KSRTC: ಕೆಎಸ್‌ಆರ್‌ಟಿಸಿಗೆ ಬರಲಿವೆ ಹೊಸ ಬಸ್‌ಗಳು.. ನಿಮ್ಮೂರಿಗೆ ಹೋಗುವುದು ಸುಲಭ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ - KSRTC) 'ಪಲ್ಲಕ್ಕಿ' ಬಸ್ ಸೇವೆಯನ್ನು ಪರಿಚಯಿಸಿದ ನಂತರ, ಸ್ಲೀಪರ್ ಬಸ್‌ಗಳಿಗಾಗಿ ಪ್ರಯಾಣಿಕರಿಂದ ಬೇಡಿಕೆ ಹೆಚ್ಚಾಗುತ್ತಿದೆ. ಸಾರಿಗೆ ಸಂಸ್ಥೆಯು ಸಾರ್ವಜನಿಕರ ಅನುಕೂಲಕ್ಕಾಗಿ 30 ಸೀಟರ್-ಕಮ್-ಸ್ಲೀಪರ್ (Seater-Cum-Sleeper) ಹಾಗೂ 70 ನಾನ್-ಎಸಿ ಸ್ಲೀಪರ್ (Non-AC Sleeper) ಬಸ್‌ಗಳನ್ನು ಖರೀದಿಸಲು ಟೆಂಡರ್ ಕರೆದಿದೆ ಎಂದು ತಿಳಿದುಬಂದಿದೆ. ವಿಶೇಷವಾಗಿ ಇದೇ ಮೊದಲ ಬಾರಿಗೆ ಕೆಎಸ್‌ಆರ್‌ಟಿಸಿ ಸೀಟರ್-ಕಮ್-ಸ್ಲೀಪರ್ ಬಸ್‌ಗಳನ್ನು ಬಿಡಲು ಮುಂದಾಗಿದೆ.
ಈ ಬಗ್ಗೆ ಖಾಸಗಿ ಮಧ್ಯಮದೊಂದಿಗೆ ಮಾತನಾಡಿರುವ ಕೆಎಸ್‌ಆರ್‌ಟಿಸಿಯ ಹಿರಿಯ ಅಧಿಕಾರಿಯೊಬ್ಬರು, 'ನಾವು ಸೀಟರ್-ಕಮ್-ಸ್ಲೀಪರ್ ಬಸ್‌ಗಳನ್ನು ಇದೇ ಮೊದಲ ಬಾರಿಗೆ ಪರಿಚಯಿಸುತ್ತಿದ್ದೇವೆ. ಈಗಾಗಲೇ, ಬೇರೆ ರಾಜ್ಯಗಳ ಸಾರಿಗೆ ನಿಗಮಗಳು ಹಾಗೂ ಖಾಸಗಿ ಟ್ರಾವೆಲ್ಸ್‌ಗಳು ಇಂತಹ ಬಸ್‌ಗಳನ್ನು ಓಡಿಸುತ್ತಿವೆ. ನಮ್ಮ ಪ್ರಯಾಣಿಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎಂಬುದನ್ನು ತಿಳಿಯಲು ಆರಂಭದಲ್ಲಿ 30 ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಲಿದ್ದೇವೆ' ಎಂದು ಹೇಳಿದ್ದಾರೆ.

ನೂತನ ಸೀಟರ್-ಕಮ್-ಸ್ಲೀಪರ್ ಬಸ್‌ಗಳ ಪ್ರಾಯೋಗಿಕ ಸಂಚಾರ ಶುರುವಾದ ಬಳಿಕ, ಕೆಎಸ್‌ಆರ್‌ಟಿಸಿಯ ತಾಂತ್ರಿಕ ಪರಿಣಿತರ ಸಮಿತಿಯು ಒಂದು ತಿಂಗಳೊಳಗೆ ವರದಿಯನ್ನು ನೀಡಲಿದೆ. ಫಲಿತಾಂಶಗಳು ತೃಪ್ತಿಕರವಾಗಿದ್ದರೆ, ಸಾರಿಗೆ ಸಂಸ್ಥೆಯು ಮತ್ತಷ್ಟು ಬಸ್‌ಗಳನ್ನು ಖರೀದಿ ಮಾಡಲಿದೆ. ಒಂದೊಮ್ಮೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣದಿದ್ದರೆ, ಈ ಬಸ್‌ಗಳ ಖರೀದಿಸುವ ಆದೇಶವನ್ನು ರದ್ದುಪಡಿಸಬಹುದು ಎಂದು ವರದಿಯಾಗಿದೆ.
ಈ ಸೀಟರ್-ಕಮ್-ಸ್ಲೀಪರ್ ಬಸ್‌ಗಳಲ್ಲಿ ಪ್ರಯಾಣಿಕರು ಆರಾಮದಾಯಕವಾಗಿ ತೆರಳಲು ಹಲವು ಸೌಕರ್ಯಗಳನ್ನು ಕೂಡ ಒದಗಿಸಲಾಗುತ್ತದೆ. ಮೊಬೈಲ್ ಮತ್ತು ಲ್ಯಾಪ್‌ಟಾಪ್ ಚಾರ್ಜಿಂಗ್ ಪೋರ್ಟ್‌ಗಳು, ಮೊಬೈಲ್ ಹೋಲ್ಡರ್, ಎಲ್‌ಇಡಿ ರೀಡಿಂಗ್ ಲೈಟ್‌ಗಳು, ಆಡಿಯೋ ಸ್ಪೀಕರ್‌ಗಳು ಹಾಗೂ ದಿಂಬು (pillows)ಗಳನ್ನು ಪಡೆದಿರಲಿವೆ. ಸುರಕ್ಷತೆಗೂ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದ್ದು, ಚಾಲಕನಿಗೆ ನೆರೆವಾಗಲು ಹಿಂಬದಿ (ರೇರ್) ಕ್ಯಾಮೆರಾವನ್ನು ಅಳವಡಿಸಲಾಗಿರುತ್ತದೆ.

2023ರ ಅಕ್ಟೋಬರ್‌ನಲ್ಲಿ ಕೆಎಸ್‌ಆರ್‌ಟಿಸಿ 'ಪಲ್ಲಕ್ಕಿ' ಹೆಸರಿನ 40 ನಾನ್-ಎಸಿ ಸ್ಲೀಪರ್ ಬಸ್‌ಗಳನ್ನು ಪರಿಚಯಿಸಿತ್ತು. ಈ ಬಸ್‌ಗಳು ಬೆಂಗಳೂರಿಂದ ರಾಜ್ಯದ ಪ್ರಮುಖ ನಗರಗಳು ಹಾಗೂ ಹೊರ ರಾಜ್ಯಗಳನ್ನು ಸಂಪರ್ಕಿಸುತ್ತಿದ್ದು, 500 ಕಿ.ಮೀ ದೂರದ ಮಾರ್ಗದಲ್ಲಿ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಸಾರ್ವಜನಿಕರಿಗೂ ರಾತ್ರಿ ವೇಳೆಯಲ್ಲಿ ಆರಾಮದಾಯಕ ಪ್ರಯಾಣವನ್ನು ಒದಗಿಸುತ್ತಿದ್ದು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ನೀಡುವ ಉದ್ದೇಶದಿಂದ ಸ್ಪೆಷಲ್ ಫೈರ್ ಡಿಟೆಕ್ಷನ್ (ವಿಶೇಷ ಅಗ್ನಿ ಪತ್ತೆ) ವ್ಯವಸ್ಥೆಯನ್ನು ಪಡೆದಿದೆ.
ಕೆಎಸ್‌ಆರ್‌ಟಿಸಿಯು 1,000 ಪ್ರೀಮಿಯಂ ಸೇರಿದಂತೆ ಒಟ್ಟು 8,234 ಬಸ್‌ಗಳನ್ನು ಓಡಿಸುತ್ತಿದೆ. ಪ್ರತಿದಿನ 7,000 ಕಿಲೋಮೀಟರ್ ಕಾರ್ಯಾಚರಣೆ ನಡೆಸುವ ಸಾರಿಗೆ ಸಂಸ್ಥೆ ಬಸ್‌ಗಳು, 23 ಲಕ್ಷ ಪ್ರಯಾಣಿಕರನ್ನು ಸುರಕ್ಷಿತವಾಗಿ ನಿರ್ದಿಷ್ಟ ಗಮ್ಯ ಸ್ಥಾನವನ್ನು ತಲುಪಿಸುತ್ತವೆ. ಕೆಎಸ್‌ಆರ್‌ಟಿಸಿ ಐರಾವತ, ಫ್ಲೈಬಸ್, ಐರಾವತ ಕ್ಲಬ್ ಕ್ಲಾಸ್, ಅಂಬಾರಿ, ಅಂಬಾರಿ ಉತ್ಸವ್, ಪಲ್ಲಕ್ಕಿ ಹಾಗೂ ರಾಜಹಂಸದಂತಹ ಬಸ್‌ಗಳನ್ನು ಹೊಂದಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್‌ಗಳು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರದಿಂದ ಕಾರ್ಯಾಚರಣೆಯನ್ನು ನಡೆಸುತ್ತವೆ. ರಾಜ್ಯ ಹಾಗೂ ಹೊರ ರಾಜ್ಯದ ಹಲವು ನಗರಗಳಿಗೂ ಸಂಪರ್ಕವನ್ನು ಕಲ್ಪಿಸುತ್ತಿದ್ದು, ಸರಿ ಸುಮಾರು 34,904 ಸಿಬ್ಬಂದಿಗಳು ಹಗಲು-ರಾತ್ರಿ ದುಡಿಯುತ್ತಿದ್ದಾರೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications