KSRTC: ದಕ್ಷಿಣ ಕನ್ನಡದಲ್ಲಿ ಇನ್ನೂ ಓಡಾಡುವುದು ಸುಲಭ.. 85 ಎಲೆಕ್ಟ್ರಿಕ್ ಬಸ್‌ಗಳು ಬರಲಿವೆ!
ದಕ್ಷಿಣ ಕನ್ನಡದ ಜನರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ - KSRTC) ಭರ್ಜರಿ ಸಿಹಿಸುದ್ದಿ ನೀಡಿದೆ. ನಿಗಮದ ಮಂಗಳೂರು ಮತ್ತು ಪುತ್ತೂರು ವಿಭಾಗಗಳು ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್‌ಗಳನ್ನು ಪಡೆಯಲಿದ್ದು, ಜಿಲ್ಲೆ ಹಾಗೂ ಅಂತರ ಜಿಲ್ಲಾ ಮಾರ್ಗದಲ್ಲಿ ಶೀಘ್ರದಲ್ಲೇ ಸಂಚಾರ ನಡೆಸಲಿವೆ.
ರಾಜ್ಯ ಸರ್ಕಾರವು ಮಂಗಳೂರು (Mangaluru) ವಿಭಾಗಕ್ಕೆ 45 ಮತ್ತು ಪುತ್ತೂರು (Puttur) ವಿಭಾಗಕ್ಕೆ 40 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ. ಬಸ್‌ಗಳನ್ನು ಹಸ್ತಾಂತರಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಬಗ್ಗೆ ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿರುವ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಅವರು, 'ಸರ್ಕಾರದಿಂದ ಮಂಜೂರಾದ ಹೊಸ ಎಲೆಕ್ಟ್ರಿಕ್ ಬಸ್‌ಗಳು ಶೀಘ್ರದಲ್ಲೇ ಸೇರ್ಪಡೆಗೊಳ್ಳುವ ನಿರೀಕ್ಷೆಯಿದೆ' ಎಂದು ಹೇಳಿದ್ದಾರೆ.

ಎಸಿ ಹಾಗೂ ನಾನ್ ಎಸಿ ಎಲೆಕ್ಟ್ರಿಕ್ ಬಸ್‌ಗಳು ಬರಲಿದ್ದು, ಮಂಗಳೂರು - ಧರ್ಮಸ್ಥಳ, ಮಂಗಳೂರು - ಮಣಿಪಾಲ ಮತ್ತು ಮಂಗಳೂರು - ಕಾಸರಗೋಡು ಮಾರ್ಗಗಳಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಪರಿಚಯಿಸಲು ಯೋಜಿಸುತ್ತಿದ್ದೇವೆ. ಈ ಬಸ್‌ಗಳು ಸಂಪೂರ್ಣ ಚಾರ್ಜ್ ನಲ್ಲಿ 200 ಕಿ.ಮೀ ಕ್ರಮಿಸುವ ಸಾಮರ್ಥ್ಯ ಹೊಂದಿದ್ದು, 2 ಗಂಟೆಗಳಲ್ಲಿ ರೀಚಾರ್ಜ್ ಆಗುತ್ತವೆ ಎಂದು ರಾಜೇಶ್ ಶೆಟ್ಟಿ ತಿಳಿಸಿದ್ದಾರೆ.
ಈ ಎಲೆಕ್ಟ್ರಿಕ್ ಬಸ್‌ಗಳು ಕಡಿಮೆ ಅಂತರದಲ್ಲಿ ಓಡಾಟ ನಡೆಸುವುದರಿಂದ ಬೆಂಗಳೂರು ಮತ್ತು ಮೈಸೂರಿನಂತಹ ದೂರದ ಮಾರ್ಗಗಳಲ್ಲಿ ಕಾರ್ಯಾಚರಣೆ ನಡೆಸುವುದು ಕಷ್ಟಕರ. ವಿಭಾಗದ ಡಿಪೋಗಳಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಸಿದ್ಧತೆಯನ್ನು ನಡೆಸಲಾಗಿದ್ದು, ಟೆಂಡರ್ ಪ್ರಕ್ರಿಯೆಯನ್ನು ಶುರು ಮಾಡಲಾಗಿದೆ. 5 ಚಾರ್ಜಿಂಗ್ ಪಾಯಿಂಟ್‌ನ್ನು ಬಿಜೈನಲ್ಲಿರುವ ಮಂಗಳೂರಿನ ಡಿಪೋ ಮತ್ತು 15 ಪಾಯಿಂಟ್‌ಗಳನ್ನು ಕುಂಟಿಕಾನದಲ್ಲಿ ತೆರೆಯಲಾಗುವುದು ಎಂದು ಅವರು ಹೇಳಿದ್ದಾರೆ.

ದಕ್ಷಿಣ ಕನ್ನಡವನ್ನು ಪಿಎಂ ಇ-ಬಸ್ (PM-eBus) ಸೇವಾ ಯೋಜನೆಗೂ ಆಯ್ಕೆ ಮಾಡಲಾಗಿದ್ದು, ಜಿಲ್ಲೆಗೆ 100 ಎಲೆಕ್ಟ್ರಿಕ್ ಬಸ್ ಮಂಜೂರಾಗಿದ್ದು, ಮುಂದಿನ ವರ್ಷ ಬರುವ ಸಾಧ್ಯತೆಯಿದೆ. ಮುಂಬರುವ ದಿನಗಳಲ್ಲಿ ಮಂಗಳೂರು ವಿಭಾಗವು ರಾಜ್ಯ ಸರ್ಕಾರದಿಂದ ನಾನ್ ಎಸಿ ಅಶ್ವಮೇಧ ಕ್ಲಾಸಿಕ್ ಬಸ್‌ಗಳನ್ನು ಪಡೆಯುವ ನಿರೀಕ್ಷೆಯಿದ್ದು, ಕನಿಷ್ಠ 20 ಬಸ್‌ಗಳು ದೊರೆಯಬಹುದು' ಎಂದು ತಿಳಿಸಿದ್ದಾರೆ.
ಪುತ್ತೂರು (Puttur) ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ (Jayakar Shetty) ಮಾತನಾಡಿ, ವಿಭಾಗಕ್ಕೆ ಮಂಜೂರಾಗಿರುವ 40 ಎಲೆಕ್ಟ್ರಿಕ್ ಬಸ್‌ಗಳನ್ನು ಸುಬ್ರಹ್ಮಣ್ಯ - ಧರ್ಮಸ್ಥಳ (Subrahmanya - Dharmastala) ಮತ್ತು ಧರ್ಮಸ್ಥಳ - ಮಂಗಳೂರು (Dharmastala - Mangaluru) ಮಾರ್ಗಗಳಲ್ಲಿ ಬಿಡಲಾಗುವುದು ಎಂದು ಹೇಳಿದ್ದಾರೆ.

ಫೆ.5 ರಂದು ಕೆಎಸ್‌ಆರ್‌ಟಿಸಿ ತನ್ನ ಪ್ರಯಾಣಿಕರಿಗಾಗಿ ಹೊಚ್ಚ ಹೊಸ 100 ಅಶ್ವಮೇಧ ಹೆಸರಿನ ಬಸ್‌ಗಳನ್ನು ಪರಿಚಯಿಸಿತ್ತು. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಬಸ್‌ಗಳಿಗೆ ಚಾಲನೆ ನೀಡಿದ್ದರು. ನಾನ್ ಎಸಿ ಬಸ್‌ಗಳಾಗಿರುವ ಅಶ್ವಮೇಧ ಕ್ಲಾಸಿಕ್, 52 ಆಸನಗಳನ್ನು ಒಳಗೊಂಡಿವೆ. ಎಲ್‌ಇಡಿ ಡೆಸ್ಟಿನೇಶನ್ ಬೋರ್ಡ್, ಜಿಪಿಎಸ್, ಮೊಬೈಲ್ ಚಾರ್ಜಿಂಗ್ ಪಾಯಿಂಟ್ ಅನ್ನು ಹೊಂದಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications