Just In
- 32 min ago
ಭಾರತದ ನಂತರ ಜಪಾನ್ ಮಾರುಕಟ್ಟೆಯಲ್ಲೂ ಬಿಡುಗಡೆಯಾಗುತ್ತಿದೆ ಹೋಂಡಾ ಹೈನೆಸ್ ಸಿಬಿ 350
- 10 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 12 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 12 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
Don't Miss!
- News
ಬೈಡನ್ ಪದಗ್ರಹಣಕ್ಕೆ ಸಕಲ ಸಿದ್ಧತೆ, ಮದುಮಗಳಂತೆ ಸಿಂಗಾರಗೊಳ್ಳುತ್ತಿದೆ ಸಂಸತ್
- Movies
ಸುದೀಪ್ ಜೊತೆ ಸಿನಿಮಾ: ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, Live ಸ್ಕೋರ್: ಭಾರತದ ಆರಂಭಿಕ ವಿಕೆಟ್ ಪತನ
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಲಾಕ್‌ಡೌನ್ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ದಂಡ ತೆತ್ತ ವಾಹನ ಸವಾರರು
ಕರೋನಾ ವೈರಸ್ ಹರಡುವುದನ್ನು ತಡೆಯಲು ಮಾರ್ಚ್ 24ರಂದು ದೇಶಾದ್ಯಂತ ಲಾಕ್‌ಡೌನ್ ಜಾರಿಗೊಳಿಸಲಾಯಿತು. ಲಾಕ್‌ಡೌನ್ ಜಾರಿಗೊಳಿಸಿದ ಬಳಿಕ ಆಟೋ, ಟ್ಯಾಕ್ಸಿ, ಬಸ್ ಸೇರಿದಂತೆ ಎಲ್ಲಾ ರೀತಿಯ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು.

ದ್ವಿಚಕ್ರ ವಾಹನ ಹಾಗೂ ಕಾರುಗಳ ಸಂಚಾರಕ್ಕೆ ಹಲವು ಷರತ್ತುಗಳೊಂದಿಗೆ ಅನುಮತಿ ನೀಡಲಾಯಿತು. ಈ ಷರತ್ತುಗಳನ್ನು ಉಲ್ಲಂಘಿಸಿ ರಸ್ತೆಗಿಳಿದ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಯಿತು. ವಾಹನಗಳ ಮಾಲೀಕರಿಗೆ ದಂಡ ವಿಧಿಸಲಾಯಿತು. ಇನ್ನು ಕೆಲವೆಡೆ ವಾಹನಗಳ ಮಾಲೀಕರನ್ನು ಬಂಧಿಸಲಾಯಿತು. ಮೇ ತಿಂಗಳ ಮೊದಲ ವಾರದಲ್ಲಿ ಲಾಕ್‌ಡೌನ್ ಸಡಿಲಿಸಲಾಯಿತು.

ಹಲವು ನಿರ್ಬಂಧಗಳೊಂದಿಗೆ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಯಿತು. ಆದರೆ ತಮಿಳುನಾಡಿನಲ್ಲಿ ಲಾಕ್ ಡೌನ್ ಇನ್ನೂ ಸಹ ಜಾರಿಯಲ್ಲಿದೆ. ಈ ಲಾಕ್ ಡೌನ್ ಆಗಸ್ಟ್ 31ರವರೆಗೆ ಜಾರಿಯಲ್ಲಿರಲಿದೆ. ಈ ಕಾರಣಕ್ಕೆ ಅಲ್ಲಿನ ಪೊಲೀಸರು ಇನ್ನು ಸಹ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
MOST READ:ಒಂದು ಸಾವಿರ ರೂಪಾಯಿ ಪಾವತಿಸಿ ಈ ಸ್ಕೂಟರ್ ಬುಕ್ ಮಾಡಿ

ತಮಿಳುನಾಡಿನಲ್ಲಿ ಅನಗತ್ಯವಾಗಿ ಸಂಚರಿಸುವ ವಾಹನಗಳು ಹಾಗೂ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಮಾರ್ಚ್ 24ರಿಂದ ಆಗಸ್ಟ್ 11ವರೆಗಿನ 140 ದಿನಗಳಲ್ಲಿ ಕೈಗೊಂಡ ಕ್ರಮಗಳ ಮಾಹಿತಿಯನ್ನು ಈಗ ಬಿಡುಗಡೆಗೊಳಿಸಲಾಗಿದೆ.

ಕಳೆದ 140 ದಿನಗಳಲ್ಲಿ ಒಟ್ಟು 8,67,158 ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಇದು ಕೇವಲ ತಮಿಳುನಾಡಿನಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆಯಾಗಿದೆ. ನಿಯಮ ಉಲ್ಲಂಘಿಸಿದ 9,57,743 ಜನರನ್ನು ಪೊಲೀಸರು ಬಂಧಿಸಿದ್ದಾರೆ.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಬಂಧಿತರನ್ನು ವೈಯಕ್ತಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ಪೊಲೀಸರು ಬಂಧಿತರಿಂದ 6,77,629 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಕಳೆದ 140 ದಿನಗಳಲ್ಲಿ ತಮಿಳುನಾಡು ಪೊಲೀಸರು ನಿಯಮಗಳನ್ನು ಉಲ್ಲಂಘಿಸಿದವರಿಂದ ಒಟ್ಟು ರೂ.20.16 ಕೋಟಿ ದಂಡ ವಸೂಲಿ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಅಂತರ್ ಜಿಲ್ಲೆ ಪ್ರಯಾಣಕ್ಕೆ ಇನ್ನೂ ಹಲವಾರು ನಿರ್ಬಂಧಗಳಿವೆ. ಇ-ಪಾಸ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿರುವುದರಿಂದ, ಜನರು ಅಗತ್ಯ ಕಾರ್ಯಗಳಿದ್ದರೂ ಸಹ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಇದರಿಂದಾಗಿ ಇ-ಪಾಸ್ ವ್ಯವಸ್ಥೆಯನ್ನು ಹಿಂಪಡೆಯಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಆದರೆ ತಮಿಳುನಾಡು ಸರ್ಕಾರ ಇನ್ನೂ ಇ-ಪಾಸ್ ವ್ಯವಸ್ಥೆಯನ್ನು ಹಿಂಪಡೆದಿಲ್ಲ.

ಈ ಮೊದಲು ಆಗಸ್ಟ್ 1ರಿಂದ ಬಸ್‌ಗಳ ಸಂಚಾರಕ್ಕೆ ಅವಕಾಶ ನೀಡಬಹುದು ಎಂಬ ನಿರೀಕ್ಷೆ ತಮಿಳುನಾಡಿನ ಜನರಲ್ಲಿ ಮನೆಮಾಡಿತ್ತು. ಆದರೆ ಇದುವರೆಗೂ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಿಲ್ಲ. ತಮಿಳುನಾಡಿನಲ್ಲಿ ಎಂದಿನಿಂದ ಬಸ್ ಸಂಚಾರ ಆರಂಭವಾಗಲಿದೆ ಎಂಬುದು ಇನ್ನೂ ಖಚಿತವಾಗಿಲ್ಲ.
ಗಮನಿಸಿ: ಈ ಲೇಖನದಲ್ಲಿ ಸಾಂದರ್ಭಿಕ ಚಿತ್ರಗಳನ್ನು ಬಳಸಲಾಗಿದೆ.