲ್ಲಿ ಡಾಕ್ಟರ್‌ಗಳು, ಮೂವರು ನರ್ಸ್‌ಗಳು ಹಾಗೂ ಲ್ಯಾಬ್ ಟೆಕ್ನಿಶಿಯನ್‌ಗಳಿರಲಿದ್ದಾರೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಈ ವಿಶೇಷ ಕಾರ್ಯಕ್ಕೆ ಸ್ವಯಂಸೇವಕರನ್ನು ಸಹ ಬಳಸಲಾಗುತ್ತದೆ ಎಂದು ಹೇಳಲಾಗಿದೆ. ಅವರು ಬಸ್ ನಿರ್ವಾಹಕರಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ ಹಾಗೂ ಚಿಕಿತ್ಸೆ ನೀಡುವ ಬಗ್ಗೆ ಸಲಹೆ ನೀಡಲಿದ್ದಾರೆ.


Click it and Unblock the Notifications