KSRTC: ದೀಪಾವಳಿಗೆ ಸಿಹಿಸುದ್ದಿ.. ಶೀಘ್ರ ರಸ್ತೆಗಿಳಿಯಲಿವೆ 2 ಕೋಟಿ ಮೌಲ್ಯದ 20 ವಿಮಾನದಂತಹ ಹೊಸ ಬಸ್‌ಗಳು!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ - KSRTC), ರಾಜ್ಯ ಹಾಗೂ ಹೊರರಾಜ್ಯದ ಪ್ರಯಾಣಿಕರಿಗೆ ಅತ್ಯುತ್ತಮ ಸಾರಿಗೆ ಸೇವೆ ಒದಗಿಸುವ ಮೂಲಕ ಜನಮನ್ನಣೆ ಗಳಿಸಿದೆ. ಇದೀಗ ತನ್ನ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ. ಈ ತಿಂಗಳಾಂತ್ಯದೊಳಗೆ ತಲಾ ರೂ.1.78 ಕೋಟಿ ವೆಚ್ಚದ 20 ಐಷಾರಾಮಿ ಐರಾವತ್ ಕ್ಲಬ್ ಕ್ಲಾಸ್ 2.0 (Airavat Club Class 2.0) ಬಸ್‌ಗಳನ್ನು ರಸ್ತೆಗಿಳಿಸಲಿದೆ. ಅದಕ್ಕಾಗಿ ಭರ್ಜರಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.

ಈ ಸಂಬಂಧ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, 'ಐರಾವತ ಕ್ಲಬ್ ಕ್ಲಾಸ್ 2.0 ನೂತನ ವೋಲ್ವೋ (9600 ಮಾದರಿ) ಬಸ್‌ಗಳನ್ನು ಹೊಸಕೋಟೆ ಸಮೀಪವಿರುವ ವೋಲ್ವೋ ಬಸ್ ತಯಾರಿಕಾ ಘಟಕಕ್ಕೆ ಭೇಟಿ ನೀಡಿ, ಪರಿಶೀಲಿಸಲಾಯಿತು. ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ ಹೊಸ 20 ಬಸ್‌ಗಳು, ಈ ತಿಂಗಳ ಕೊನೆಯ ವಾರದಲ್ಲಿ ಕೆಎಸ್‌ಆರ್‌ಟಿಸಿಗೆ ಸೇರ್ಪಡೆಗೊಳ್ಳಲಿವೆ' ಎಂದು ಹೇಳಿದ್ದಾರೆ.

KSRTC Airavat Club Class 2 0 Buss By Month-End On Road Features Like Flight

ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್.ಆರ್ ಶ್ರೀನಿವಾಸ್, ಉಪಾಧ್ಯಕ್ಷ ಮಹಮ್ಮದ್ ರಿಜ್ವಾನ್ ನವಾಬ್, ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಸಿಬ್ಬಂದಿ & ಭದ್ರತಾ ವಿಭಾಗದ ನಿರ್ದೇಶಕಿ ಡಾ.ಕೆ ನಂದಿನಿದೇವಿ ಸೇರಿದಂತೆ ಇತರೆ ಅಧಿಕಾರಿಗಳು ಸಹ ವೋಲ್ವೋ ಬಸ್ ತಯಾರಿಕಾ ಘಟಕಕ್ಕೆ ಭೇಟಿ ನೀಡಿದ್ದರು.

ನೂತನ ಐರಾವತ ಕ್ಲಬ್ ಕ್ಲಾಸ್ 2.0 ಬಸ್‌ಗಳು ವಿಮಾನಕ್ಕೆ ಸವಾಲೆಸೆಯುವ ರೀತಿಯಲ್ಲಿ ಇರಲಿವೆ. ಉತ್ತಮವಾಗಿರುವ ಹ್ಯಾಲೊಜೆನ್ ಹೆಡ್‌ಲೈಟ್‌ಗಳು, ಡೇಟೈಮ್ ರನ್ನಿಂಗ್ ಲೈಟ್‌ಗಳು (ಡಿಆರ್‌ಎಲ್‌ಗಳು) ಮತ್ತು ಹೆಚ್ಚಿನ ಮೈಲೇಜ್ ನೀಡಲು ಸಾಧ್ಯವಾಗುವಂತೆ ಅತ್ಯುತ್ತಮ ತಂತ್ರಜ್ಞಾನದ ಎಂಜಿನ್‌ನ್ನು (ಅಡ್ವಾನ್ಸ್ಡ್ ಟೆಕ್ನಲಾಜಿ ಎಂಜಿನ್) ಒಳಗೊಂಡಿವೆ. ವಿಂಡ್‌ಶೀಲ್ಡ್ ಗ್ಲಾಸ್ ದೊಡ್ಡದಿರುವುದರಿಂದ ಚಾಲಕರಿಗೆ ರಸ್ತೆಯೂ ಸಂಪೂರ್ಣವಾಗಿ ಕಾಣುತ್ತದೆ. ಇದರಿಂದ ಅಪಘಾತವಾಗುವ ಸಂಭವ ತೀರಾ ವಿರಳವಾಗಿರುತ್ತದೆ.

KSRTC Airavat Club Class 2 0 Buss By Month-End On Road Features Like Flight

ಈ ಬಸ್‌ಗಳು ಅತ್ಯಾಧುನಿಕ ಆಸನಗಳು (ಸೀಟ್‌ಗಳು) ಹಾಗೂ ಹವಾನಿಯಂತ್ರಿತ (ಎಸಿ) ವ್ಯವಸ್ಥೆ ಹೊಂದಿರುವುದರಿಂದ ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ನಡೆಸಬಹುದು. ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಹೊಸ ಬಸ್‌ಗಳಲ್ಲಿ ಎಫ್‌ಎಪಿಎಸ್ (ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್) ಅನ್ನು ಅಳವಡಿಕೆ ಮಾಡಲಾಗಿದೆ.

ರಾಜ್ಯ ಹಾಗೂ ಹೊರರಾಜ್ಯಗಳಿಗೆ ಕೆಎಸ್‌ಆರ್‌ಟಿಸಿಯ 8,234 ಬಸ್‌ಗಳು ಸಂಪರ್ಕ ಕಲ್ಪಿಸುತ್ತಿವೆ. ದಿನವೊಂದಕ್ಕೆ 7,000 ಕಿಲೋಮೀಟರ್‌ಗೂ ಹೆಚ್ಚು ದೂರ ಈ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಬರೋಬ್ಬರಿ 23 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಅವರವರ ಊರುಗಳನ್ನು ನಿರ್ಭಿತಿಯಿಂದ ತಲುಪುತ್ತಿದ್ದಾರೆ. 34,904 ಹೆಚ್ಚು ನೌಕರರು ಕೆಎಸ್‌ಆರ್‌ಟಿಸಿಗೆ ಸೇರಿದ ವಿವಿಧ ನಿಗಮಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ, ಐರಾವತ್ ಕ್ಲಬ್ ಕ್ಲಾಸ್ 2.0 ಮಾಡೆಲ್ ಬಸ್‌ಗಳು ಸಾಕಷ್ಟು ಅತ್ಯಾಧುನಿಕವಾಗಿವೆ. ಶೀಘ್ರದಲ್ಲಿಯೇ ರಸ್ತೆಗಿಳಿಯುತ್ತಿರುವುದರಿಂದ ಪ್ರಯಾಣಿಕರು ಕೂಡ ಈ ಬಸ್‌ಗಳ ಬರುವಿಕೆಗಾಗಿ ತುದಿಗಾಲಲ್ಲಿ ಕಾಯುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಈ ನೂತನ ಬಸ್‌ಗಳು ಯಾವ ಮಾರ್ಗದಲ್ಲಿ ಸಂಚರಿಸಲಿವೆ ಎಂಬುದರ ಕುರಿತಂತೆ ಸ್ಪಷ್ಟವಾದ ವಿವರಗಳು ಲಭ್ಯವಾಗಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, October 8, 2024, 15:02 [IST]
English summary
Ksrtc airavat club class 2 0 buss by month end on road features like flight
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+