Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇನ್ಮುಂದೆ ದಂಡದ ಬದಲಿಗೆ ಬೀಳಲಿದೆ ಎಫ್‍ಐಆರ್
ಸೆಪ್ಟೆಂಬರ್ 1ರಿಂದ ಜಾರಿಗೆ ಬಂದಿರುವ ಹೊಸ ಮೋಟಾರು ವಾಹನ ಕಾಯ್ದೆಯಲ್ಲಿನ ಭಾರೀ ಪ್ರಮಾಣದ ದಂಡಕ್ಕೆ ಹೆದರಿ ವಾಹನ ಸವಾರರು ಕಂಗಾಲಾಗಿದ್ದಾರೆ. ಈ ಭಾರೀ ಪ್ರಮಾಣದ ದಂಡದ ಆಘಾತದಿಂದ ಹೊರಬರದ ವಾಹನ ಸವಾರರ ಮೇಲೆ ಮತ್ತೊಂದು ಪ್ರಹಾರ ನೀಡಲು ಪೊಲೀಸ್ ಇಲಾಖೆ ಮುಂದಾಗಿದೆ.

ಈ ಮೊದಲು ನಂಬರ್ ಪ್ಲೇಟ್ ಇಲ್ಲದೇ ವಾಹನ ಸವಾರಿ ಮಾಡುತ್ತಿದ್ದವರಿಗೆ ದಂಡ ವಿಧಿಸಲಾಗುತ್ತಿತ್ತು. ಪಂಜಾಬ್‍ನ ಲೂಧಿಯಾನ ಪೊಲೀಸ್ ಕಮೀಷನರ್ ಹೊರಡಿಸಿರುವ ಹೊಸ ಆದೇಶದ ಪ್ರಕಾರ, ನಂಬರ್ ಪ್ಲೇಟ್ ಹೊಂದಿಲ್ಲದೇ ವಾಹನ ಸವಾರಿ ಮಾಡುವವರಿಗೆ ಹೊಸ ಮೋಟಾರು ವಾಹನ ಕಾಯ್ದೆಯನ್ವಯ ಇನ್ನು ಮುಂದೆ ಜೈಲು ಶಿಕ್ಷೆ ವಿಧಿಸಲಾಗುವುದು.

ಲೂಧಿಯಾನದ ಪೊಲೀಸ್ ಕಮೀಷನರ್ ರಾಕೇಶ್ ಅಗರ್‍ವಾಲ್‍ರವರು ಈ ಆದೇಶವನ್ನು ಹೊರಡಿಸಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ಸರಗಳ್ಳತನ, ರಾಬರಿ ಮುಂತಾದ ಕಾನೂನು ಬಾಹಿರ ಕೃತ್ಯಕ್ಕೆ ಬಳಸಲಾಗುತ್ತಿದ್ದು, ಕ್ರಿಮಿನಲ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.

ಸಿಆರ್‍ಪಿಸಿ ಸೆಕ್ಷನ್ 144ರ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಹೊರಡಿಸಿದ ಆದೇಶಕ್ಕೆ ಅಗೌರವ ತೋರುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು.

ಇದರನ್ವಯ ಆರೋಪಿಗಳಿಗೆ ಒಂದು ತಿಂಗಳಿನಿಂದ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು. ಈ ಬಗ್ಗೆ ಮಾತನಾಡಿರುವ ರಾಕೇಶ್ ಅಗರ್‍ವಾಲ್‍ರವರು, ಲೂಧಿಯಾನ ನಗರದಲ್ಲಿ ನಡೆದಿರುವ ಅನೇಕ ಅಪರಾಧ ಕೃತ್ಯಗಳನ್ನು ಗಮನಿಸಿದ ನಂತರ, ಬಹುತೇಕ ಪ್ರಕರಣಗಳಲ್ಲಿ ಬಳಕೆಯಾದ ವಾಹನಗಳಲ್ಲಿ ನಂಬರ್ ಪ್ಲೇಟ್ ಇಲ್ಲದೇ ಇರುವುದು ತನಿಖೆಯಿಂದ ಕಂಡು ಬಂದಿದೆ.

ಇದರಿಂದಾಗಿ ಪೊಲೀಸರ ತನಿಖೆಯ ಮೇಲೂ ಪರಿಣಾಮಗಳಾಗುತ್ತವೆ. ಇದನ್ನು ತಡೆಗಟ್ಟಲು ಕಠಿಣ ಕ್ರಮದ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಈ ಹಿಂದೆ ಹೊಸ ಕಾಯ್ದೆಯನ್ವಯ ನಂಬರ್ ಪ್ಲೇಟ್ ಹೊಂದಿಲ್ಲದ ವಾಹನಗಳಿಗೆ ರೂ.1,000ದಿಂದ ರೂ.2,000ಗಳವರೆಗೆ ದಂಡ ವಿಧಿಸಲಾಗುತ್ತಿತ್ತು.

ಮುಂಬರುವ ದಿನಗಳಲ್ಲಿ ನಕಲಿ ನಂಬರ್ ಪ್ಲೇಟ್ ಹೊಂದಿ ವಾಹನಗಳನ್ನು ಚಲಾಯಿಸುವವರ ಮೇಲೆ ಕ್ರಮ ಕೈಗೊಳ್ಳಲಾಗುವುದೆಂದು ರಾಕೇಶ್ ಅಗರ್‍ವಾಲ್‍ರವರು ತಿಳಿಸಿದರು. ಸೆಪ್ಟೆಂಬರ್ 25ರಂದು ನಕಲಿ ನಂಬರ್ ಪ್ಲೇಟ್ ಹೊಂದಿದ್ದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಡುಗ್ರಿಯಲ್ಲಿನ ಇಮಿಗ್ರೇಷನ್ ಕಚೇರಿಯ ಮೇಲೆ ಗುಂಡಿನ ದಾಳಿ ನಡೆಸಿದ್ದರು.
MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್

ಡಿಟೆಕ್ಟಿವ್ ವಿಭಾಗದ ಸಹಾಯಕ ಕಮೀಷನರ್ ಸುರಿಂದರ್ ಮೋಹನ್‍ರವರು ಮಾತನಾಡಿ, ಸರಗಳ್ಳರು ಹಾಗೂ ದರೋಡೆಕೋರರು ನಂಬರ್ ಹೊಂದಿಲ್ಲದ ವಾಹನಗಳನ್ನು ತಮ್ಮ ಕೃತ್ಯಕ್ಕಾಗಿ ಬಳಸುತ್ತಿದ್ದಾರೆ.
MOST READ: ಸದ್ದಿಲ್ಲದೇ ಕಾರುಗಳನ್ನು ರಿಕಾಲ್ ಮಾಡುತ್ತಿದೆ ಮಾರುತಿ

ಕಾನೂನು ಬಾಹಿರ ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗುತ್ತಿದ್ದರೂ, ನಕಲಿ ನಂಬರ್ ಪ್ಲೇಟ್ ಅಥವಾ ನಂಬರ್ ಪ್ಲೇಟ್ ಇಲ್ಲದ ವಾಹನಗಳಾದ ಕಾರಣಕ್ಕೆ ಅವರನ್ನು ಪತ್ತೆ ಮಾಡುವುದಕ್ಕೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು.
MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!

ಈ ಹೊಸ ಕಾಯ್ದೆಯನ್ವಯ ತಪ್ಪಿತಸ್ಥರಿಗೆ ಒಂದು ತಿಂಗಳಿನಿಂದ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸುವುದರ ಜೊತೆಗೆ ರೂ.200 ದಂಡ ವಿಧಿಸಲಾಗುವುದು. ಈ ದಂಡದ ಮೊತ್ತವನ್ನು ರೂ.1,000ದವರೆಗೆ ವಿಸ್ತರಿಸಬಹುದಾಗಿದೆ.

ನಂಬರ್ ಪ್ಲೇಟ್ ಇಲ್ಲದೇ ವಾಹನಗಳನ್ನು ಚಲಾಯಿಸುವವರ ಮೇಲೆ ಎಫ್‍ಐಆರ್ ದಾಖಲಿಸುವ ಆದೇಶವನ್ನು ಲೂಧಿಯಾನ ಪೊಲೀಸ್ ಕಮೀಷನರ್ ಹೊರಡಿಸಿದ್ದಾರೆ. ಇದೇ ರೀತಿಯ ಆದೇಶವನ್ನು ಬೇರೆ ಯಾವ ರಾಜ್ಯಗಳಲ್ಲಿ ಹೊರಡಿಸಲಾಗುವುದು ಎಂಬುದನ್ನು ಕಾದು ನೋಡಬೇಕಿದೆ.