ಅಟಲ್ ಸುರಂಗಕ್ಕಾಗಿ ವಿಶೇಷ ನಿಯಮಗಳನ್ನು ಜಾರಿಗೊಳಿಸಿದ ಕುಲು ಪೊಲೀಸರು
ಹತ್ತು ವರ್ಷಗಳಿಂದ ನಿರ್ಮಾಣ ಹಂತದಲ್ಲಿದ್ದ ವಿಶ್ವದ ಅತಿ ಉದ್ದದ ಅಟಲ್ ಸುರಂಗವನ್ನು ಅಕ್ಟೋಬರ್ 3ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸುರಂಗವು ಮನಾಲಿ, ಹಿಮಾಚಲ ಪ್ರದೇಶ ಹಾಗೂ ಲಡಾಖ್‌ನ ಲೇಹ್ ಪ್ರದೇಶಗಳನ್ನು ಸಂಪರ್ಕಿಸುತ್ತದೆ.

ಈ ಪ್ರದೇಶಗಳ ಜನರ ಬಹು ಕಾಲದ ಕನಸು ಅಟಲ್ ಸುರಂಗದ ಉದ್ಘಾಟನೆ ಮೂಲಕ ನನಸಾಗಿದೆ. ಆದರೆ ಸುರಂಗ ಮಾರ್ಗವು ಸಾರ್ವಜನಿಕರ ಬಳಕೆಗೆ ತೆಗೆದುಕೊಂಡ ಕೆಲವೇ ದಿನಗಳಲ್ಲಿ ಅಪಘಾತಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಈ ಸುರಂಗ ಮಾರ್ಗಕ್ಕಾಗಿ ಕೆಲವು ವಿಶೇಷ ನಿಯಮಗಳನ್ನು ಜಾರಿಗೆ ತರಲಾಗಿದೆ.

ಈ ಸುರಂಗದಲ್ಲಿ ಸಂಭವಿಸುವ ಅಪಘಾತಗಳಿಗೆ ವಾಹನಗಳ ವೇಗವು ಸಹ ಪ್ರಮುಖ ಕಾರಣವಾಗಿದೆ. ಈ ಕಾರಣಕ್ಕೆ ಸುರಂಗದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಸ್ಪೀಡ್ ಡಿಟೆಕ್ಟರ್ ಮೂಲಕ ವಾಹನಗಳ ವೇಗವನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ.
MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್

ಈ ಸುರಂಗದಲ್ಲಿನ ಗರಿಷ್ಠ ವೇಗದ ಮಿತಿಯನ್ನು ಗಂಟೆಗೆ 80 ಕಿ.ಮೀಗಳಿಗೆ ನಿಗದಿಪಡಿಸಲಾಗಿದೆ. ಈ ಮಿತಿಯನ್ನು ಉಲ್ಲಂಘಿಸಿದವರಿಗೆ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಕುಲು ಜಿಲ್ಲಾ ಪೊಲೀಸರು ಈ ಸುರಂಗದಲ್ಲಿ ವಾಹನಗಳ ನಿಲುಗಡೆ ಹಾಗೂ ಸೆಲ್ಫಿ ತೆಗೆದುಕೊಳ್ಳುವುದನ್ನು ನಿಷೇಧಿಸಿದ್ದಾರೆ.

ಈ ಸುರಂಗದಲ್ಲಿ ಸಂಭವಿಸಿದ ಅಪಘಾತಗಳಿಗೆ ಸೆಲ್ಫಿ ಹಾಗೂ ಫೋಟೋಗಳೂ ಸಹ ಕಾರಣವಾಗಿವೆ. ಹೊಸ ನಿಯಮದನ್ವಯ ಸುರಂಗದ 200 ಮೀಟರ್ ಒಳಗೆ ಫೋಟೋ ತೆಗೆಯುವುದನ್ನು ಹಾಗೂ ವೀಡಿಯೊ ರೆಕಾರ್ಡ್ ಮಾಡುವುದನ್ನು ನಿಷೇಧಿಸಲಾಗಿದೆ.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ಈ ಹೊಸ ನಿಯಮಗಳಿಗೆ ಕುಲು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ರಿಚಾ ವರ್ಮಾ ಅನುಮೋದನೆ ನೀಡಿದ್ದಾರೆ. ಹೊಸ ನಿಯಮದಡಿಯಲ್ಲಿ ವೇಗವಾಗಿ ಚಲಿಸಿ ಇತರ ವಾಹನಗಳನ್ನು ಓವರ್ ಟೇಕ್ ಮಾಡುವುದು ಹಾಗೂ ಸುರಂಗದೊಳಗೆ ವಾಹನಗಳನ್ನು ನಿಲುಗಡೆ ಮಾಡುವುದನ್ನು ಸಹ ನಿಷೇಧಿಸಲಾಗಿದೆ.

ಈ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು. ಸುರಂಗದಲ್ಲಿನ ಸುರಕ್ಷತೆಯ ಮೇಲ್ವಿಚಾರಣೆಗಾಗಿ 30ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಮನಾಲಿ-ಲೇಹ್ ರಸ್ತೆಯಲ್ಲಿನ ಅಪಾಯವನ್ನು ಕಡಿಮೆ ಮಾಡಲು ಅಟಲ್ ಸುರಂಗವನ್ನು ನಿರ್ಮಿಸಲಾಗಿದೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಆದರೆ ವಾಹನ ಸವಾರರು ನಿಯಮಗಳನ್ನು ಉಲ್ಲಂಘಿಸುತ್ತಿರುವ ಕಾರಣ ಅಪಘಾತಗಳುಂಟಾಗಿ ಟ್ರಾಫಿಕ್ ದಟ್ಟಣೆ ಉಂಟಾಗುತ್ತಿದೆ. ಈಗ ಅಪಘಾತಗಳನ್ನು ತಡೆಯುವ ಸಲುವಾಗಿಯೇ ಈ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ.

ಅಟಲ್ ಸುರಂಗದ ಬಗ್ಗೆ ಆಸಕ್ತಿದಾಯಕ ಸಂಗತಿಗಳು:
ಈ ಸುರಂಗದ ಮೂಲಕ ಪ್ರಯಾಣಿಸಿದರೆ 46 ಕಿ.ಮೀಗಳ ಹೆಚ್ಚುವರಿ ಪ್ರಯಾಣವನ್ನು ಕಡಿಮೆ ಮಾಡಬಹುದು. ಜೊತೆಗೆ 5 ಗಂಟೆಗಳ ಸಮಯ ಉಳಿತಾಯವಾಗುತ್ತದೆ. ವಿಶ್ವದ ಅತಿ ಉದ್ದದ ಅಟಲ್ ಸುರಂಗವು 9 ಕಿ.ಮೀ ಉದ್ದವಿದೆ. ಈ ಸುರಂಗವು ಸಮುದ್ರ ಮಟ್ಟದಿಂದ 10 ಸಾವಿರ ಅಡಿ ಎತ್ತರದಲ್ಲಿದೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಎಲ್ಲಾ ರೀತಿಯ ಹವಾಮಾನವನ್ನು ತಡೆದುಕೊಳ್ಳುವಂತೆ ಈ ಸುರಂಗವನ್ನು ವಿನ್ಯಾಸಗೊಳಿಸಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಉಂಟಾಗುವ ಹಿಮಪಾತದ ಸಂದರ್ಭದಲ್ಲಿಯೂ ಈ ಸುರಂಗವನ್ನು ಬಳಸಬಹುದಾದ ರೀತಿಯಲ್ಲಿ ನಿರ್ಮಿಸಲಾಗಿದೆ. ಈ ಸುರಂಗದಲ್ಲಿ ದಿನಕ್ಕೆ 3 ಸಾವಿರದಿಂದ 5 ಸಾವಿರ ವಾಹನಗಳು ಸಂಚರಿಸಬಹುದು.

ಈ ಸುರಂಗದಲ್ಲಿ ನಿರಂತರ ಇಂಟರ್ ನೆಟ್ ಸೌಲಭ್ಯವನ್ನು ಒದಗಿಸಲು 4 ಜಿ ತಂತ್ರಜ್ಞಾನದ ಆಂಟೆನಾಗಳನ್ನು ಅಳವಡಿಸಲಾಗಿದೆ. ಜೊತೆಗೆ ಭದ್ರತೆಗಾಗಿ ಸಿಸಿಟಿವಿ ಕ್ಯಾಮೆರಾ ಹಾಗೂ ಅಗ್ನಿಶಾಮಕಗಳನ್ನು ಅಳವಡಿಸಲಾಗಿದೆ.


Click it and Unblock the Notifications