KSRTC: ಶಿವರಾತ್ರಿಗೆ ನಿಮ್ಮೂರಿಗೆ ಹೋಗುವುದು ಸುಲಭ, 1,500 ಹೆಚ್ಚುವರಿ ಬಸ್.. ಎಲ್ಲಿಂದ, ಎಲ್ಲಿಗೆ?
ಶಿವರಾತ್ರಿ ಹಬ್ಬಕ್ಕೆ ಬೆಂಗಳೂರಿನಿಂದ ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ - KSRTC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಈ ಬಸ್‌ಗಳು ಮಾರ್ಚ್ 7 ರಿಂದ 11 ರವರೆಗೆ ಕಾರ್ಯಾಚರಣೆ ನಡೆಸಲಿವೆ.
ಮಹಾ ಶಿವರಾತ್ರಿ ಹಾಗೂ ವಾರಾಂತ್ಯದ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಮಾರ್ಚ್ 7 ಮತ್ತು 10ರ ನಡುವೆ ಬೆಂಗಳೂರಿನಿಂದ ವಿವಿಧ ನಗರಗಳಿಗೆ 1,500 ಅಧಿಕ ಬಸ್‌ಗಳನ್ನು ಓಡಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಸೋಮವಾರ ತಿಳಿಸಿದೆ. ಈ ಹಬ್ಬದ ವಿಶೇಷ ಬಸ್‌ಗಳು ಕೆಂಪೇಗೌಡ ಬಸ್ ನಿಲ್ದಾಣದಿಂದ (Kempegowda Bus Station - Majestic) ಸಂಚಾರಿಸಲಿವೆ.

ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್, ತಿರುಪತಿ ಸೇರಿದಂತೆ ಪ್ರಮುಖ ನಗರಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಓಡಿಸಲಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ (Satellite Bus Stand) ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಹಾಗೂ ಮಡಿಕೇರಿ ಕಡೆಗೆ ಈ ವಿಶೇಷ ಬಸ್‌ಗಳು ಚಲಿಸಲಿವೆ. ಶಾಂತಿನಗರದಿಂದ ಐರಾವತ, ಅಂಬಾರಿ ಸೇರಿದಂತೆ ಎಲ್ಲ ಪ್ರೀಮಿಯಂ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ ಒಳಗೊಂಡಂತೆ ಇತರೆ ಪ್ರದೇಶಗಳಿಗೆ ತೆರಳಲಿವೆ.

ಈ ಹಬ್ಬದ ವಿಶೇಷ ಬಸ್‌ಗಳು ಮಾರ್ಚ್ 10 ಮತ್ತು 11 ರಂದು ವಿವಿಧ ನಗರಗಳಿಂದ ಬೆಂಗಳೂರಿಗೆ ಹಿಂದಿರುಗಳಿವೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಕೂಡ ಶಿವರಾತ್ರಿ ಹಬ್ಬದ ಹಿನ್ನೆಲೆ ಹೆಚ್ಚುವರಿ ಬಸ್‌ಗಳನ್ನು ಓಡಿಸಲಿದೆ. ಮಾರ್ಚ್ 7, 8 ರಂದು ಬೆಂಗಳೂರು, ಪುಣೆ ಸೇರಿದಂತೆ ವಿವಿಧೆಡೆಯಿಂದ ಹುಬ್ಬಳ್ಳಿಗೆ ವಿಶೇಷ ಬಸ್‌ಗಳು ಕಾರ್ಯಚರಣೆ ನಡೆಸಲಿವೆ. ಮಾರ್ಚ್ 10, 11 ರಂದು ಹುಬ್ಬಳ್ಳಿಯಿಂದ ವಾಪಸ್ ಆಗಲಿವೆ.
ಫೆಬ್ರವರಿ 5ರಂದು ಕೆಎಸ್‌ಆರ್‌ಟಿಸಿ ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ 100 'ಅಶ್ವಮೇಧ ಕ್ಲಾಸಿಕ್' ಬಸ್‌ಗಳನ್ನು ಪರಿಚಯಿಸಿತ್ತು ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಈ ಬಸ್‌ಗಳಿಗೆ ಹಸಿರು ನಿಶಾನೆ ತೋರಿಸಿದ್ದರು. ಈ ಅಶ್ವಮೇಧ ಬಸ್‌ಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರು ಸಹ ಉಚಿತವಾಗಿ ಓಡಾಡಬಹುದು. ಅಶ್ವಮೇಧ ಬಸ್‌ಗಳು 'ಪ್ರಯಾಣದ ಮರುಕಲ್ಪನೆ' ಎಂಬ ಘೋಷ ವಾಕ್ಯವನ್ನು ಹೊಂದಿವೆ.

ಕೆಎಸ್‌ಆರ್‌ಟಿಸಿ ಅಶ್ವಮೇಧ ಕ್ಲಾಸಿಕ್ ಬಸ್‌ಗಳು ಅತ್ಯಾಧುನಿಕ ಸೌಕರ್ಯವನ್ನು ಒಳಗೊಂಡಿವೆ. 52 ಆಸನಗಳನ್ನು ಹೊಂದಿದ್ದು, ಮುಂಭಾಗ ಮತ್ತು ಹಿಂಭಾಗ ಎಲ್‌ಇಡಿ ಡೆಸ್ಟಿನೇಶನ್ ಬೋರ್ಡ್, ಸೆನ್ಸಾರ್ ಚಾಲಿತ ನ್ಯೂಮ್ಯಾಟಿಕ್ ಡೋರ್ (ಬಾಗಿಲು), ಜಿಪಿಎಸ್, ರೇರ್ (ಹಿಂಭಾಗ) ಕ್ಯಾಮೆರಾ, ಮೊಬೈಲ್ ಚಾರ್ಜಿಂಗ್ ಪಾಯಿಂಟ್ ಹಾಗೂ ಎಮರ್ಜೆನ್ಸಿ ಬಟನ್ ಅನ್ನು ಪಡೆದಿವೆ. ಜೊತೆಗೆ ಮ್ಯಾಗಜೀನ್ & ವಾಟರ್ ಬಾಟಲ್ ಇಡಲು ಪೌಚ್ ಕೂಡ ಇವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications